ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಳೆ ವಾಹನ ಗುಜರಿಗೆ ಹಾಕುವವರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ

|
Google Oneindia Kannada News

ನವದೆಹಲಿ, ಮಾರ್ಚ್ 7: ತಮ್ಮ ಹಳೆ ವಾಹನಗಳನ್ನು ಗುಜರಿಗೆ ಹಾಕುವವರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರ ಜಾರಿಗೆ ತರಲಿರುವ ವಾಹನ ಗುಜರಿ ನೀತಿ ಅಡಿ ಹಳೆಯ ವಾಹನಗಳನ್ನು ಗುಜರಿಗೆ ಹಾಕಿ ಹೊಸ ವಾಹನ ಖರೀದಿಸುವವರಿಗೆ ಆಟೊ ಮೇಕರ್‌ಗಳಿಂದ 5%ರಷ್ಟು ವಿನಾಯಿತಿ ಸಿಗಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಳೆದ ತಿಂಗಳು ಮಂಡಿಸಿದ ಕೇಂದ್ರ ಬಜೆಟ್ 2021ರಲ್ಲಿ ಸ್ವಯಂ ಪ್ರೇರಿತ ವಾಹನ ಗುಜರಿ ನೀತಿಯನ್ನು ಪ್ರಕಟಿಸಲಾಗಿತ್ತು. ಖಾಸಗಿ ವಾಹನಗಳಿಗೆ 20 ವರ್ಷಗಳ ಬಳಿಕ ಹಾಗೂ ವಾಣಿಜ್ಯ ವಾಹನಗಳಿಗೆ 15 ವರ್ಷದ ನಂತರ ಫಿಟ್ನೆಸ್ ಪರೀಕ್ಷೆ ನಡೆಸಬೇಕು ಎಂದು ಈ ನೀತಿ ಹೇಳಿದೆ.

ಹಳೇ ವಾಹನ ಗುಜರಿಗೆ ಹಾಕಿ ಹೊಸತು ಕೊಳ್ಳುವವರಿಗೆ ಕೊಡುಗೆ?ಹಳೇ ವಾಹನ ಗುಜರಿಗೆ ಹಾಕಿ ಹೊಸತು ಕೊಳ್ಳುವವರಿಗೆ ಕೊಡುಗೆ?

'ಈ ನೀತಿಯಡಿ ಹಳೆಯ ವಾಹನವನ್ನು ಗುಜರಿಗೆ ಹಾಕಿದವರಿಗೆ ಆಟೊಮೊಬೈಕ್ ತಯಾರಕರು ಹೊಸ ಕಾರುಗಳ ಖರೀದಿ ಮೇಲೆ ಶೇ 5ರಷ್ಟು ವಿನಾಯಿತಿ ನೀಡಲಿದ್ದಾರೆ' ಎಂದು ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.

Junk Old Car Under Vehicle Scrapping Policy, Get 5 Percent Rebate On New Purchase: Gadkari

'ಈ ನೀತಿಯಲ್ಲಿ ನಾಲ್ಕು ಪ್ರಮುಖ ಅಂಶಗಳು ಇವೆ. ವಿನಾಯಿತಿಯ ಆಚೆಗೆ, ಹಸಿರು ತೆರಿಗೆಗಳು ಮತ್ತು ಹಳೆಯ ಮಾಲಿನ್ಯಕಾರಕ ವಾಹನಗಳ ಮೇಲೆ ಇತರೆ ಸುಂಕಗಳನ್ನು ವಿಧಿಸುವ ನಿಯಮಗಳು ಇವೆ. ಹಳೆಯ ವಾಹನಗಳು ಸ್ವಯಂಚಾಲಿತ ಸೌಲಭ್ಯ ಕೇಂದ್ರಗಳಲ್ಲಿ ಫಿಟ್ನೆಸ್ ಹಾಗೂ ಮಾಲಿನ್ಯ ಪರೀಕ್ಷೆಗೆ ಒಳಪಡುವುದು ಕಡ್ಡಾಯವಾಗಲಿದೆ. ಇದಕ್ಕಾಗಿ ದೇಶದೆಲ್ಲೆಡೆ ಫಿಟ್ನೆಸ್ ಕೇಂದ್ರಗಳನ್ನು ಸ್ಥಾಪಿಸಬೇಕಿದ್ದು, ಆ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ' ಎಂದು ಹೇಳಿದ್ದಾರೆ.

ಕೇಂದ್ರದ ಗುಜರಿ ನೀತಿ: ದುಬಾರಿಯಾಗಲಿದೆ ಹಳೆ ವಾಹನಗಳ ಬಳಕೆ, ಜನಸಾಮಾನ್ಯರಿಗೆ ಮತ್ತೊಂದು ಬರೆಕೇಂದ್ರದ ಗುಜರಿ ನೀತಿ: ದುಬಾರಿಯಾಗಲಿದೆ ಹಳೆ ವಾಹನಗಳ ಬಳಕೆ, ಜನಸಾಮಾನ್ಯರಿಗೆ ಮತ್ತೊಂದು ಬರೆ

ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಸ್ವಯಂಚಾಲಿತ ಫಿಟ್ನೆಸ್ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಸ್ಕ್ರಾಪಿಂಗ್ ಕೇಂದ್ರಗಳಿಗಾಗಿ ಖಾಸಗಿ ಪಾಲುದಾರರು ಮತ್ತು ರಾಜ್ಯ ಸರ್ಕಾರಗಳಿಗೆ ಸರ್ಕಾರ ಸಹಾಯ ಮಾಡಲಿದೆ. ಸ್ವಯಂಚಾಲಿತ ಪರೀಕ್ಷೆಗಳಲ್ಲಿ ಉತ್ತೀರ್ಣವಾಗಲು ವಿಫಲವಾಗುವ ವಾಹನಗಳಿಗೆ ಭಾರಿ ದಂಡ ವಿಧಿಸಲಾಗುತ್ತದೆ ಮತ್ತು ವಶಕ್ಕೆ ಪಡೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

English summary
Union Minister Nitin Gadkari says, consumer who are going to junk their old vehicles and buy a new one will get about 5% rebate from automakers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X