ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಸಿಐ ತನಿಖೆ ಪ್ರಶ್ನಿಸಿದ್ದ ಫ್ಲಿಪ್‌ಕಾರ್ಟ್, ಅಮೆಜಾನ್‌ ಅರ್ಜಿ ವಜಾ

|
Google Oneindia Kannada News

ಬೆಂಗಳೂರು, ಜೂನ 11: ಭಾರತ ಸ್ಪರ್ಧಾ ಆಯೋಗದ (ಸಿಸಿಐ) ತನಿಖೆ ಪ್ರಶ್ನಿಸಿ ಇ- ಕಾಮರ್ಸ್‌ ಸಂಸ್ಥೆಗಳಾದ ಅಮೆಜಾನ್‌ ಮತ್ತು ಫ್ಲಿಪ್‌ಕಾರ್ಟ್‌ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರದಂದು ವಜಾಗೊಳಿಸಿದೆ. ಸ್ಪರ್ಧಾ ಕಾಯಿದೆ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಸಿಸಿಐ ಈ ಎರಡೂ ಕಂಪೆನಿಗಳ ವಿರುದ್ಧ ತನಿಖೆಗೆ ಮುಂದಾಗಿತ್ತು. ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿರುವುದಾಗಿ ನ್ಯಾಯಮೂರ್ತಿ ಪಿಎಸ್ ದಿನೇಶ್ ಕುಮಾರ್ ಹೇಳಿದ್ದಾರೆ.

ಸ್ಪರ್ಧಾ ಕಾಯಿದೆ ಉಲ್ಲಂಘನೆಗಾಗಿ ಸಿಸಿಐ ನಡೆಸುತ್ತಿರುವ ತನಿಖೆಯನ್ನು 1999ರ ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆಯಡಿ (ಫೆಮಾ) ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ತನಿಖೆ ತಡೆಯುವುದಿಲ್ಲ ಎಂದು ಸಿಸಿಐ ವಾದಿಸಿತು.

ಸಿಸಿಐ ನಡೆಸಲು ಉದ್ದೇಶಿಸಿರುವ ತನಿಖೆಯನ್ನು ತಡೆಯುವುದಕ್ಕಾಗಿ ಜಾರಿ ನಿರ್ದೇಶನಾಲಯದ ತನಿಖೆ ಬಾಕಿ ಇರುವುದನ್ನು ಅಮೆಜಾನ್‌ ಬಳಸಿಕೊಳ್ಳಲು ಯತ್ನಿಸುತ್ತಿದೆ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಮಾಧವಿ ದಿವಾನ್ ನ್ಯಾಯಾಲಯಕ್ಕೆ ತಿಳಿಸಿದರು. ಈ ಅಂಶವನ್ನು ಪರಿಗಣಿಸಿದ ನ್ಯಾಯಮೂರ್ತಿ ಪಿಎಸ್ ದಿನೇಶ್ ಕುಮಾರ್ ಅವರು ಅಮೆಜಾನ್‌ ಪರ ವಕೀಲ ಗೋಪಾಲ್‌ ಸುಬ್ರಮಣಿಯಂ ಅವರ ವಾದವನ್ನು ಪಕ್ಕಕ್ಕೆ ತಳ್ಳಿದರು.

Karnataka High Court dismisses plea by Amazon, Flipkart against CCI probe

ಅಮೆಜಾನ್‌ ಮತ್ತು ಫ್ಲಿಪ್‌ಕಾರ್ಟ್‌ ಉಳಿದ ವ್ಯಾಪಾರಿಗಳಿಗೆ ಕುತ್ತು ತರುವ ರೀತಿಯಲ್ಲಿ ಬೆಲೆ ನಿಗದಿ ಮಾಡುತ್ತಿದ್ದು, ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಸ್ಮಾರ್ಟ್‌ಫೋನ್‌ ಮಾರಾಟ ಮಾಡುವಾಗ ಸ್ಪರ್ಧಾ ವಿರೋಧಿ ವರ್ತನೆ ತೋರುತ್ತಿದೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಮಹಾ ನಿರ್ದೇಶಕರಿಗೆ ಸಿಸಿಐ ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಅಮೆಜಾನ್‌ ಕರ್ನಾಟಕ ಹೈಕೋರ್ಟ್‌ ಮೊರೆ ಹೋಗಿತ್ತು.

English summary
The Karnataka High Court on Friday dismissed the plea filed by e-commerce companies, Amazon and Flipkart challenging the probe ordered by Competition Commission of India (CCI) against them for alleged violations of Competition Law.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X