• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಐಸಿಐಸಿಐ- ವಿಡಿಯೋಕಾನ್ ಕೇಸ್; ಕೊಚ್ಚಾರ್ ಕುಟುಂಬಕ್ಕೆ 500 ಕೋಟಿ ರು ಕಿಕ್ ಬ್ಯಾಕ್

|

ಮುಂಬೈ, ಮಾರ್ಚ್ 07: ಐಸಿಐಸಿಐ ಬ್ಯಾಂಕ್-ವಿಡಿಯೋಕಾನ್ ಹಗರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಿನ ಮಾಜಿ ಎಂಡಿ ಮತ್ತು ಸಿಇಒ ಚಂದಾ ಕೊಚ್ಚಾರ್ ಹಾಗೂ ಅವರ ಕುಟುಂಬಕ್ಕೆ ಸುಮಾರು 500 ಕೋಟಿ ರು ಕಿಕ್ ಬ್ಯಾಕ್ ಸಿಕ್ಕಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರದಂದು ಹೇಳಿದ್ದಾರೆ.

ಈ ಪ್ರಕರಣದ ಪ್ರಮುಖ ಆರೋಪಿಗಳಾದ ಚಂದಾ ಕೊಚ್ಚಾರ್, ಅವರ ಪತಿ ದೀಪಕ್ ಕೊಚ್ಚಾರ್ ಹಾಗೂ ವಿಡಿಯೋಕಾನ್ ವ್ಯವಸ್ಥಾಪಕ ನಿರ್ದೇಶಕ ವೇಣುಗೋಪಾಲ್ ಧೂತ್ ಅವರ ವಿಚಾರಣೆ ಇನ್ನು ಜಾರಿಯಲ್ಲಿದೆ.

ಚಂದಾ ಕೊಚ್ಚರ್ ಮೇಲೆ ಎಫ್ಐಆರ್ ಹಾಕಿದ ಸಿಬಿಐ ಅಧಿಕಾರಿ ವರ್ಗ

ಬ್ಯಾಂಕ್ ನ ನಿಯಮಗಳನ್ನು ಉಲ್ಲಂಘಿಸಿ ವಿಡಿಯೋಕಾನ್ ಗ್ರೂಪ್ ಗೆ ಸುಮಾರು 3,250 ಕೋಟಿರೂ.ಸಾಲ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಅವ್ಯವಹಾರದ ಹಗರಣ ಇದಾಗಿದೆ. ಐಸಿಐಸಿಐನ ಮಾಜಿ ಎಂಡಿ ಚಂದಾ ಕೊಚ್ಚಾರ್ ಹಾಗೂ ಕುಟುಂಬಕ್ಕೆ ಕಿಕ್ ಬ್ಯಾಕ್ ರೂಪದಲ್ಲಿ 500 ಕೋಟಿ ರ್ ರು ಗೂ ಅಧಿಕ ಮೊತ್ತ ಸಿಕ್ಕಿದೆ. ಇದು ಸದ್ಯದ ಲೆಕ್ಕಾಚಾರವಾಗಿದ್ದು, ಕಿಕ್ ಬ್ಯಾಕ್ ಮೊತ್ತ ಇನ್ನು ಅಧಿಕವಾಗಿರುವ ಸಾಧ್ಯತೆಯಿದೆ ಎಂದು ಜಾರಿ ನಿರ್ದೇಶನಾಲಯವು ಹೇಳಿದೆ.

ಕೊಚ್ಚಾರ ಕುಟುಂಬ ಹಾಗೂ ಇನ್ನಿತರ ಆರೋಪಿಗಳ ಮನೆ, ಕಚೇರಿ ಮೇಲೆ ಇತ್ತೀಚೆಗೆ ದಾಳಿ ನಡೆಸಿ, ಅನೇಕ ದಾಖಲೆ ಹಾಗೂ ಆಸ್ತಿ ಪಾಸ್ತಿ ಜಪ್ತಿ ಮಾಡಿರುವ ಜಾರಿ ನಿರ್ದೇಶಾನಲಯದ ಅಧಿಕಾರಿಗಳು ಇನ್ನೊಂದು ಸುತ್ತಿನ ದಾಳಿ ನಡೆಸುವ ಸುಳಿವು ನೀಡಿದ್ದಾರೆ. ಸದ್ಯ, ಚಂದಾ ಕೊಚ್ಚಾರ್ ಅವಧಿಯಲ್ಲಿ ಅಕ್ರಮವಾಗಿ ಮಂಜೂರು ಮಾಡಿದ ಸಾಲದ ಮೊತ್ತದ ಬಗ್ಗೆ ತನಿಖೆ ಚುರುಕುಗೊಂಡಿದೆ.

ಐಸಿಐಸಿಐ ಮಾಜಿ ಸಿಇಒ ಚಂದಾ ಕೊಚ್ಚಾರ್ ಮನೆ ಮೇಲೆ 'ಇಡಿ' ದಾಳಿ

ಚಂದಾ ಕೊಚ್ಚಾರ್ ಅಧಿಕಾರದಲ್ಲಿ ಇದ್ದ ಸಮುಯದಲ್ಲಿ ಐಸಿಐಸಿಐ ಬ್ಯಾಂಕ್ ಮೂಲಕ ಅವ್ಯವಹಾರ ನಡೆದಿದೆ ಎಂದು ಕಳೆದ ಮಾರ್ಚ್ ನಲ್ಲಿ ಮೊದಲ ಬಾರಿಗೆ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಚಂದಾ ಕೊಚ್ಚರ್, 2018 ರ ಅಕ್ಟೋಬರ್‌ನಲ್ಲಿ ಸಿಇಒ ಹುದ್ದೆಯಿಂದ ಕೆಳಗಿಳಿದಿದ್ದರು.

ಈ ಹಿಂದೆ ವಿಡಿಯೋಕಾನ್ ನ ಮುಂಬೈ ಹಾಗೂ ಔರಂಗಾಬಾದ್ ನ ಕಚೇರಿ ಹಾಗೂ ಐಸಿಐಸಿಐನ ಮಾಜಿ ಸಿಇಒ ಚಂದಾ ಕೊಚ್ಚರ್ ಅವರ ಪತಿ ದೀಪಕ್ ಕೊಚರ್ ಅವರ ನುಪವರ್ ಕಚೇರಿ ಮೇಲೂ ದಾಳಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.

English summary
The Enforcement Directorate (ED), which is probing the violation of anti-money laundering laws in the Rs 3,250 crore ICICI-Videocon loan case, has so far established that Rs 500 crore was received as kickbacks by the bank’s former chief Chanda Kochhar and her family.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X