Gold Price: ಚಿನ್ನದ ಬೆಲೆ ಭಾರಿ ಏರಿಕೆ, ಶೀಘ್ರದಲ್ಲೇ ಮತ್ತಷ್ಟು ಸಿಹಿಸುದ್ದಿ?

ಚಿನ್ನದ ಬೆಲೆಗೆ ಬ್ರೇಕ್ ಬೀಳುತ್ತಿಲ್ಲ, ದಿನದಿಂದ ದಿನಕ್ಕೆ ಭಾರಿ ಏರಿಕೆ ಕಾಣುತ್ತಿರುವ ಚಿನ್ನವು ದಿಢೀರ್ ಮುಗಿಲು ಮುಟ್ಟಿದೆ. ಅದರಲ್ಲೂ, ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆ ಕಂಡು ಬಂದಿದೆ. ಈಗ ಕೂಡ ಅಷ್ಟೇ ಚಿನ್ನ ಒಂದೇ ದಿನ 3,300 ರೂಪಾಯಿ ಏರಿಕೆ ಕಂಡು ಆಭರಣ ಪ್ರಿಯರಿಗೆ ಒಂದು ಸಣ್ಣ ಶಾಕ್ ಕೊಟ್ಟಿದೆ. ಹಾಗಾದ್ರೆ ಇಂದಿನ ಚಿನ್ನದ ರೇಟ್ ಎಷ್ಟಿದೆ? ಮುಂದೆ ಓದಿ.

ಚಿನ್ನ.. ಚಿನ್ನ.. ಚಿನ್ನ.. ಹೀಗೆ ಎಲ್ಲ ಕಡೆಯೂ ಈಗ ಬರೀ ಚಿನ್ನದ ಮಾತುಕತೆ ನಡೆದಿದೆ. ಚಿನ್ನದ ಬೆಲೆ ಭಾರಿ ಏರಿಕೆ ಕಂಡು ಊಹೆಗು ಮೀರಿ ಚಿನ್ನದ ಬೆಲೆ ಮೇಲಕ್ಕೆ ಏರುತ್ತಿದೆ. ಇಷ್ಟುದಿನ ಕೈಗೆ ಸಿಗುವಂತೆ ಇದ್ದ ಚಿನ್ನದ ಬೆಲೆ ಇದೀಗ ಭಾರಿ ಏರಿಕೆ ಕಾಣುತ್ತಿದೆ. ಹಾಗಾದರೆ, ಇಂದು ಎಷ್ಟು ಏರಿಕೆ ಆಗಿದೆ ಚಿನ್ನದ ಬೆಲೆ? ಚಿನ್ನದ ಬೆಲೆ ಏರಿಕೆಗೆ ಕಾರಣ ಏನು? ಚಿನ್ನ ಬೆಲೆ ಯಾವಾಗ ಕಡಿಮೆ ಆಗಬಹುದು? ಸಂಪೂರ್ಣ ಮಾಹಿತಿ ತಿಳಿಯಲು ಮುಂದೆ ಓದಿ.

Know The Price Of Gold On June 8th Of 2024

100 ಗ್ರಾಂಗೆ 3,300 ರೂಪಾಯಿ ಏರಿಕೆ

ಶುದ್ಧ ಚಿನ್ನ ಅಥವಾ 24 ಕ್ಯಾರೆಟ್ ಚಿನ್ನದ ಬೆಲೆ ಏರಿಕೆ ಆಗಿದ್ದು ಈಗ 24 ಕ್ಯಾರೆಟ್ ಚಿನ್ನದ ಬೆಲೆ 100 ಗ್ರಾಂಗೆ 3,300 ರೂಪಾಯಿ ಏರಿಕೆ ಕಂಡಿದೆ. ಹೀಗಾಗಿ ಶುದ್ಧ ಚಿನ್ನ ಬೆಲೆ ಪ್ರತಿ 100 ಗ್ರಾಂಗೆ 7,37,500 ರೂಪಾಯಿ ಆಗಿದೆ. ಇದರ ಜೊತೆ ಶುದ್ಧ ಚಿನ್ನ ಬೆಲೆ 10 ಗ್ರಾಂಗೆ 73,750 ರೂಪಾಯಿ ಆಗಿದೆ. ಆಭರಣ ಚಿನ್ನ ಅಂದ್ರೆ 22 ಕ್ಯಾರೆಟ್ ಚಿನ್ನದ ಬೆಲೆ ಈಗ ಮಾರುಕಟ್ಟೆಯಲ್ಲಿ ಭಾರಿ ಏರಿಕೆ ಕಂಡಿದೆ ಪ್ರತಿ 100 ಗ್ರಾಂ ಆಭರಣ ಚಿನ್ನದ ಬೆಲೆ ಈಗ 3000 ರೂಪಾಯಿ ಆಗಿದೆ. ಈ ಮೂಲಕ, ಪ್ರತಿ 10 ಗ್ರಾಂ ಆಭರಣ ಚಿನ್ನದ ಬೆಲೆ ಈಗ 300 ರೂಪಾಯಿ ಏರಿಕೆ ಆಗಿದ್ದು. ಆಭರಣ ಚಿನ್ನದ ಬೆಲೆ ಏರಿಕೆ ನಂತರ ಇದೀಗ ಪ್ರತಿ 10 ಗ್ರಾಂಗೆ 67,600 ರೂಪಾಯಿಗೆ ಮಾರಾಟ ಆಗುತ್ತಿದೆ.

ಅಮೆರಿಕದ ಬಳಿ ಇದೆ ಅತಿಹೆಚ್ಚು ಚಿನ್ನ!

ಚಿನ್ನ ಜಗತ್ತಿನ ಪ್ರತಿಯೊಂದು ದೇಶಕ್ಕೂ ಬೇಕು, ಹೀಗಾಗಿ ಚಿನ್ನ ಸಂಗ್ರಹಣೆ ಬಗ್ಗೆ ಪ್ರಪಂಚ ಒತ್ತು ನೀಡುತ್ತದೆ. ಅದರಲ್ಲೂ ಜಗತ್ತಿನ ಅತ್ಯಂತ ಶ್ರೀಮಂತ ದೇಶ ಎಂಬ ಬಿರುದು ಪಡೆದ, ಅಮೆರಿಕ ಬಳಿ ಅತಿಹೆಚ್ಚು ಚಿನ್ನ ಇದೆ. ಅಮೆರಿಕ ಬಳಿ ಸುಮಾರು 8,133 ಟನ್ ಚಿನ್ನವಿದೆ. ಹಾಗಾದ್ರೆ ಭಾರತ ಈಗ ಎಷ್ಟನೇ ಸ್ಥಾನದಲ್ಲಿ ಇದೆ ಗೊತ್ತಾ? ಅತಿಹೆಚ್ಚು ಚಿನ್ನ ಹೊಂದಿರುವ ಸಂಪೂರ್ಣ ಟಾಪ್-10 ದೇಶಗಳ ಪಟ್ಟಿಗೆ ಮುಂದೆ ಓದಿ.

ಅಮೆರಿಕದ ನಂತರದ ಸ್ಥಾನದಲ್ಲಿ ಜರ್ಮನಿ ಇದ್ದು, 3,352 ಟನ್ ಚಿನ್ನವನ್ನು ಜರ್ಮನಿಯು ಹೊಂದಿದೆ. ಇಟಲಿ ಬಳಿ 2,451 ಟನ್, ಫ್ರಾನ್ಸ್ ಬಳಿ 2,436 ಟನ್, ರಷ್ಯಾ ಬಳಿ 2,332 ಟನ್, ಚೀನಾ ಬಳಿ 2,262 ಟನ್, ಸ್ವಿಜರ್ಲ್ಯಾಂಡ್ ಬಳಿ 1,040, ಜಪಾನ್ ಬಳಿ 845.97 ಟನ್ ಇದ್ದರೆ, ಭಾರತದ ಬಳಿ 822.09 ಟನ್ ಚಿನ್ನದ ಸಂಗ್ರಹ ಇದೆ. ಈ ಮೂಲಕ ಇಡೀ ಜಗತ್ತಿನಲ್ಲಿ ಅತಿಹೆಚ್ಚು ಚಿನ್ನ ಇರುವ ದೇಶಗಳ ಪೈಕಿ ಭಾರತ ಕೂಡ ಒಂದಾಗಿದೆ.

ಚಿನ್ನ ಈಗ ಅಂತಾರಾಷ್ಟ್ರೀಯ ಕರೆನ್ಸಿ?

ಪ್ರಪಂಚದ ಮಟ್ಟದಲ್ಲಿ ಚಿನ್ನಕ್ಕೆ ಯಾಕೆ ಇಷ್ಟು ಬೆಲೆ ಬಂದಿದೆ ಅಂದ್ರೆ, ಯುದ್ಧಗಳು ಶುರುವಾದ ನಂತರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಟ್ಟಿಯಾದ ಕರೆನ್ಸಿ ಇಲ್ಲವಾಗಿದ್ದು. ಈ ಕಾರಣಕ್ಕೆ ಈಗ ಚಿನ್ನದ ಮೇಲೆ ಜನರಿಗೆ ತುಂಬಾ ನಂಬಿಕೆ ಬಂದಿದೆ. ಹೀಗಾಗಿ ಜನ ಕೂಡ ಚಿನ್ನ ಖರೀದಿಗೆ ಮುಗಿ ಬೀಳುತ್ತಿದ್ದಾರೆ. ಹೀಗಾಗಿ ಏಪ್ರಿಲ್ ತಿಂಗಳಲ್ಲಿ ಚಿನ್ನ ಸಾಕಷ್ಟು ಏರಿಕೆ ಕಂಡಿತ್ತು. ಆದರೆ ನಂತರ ಮೇ ತಿಂಗಳಲ್ಲಿ ಸ್ವಲ್ಪ ಇಳಿಕೆ ಕಂಡಿದ್ದ ಚಿನ್ನ ಇದೀಗ ಜೂನ್ ತಿಂಗಳಲ್ಲಿ ಫುಲ್ ಜೂಮ್ ಆಗಿದೆ. ಹಾಗೇ ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆ ಕಾಣು ನಿರೀಕ್ಷೆಯನ್ನ ಚಿನ್ನ ಹುಟ್ಟಿಸಿದೆ.

ಚಿನ್ನದ ಬೆಲೆ 2 ಲಕ್ಷ ರೂಪಾಯಿ?

ಹೀಗಾಗಿಯೇ ಕಳೆದ ಕೆಲವು ತಿಂಗಳಿಂದಲು ಚಿನ್ನದ ಬೆಲೆಯಲ್ಲಿ ಏರಿಕೆ ಆಗುತ್ತಿದೆ. ಆದರೆ ಜೂನ್ ಆರಂಭದಲ್ಲೇ ಚಿನ್ನದ ಬೆಲೆ ಒಂದಷ್ಟು ಕಡಿಮೆ ಆಗಿತ್ತು. ಈಗ ಮತ್ತೆ ಭಾರಿ ಏರಿಕೆ ಕಾಣುತ್ತಿದೆ. ಅದರಲ್ಲೂ ಇರಾನ್ & ಇಸ್ರೇಲ್ ನಡುವೆ ಯುದ್ಧದ ಸ್ಥಿತಿ ನಿರ್ಮಾಣವಾಗಿ ಭಯ ಹುಟ್ಟಿಸಿತ್ತು. ಈ ಕಾರಣಕ್ಕೆ, ಚಿನ್ನದ ಬೆಲೆ ಮುಂದಿನ ಕೆಲವೇ ವರ್ಷದಲ್ಲಿ 2 ಲಕ್ಷ ರೂಪಾಯಿಗೆ ತಲುಪುವ ಸಾಧ್ಯತೆ ಕೂಡ ದಟ್ಟವಾಗಿದೆ.

ಚಿನ್ನದ ಬೆಲೆ ಕುಸಿದಿದ್ದು ಏಕೆ?

ಚರಿತ್ರೆಯಲ್ಲಿ ಯುದ್ಧಗಳು ನಡೆದಿರುವುದು ಚಿನ್ನಕ್ಕಾಗಿ ಹಾಗೂ ಅಮೂಲ್ಯ ವಸ್ತುಗಳಿಗೆ ಮಾತ್ರ. ಚಿನ್ನ ಒಂದು ಕಾಲದಲ್ಲಿ ನಾಣ್ಯ ಕೂಡ ಆಗಿತ್ತು. ಇದೀಗ ಚಿನ್ನ ಅನ್ನೋದು ಆಭರಣವಾಗಿ & ಬ್ಯಾಂಕ್ ಲಾಕರ್ ಒಳಗೆ ಮಾತ್ರ ಕಾಣಲು ಸಾಧ್ಯ. ಈ ಕಾರಣಕ್ಕೆ, ಚಿನ್ನ ಅನ್ನೋ ಹಳದಿ ಲೋಹದ ಬೆಲೆ ಆಕಾಶ ಮುಟ್ಟುತ್ತಿತ್ತು. ಆದರೆ ಈಗ ದಿಢೀರ್ ಅಂತಾ ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ ಆಗಿದೆ. ಅದರಲ್ಲೂ ಒಂದೇ ದಿನ ಚಿನ್ನದ ಬೆಲೆ ಭರ್ಜರಿ 20,000 ರೂಪಾಯಿ ಕುಸಿತವನ್ನು ಕಂಡು ಆಭರಣ ಪ್ರಿಯರಿಗೆ ಭರ್ಜರಿ ಸುದ್ದಿ ನೀಡಿದೆ. ಮುಂದಿನ ದಿನಗಳಲ್ಲಿ, ಚಿನ್ನದ ಬೆಲೆಯ ಬಗ್ಗೆ ಚಿಂತೆ ಶುರುವಾಗಿದೆ.

ಯುದ್ಧದ ಕಾರಣಕ್ಕೆ ಬೆಲೆ ಏರಿಕೆ?

ಜಾಗತಿಕವಾಗಿ ಯುದ್ಧಗಳು ಶುರುವಾದಾಗ, ಮೊದಲು ಆ ಪರಿಣಾಮ ಬೀರುವುದು ಚಿನ್ನ ಮತ್ತು ಪೆಟ್ರೋಲ್, ಡಿಸೆಲ್ ಮೇಲೆ. ಯಾಕಂದ್ರೆ ಜಾಗತಿಕ ಆರ್ಥ ವ್ಯವಸ್ಥೆಯಲ್ಲಿ ಈ ವಸ್ತುಗಳು ದೊಡ್ಡ ಹಿಡಿತ ಹೊಂದಿವೆ. ಹೀಗಾಗಿಯೇ ಯುದ್ಧ ಶುರುವಾದ ತಕ್ಷಣ ಚಿನ್ನದ ರೂಪಕ್ಕೆ ತಮ್ಮ ಸಂಪತ್ತು ಅಂದರೆ ಹಣ ಬದಲಾಯಿಸಿ, ಸಂಗ್ರಹ ಮಾಡಲು ಜನಗಳು ಮುಂದಾಗುತ್ತಾರೆ. ಹಾಗೆ ದೇಶಗಳು ಕೂಡ ಅಪಾರ ಪ್ರಮಾಣದ ಚಿನ್ನ ಯುದ್ಧದ ವೇಳೆ ಬಂದಾಗ ಖರೀದಿ ಮಾಡುತ್ತವೆ. ಹೀಗಾಗಿಯೆ ಕಳೆದ ಕೆಲವು ತಿಂಗಳಿಂದ ಚಿನ್ನದ ಬೆಲೆಯಲ್ಲಿ ಏರಿಕೆ ಆಗುತ್ತಿದ್ದು, ಇದೀಗ ಚಿನ್ನ ಕುಸಿತವನ್ನು ಕಾಣುತ್ತಿದೆ.

ಬೆಳ್ಳಿ ಬೆಲೆಯಲ್ಲಿ ದಿಢೀರ್ ಇಳಿಕೆ!

ಚಿನ್ನ ಬಹು ಬೇಡಿಕೆಯ ವಸ್ತು, ಹೀಗಾಗಿಯೇ ಚಿನ್ನಕ್ಕೆ ಭಾರಿ ಡಿಮ್ಯಾಂಡ್ ಬಂದಿದೆ. ಹೀಗೆ ಚಿನ್ನ ಕೊಳ್ಳಲು ಜನಗಳು ಕೂಡ ಮುಗಿಬಿದ್ದು ಮುಂದೆ ಬರುತ್ತಿದ್ದಾರೆ. ಹೀಗಿದ್ದಾಗ ಚಿನ್ನದ ಜೊತೆ ಬೆಳ್ಳಿ ಬೆಲೆ ಕೂಡ ಭಾರಿ ಏರಿಕೆ ಕಾಣುತ್ತಿತ್ತು. ನೋಡ ನೋಡುತ್ತಲೇ ಬೆಳ್ಳಿ ಬೆಲೆ ಹತ್ತಿರ ಹತ್ತಿರ 1 ಲಕ್ಷ ರೂಪಾಯಿಗೆ ತಲುಪಿತ್ತು ಇಂತಹ ಸ್ಥಿತಿಯಲ್ಲಿ ಈಗ ದಿಢೀರ್ ಬೆಳ್ಳಿ ಬೆಲೆಯಲ್ಲಿ 1200 ರೂಪಾಯಿ ಕುಸಿತ ಕಂಡಿದೆ! ಮುಂದಿನ ದಿನಗಳಲ್ಲಿ ಬೆಳ್ಳಿಯ ಬೆಲೆ ಮತ್ತಷ್ಟು ಏರಿಕೆ ಕಾಣುವ ನಿರೀಕ್ಷೆಯು ಇದೆ. ಈ ನಡುವೆ ಬೆಳ್ಳಿ ಬೆಲೆ ಒಂದಷ್ಟು ಇಳಿಕೆ ಕಂಡಿರುವುದು, ಬೆಳ್ಳಿ ಇಷ್ಟಪಡುವವರಿಗೆ ಒಂದಷ್ಟು ಖುಷಿ ಕೊಟ್ಟಿದೆ.

ಹಳದಿ ಲೋಹ ಎಲ್ಲರಿಗೂ ಇಷ್ಟ!

ಚಿನ್ನ ಭಾರತೀಯರ ಪಾಲಿಗೆ ತುರ್ತು ಹಣ ಇದ್ದಂತೆ, ಯಾಕಂದ್ರೆ ಯಾವುದೇ ತುರ್ತು ಸ್ಥಿತಿ ಎದುರಾಗಿ ಪರದಾಟ ಶುರುವಾದರೂ ಭಾರತೀಯರು ಮೊದಲು ತಮ್ಮ ಬಳಿ ಇರುವ ಚಿನ್ನ, ಮತ್ತು ಬೆಳ್ಳಿ ಮೊರೆ ಹೋಗುತ್ತಾರೆ. ಯಾಕಂದ್ರೆ ತುರ್ತು ಪರಿಸ್ಥಿತಿಯಲ್ಲಿ, ಎಲ್ಲಿಯೂ ಹಣ ಸಿಗದೇ ಇದ್ದರೆ ನಮ್ಮ ಬಳಿ ಇರುವ ಚಿನ್ನ & ಬೆಳ್ಳಿಗೆ ಬೇಡಿಕೆ ಬಂದೇ ಬರುತ್ತದೆ. ಹೀಗಾಗಿಯೇ ಬಹುತೇಕ ಭಾರತೀಯರು ಚಿನ್ನದ ಮೇಲೆ ಹೂಡಿಕೆ ಮಾಡುತ್ತಾ ಬಂದಿದ್ದಾರೆ. ಮತ್ತೊಂದು ಕಡೆ ಚಿನ್ನದ ಮೇಲೆ ಹೂಡಿಕೆ ಮಾಡುವ ಪ್ರತಿಯೊಬ್ಬರಿಗೂ, ಹಳದಿ ಲೋಹ ಬೆನ್ನೆಲುಬಾಗಿ ನಿಂತಿದೆ. ಮುಂದಿನ ದಿನಗಳಲ್ಲಿ ಹಳದಿ ಲೋಹ ಅಂದ್ರೆ ಚಿನ್ನ ಮತ್ತಷ್ಟು ಎತ್ತರಕ್ಕೆ ಹೋಗುವ ನಿರೀಕ್ಷೆ ದಟ್ಟವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+