ಮಾರ್ಚ್ 4ರಂದು ಕೆಐಎಡಿಬಿ ಸುವರ್ಣ ಮಹೋತ್ಸವ
ಬೆಂಗಳೂರು, ಮಾರ್ಚ್ 3 : ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಕಳೆದ 50 ವರ್ಷಗಳಿಂದ ಶ್ರಮಿಸುತ್ತಿರುವ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯ (ಕೆಐಎಡಿಬಿ) ಸುವರ್ಣ ಮಹೋತ್ಸವವು ಮಾರ್ಚ್ 4ರ ಭಾನುವಾರ ನಗರದ ಶಾಂಗ್ರಿ-ಲಾ ಹೋಟೆಲಿನಲ್ಲಿ ನಡೆಯಲಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುವರ್ಣ ಮಹೋತ್ಸವವನ್ನು ಉದ್ಘಾಟಿಸಲಿದ್ದು, ಇದೇ ಸಂದರ್ಭದಲ್ಲಿ ಕೆಐಎಡಿಬಿ ಪ್ರಧಾನ ಕಚೇರಿ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಭಾರೀ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಅವರು ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ.

ನಗರಾಭಿವೃದ್ಧಿ ಸಚಿವ ಆರ್.ರೋಷನ್ ಬೇಗ್ ಅಧ್ಯಕ್ಷತೆ ವಹಿಸಲಿರುವ ಈ ಸಮಾರಂಭದಲ್ಲಿ, ಇನ್ಫೋಸಿಸ್‍ನ ಸ್ಥಾಪಕ ಎನ್.ಆರ್. ನಾರಾಯಣಮೂರ್ತಿ ಗೌರವಾನ್ವಿತ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ.
ಅಲ್ಲದೆ, ಸಣ್ಣ ಕೈಗಾರಿಕೆಗಳ ಸಚಿವೆ ಡಾ.ಎಂ.ಸಿ. ಮೋಹನಕುಮಾರಿ, ಕೆಐಎಡಿಬಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎನ್. ಜಯರಾಮ್, ಮಂಡಳಿಯ ಅಧ್ಯಕ್ಷ ಡಿ.ವಿ. ಪ್ರಸಾದ್, ಸರಕಾರದ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಮುಂತಾದವರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.












Click it and Unblock the Notifications