• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗ್ಲೋಬಲ್‌ ಸ್ಟಾರ್ಟ್‌ಅಪ್‌ ಚಾಲೆಂಜ್‌- 'ವೆಂಚುರೈಸ್‌'ಗೆ ಚಾಲನೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 02: ಉತ್ಪಾದನೆ ಮತ್ತು ಸುಸ್ಥಿರತೆ-ಸಂಬಂಧಿತ ವಲಯಗಳಲ್ಲಿ ಸ್ಟಾರ್ಟ್‌ಅಪ್‌ಗಳನ್ನು ಗುರುತಿಸಿ, ಬೆಂಬಲಿಸುವ 'ವೆಂಚುರೈಸ್‌' ಸ್ಪರ್ಧೆಗೆ ಕರ್ನಾಟಕ ಸರ್ಕಾರ ಚಾಲನೆ ನೀಡಿದೆ. 2022ರ ಸೆಪ್ಟೆಂಬರ್‌ 1ರಿಂದ ಸೆಪ್ಟೆಂಬರ್‌ 25ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು ಸ್ಪರ್ಧೆಯ ವಿಜೇತರಿಗೆ 100,000 ಡಾಲರ್‌ ನಗದು ಬಹುಮಾನ ಘೋಷಿಸಲಾಗಿದೆ.

'ವೆಂಚುರೈಸ್‌' ಲೋಗೊ ಬಿಡುಗಡೆ ಮಾಡಿ ಮಾತನಾಡಿದ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವರಾದ ಮುರುಗೇಶ ಆರ್. ನಿರಾಣಿ, "ಉತ್ಪಾದನೆ ಮತ್ತು ಸಂಬಂಧಿತ ವಲಯಗಳಲ್ಲಿನ ಸ್ಟಾರ್ಟ್ಅಪ್‌ಗಳಿಗೆ ರಾಜ್ಯವನ್ನು ಆದ್ಯತೆಯ ತಾಣವಾಗಿ ರೂಪಿಸುವುದು ನಮ್ಮ ಆದ್ಯತೆ. ಉದ್ಯಮಿಗಳಿಗೆ ಪೂರಕ ವಾತಾವರಣ ಕಲ್ಪಿಸಲು ಅತ್ಯುತ್ತಮ ಮೂಲಸೌಕರ್ಯ ನಿರ್ಮಿಸಲು ನಮ್ಮ ಸರ್ಕಾರ ಬದ್ಧ,"ಎಂದು ತಿಳಿಸಿದರು.

ದೆಹಲಿಯ ಜಂತರ್‌ ಮಂತರ್‌ನಲ್ಲಿ ರೈತರ ಬೃಹತ್‌ ಪ್ರತಿಭಟನೆ ದೆಹಲಿಯ ಜಂತರ್‌ ಮಂತರ್‌ನಲ್ಲಿ ರೈತರ ಬೃಹತ್‌ ಪ್ರತಿಭಟನೆ

"ಬೆಂಗಳೂರಿನಲ್ಲಿ ನವೆಂಬರ್‌ನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಭಾಗವಾಗಿ 'ವೆಂಚುರೈಸ್- ಗ್ಲೋಬಲ್ ಸ್ಟಾರ್ಟ್‌ಅಪ್ ಪಿಚ್ ಚಾಲೆಂಜ್' ಆಯೋಜಿಸಲಾಗಿದೆ. ಸ್ಟಾರ್ಟ್‌ಅಪ್‌ಗಳ ಬೆಳವಣಿಗೆಯನ್ನು ಬೆಂಬಲಿಸಿ, ಅವರಿಗೆ ಹೂಡಿಕೆದಾರರು ಮತ್ತು ಉದ್ಯಮ ಪಾಲುದಾರರ ಜತೆ ಸಂಪರ್ಕ ಕಲ್ಪಿಸುವ ಪ್ರಯತ್ನವಾಗಿ ಈ ಕಾರ್ಯಕ್ರಮ ಆಯೋಜಿಸಿದ್ದೇವೆ," ಎಂದು ಮುರುಗೇಶ್ ನಿರಾಣಿ ಹೇಳಿದರು.

ಅಮೆಜಾನ್‌ ಪ್ರಾಯೋಜಿತ ಈ 'ಸ್ಟಾರ್ಟ್‌ಅಪ್ ಪಿಚ್ ಚಾಲೆಂಜ್‌'ನ ಸುಗಮ ನಿರ್ವಹಣೆಗಾಗಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಜತೆ ಟಿಐಇ ಕೈ ಜೋಡಿಸಿದೆ.

ಏನಿದು ಚಾಲೆಂಜ್‌?

ಮುಂದಿನ 2 ತಿಂಗಳ ಅವಧಿಯಲ್ಲಿ ನಡೆಯಲಿರುವ ಈ ಸ್ಪರ್ಧೆಯ ಮೊದಲ ಹಂತ ಆನ್‌ಲೈನ್ ಅರ್ಜಿ ಸಲ್ಲಿಕೆ. ಆನ್‌ಲೈನ್ ಪಿಚಿಂಗ್ ಎರಡನೇ ಭಾಗವಾದರೆ, ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಅಂತಿಮ ಸುತ್ತಿನ ಸ್ಪರ್ಧೆ ನಡೆಯಲಿದೆ. ಪ್ರಪಂಚದಾದ್ಯಂತ 2000ಕ್ಕೂ ಹೆಚ್ಚು ಅರ್ಜಿಗಳನ್ನು ನಿರೀಕ್ಷಿಸಲಾಗಿದೆ. 2022ರ ಸೆಪ್ಟೆಂಬರ್‌ 1ರಿಂದ ಸೆಪ್ಟೆಂಬರ್‌ 25ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಆನ್‌ಲೈನ್‌ ಅರ್ಜಿ ಸಲ್ಲಿಸುವ ವಿಳಾಸ.

ಬಹುಮಾನ

ಸ್ಪರ್ಧೆಯ ವಿಜೇತರಿಗೆ 100,000 ಡಾಲರ್‌ ನಗದು ಬಹುಮಾನ ಘೋಷಿಸಲಾಗಿದೆ. ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗಿಯಾಗುವ ಅವಕಾಶದ ಜತೆಗೆ, ಹೂಡಿಕೆದಾರರು ಹಾಗೂ ಮಾರ್ಗದರ್ಶಕರ ಜತೆ ಮಾತುಕತೆಗೆ ಅವಕಾಶ ಕಲ್ಪಿಸಲಾಗುತ್ತದೆ.

Karnataka launches Global Startup Challenge – VentuRISE

ಕೈಗಾರಿಕಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ಇವಿ ರಮಣರೆಡ್ಡಿ, ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ, ಇನ್ವೆಸ್ಟ್‌ ಕರ್ನಾಟಕ ಫೋರಂನ ಸಿಓಓ ಬಿ.ಕೆ. ಶಿವಕುಮಾರ್‌, ಟಿಐಇ ಗ್ಲೋಬಲ್‌ ಮುಖ್ಯಸ್ಥ ಬಿಜೆ ಅರುಣ್‌, ಟಿಐಇ ಬೆಂಗಳೂರಿನ ಅಧ್ಯಕ್ಷ ಮದನ್‌ ಫಡ್ಕಿ, ಅಮೇಜಾನ್‌ ಇಂಡಿಯಾದ ಪಬ್ಲಿಕ್‌ ಪಾಲಿಸಿ ವಿಭಾಗದ ಮುಖ್ಯಸ್ಥ ಚೇತನ್‌ ಕೃಷ್ಣಸ್ವಾಮಿ ಕಾರ್ಯಕ್ರಮದಲ್ಲಿ ಉಪಸ್ಥಿತಿತರಿದ್ದರು.

English summary
Government of Karnataka has launched the 'Ventureise' competition to identify and support startups in manufacturing and sustainability-related sectors. Applications are open from September 1 to September 25, 2022 and a cash prize of $100,000 has been announced for the winner of the contest, Know More,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X