• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಎಲ್‌ಐಸಿ ಐಪಿಒ: ಪಾಲಿಸಿದಾರರಿಗೆ ಶೇಕಡಾ 10ರಷ್ಟು ಮೀಸಲು

|
Google Oneindia Kannada News

ನವದೆಹಲಿ, ಫೆಬ್ರವರಿ 10: ಎಲ್‌ಐಸಿ ಐಪಿಒ ಈಗಾಗಲೇ ದೊಡ್ಡ ಸಂಚಲನವನ್ನು ಸೃಷ್ಟಿಸಿದೆ. ಏಕೆಂದರೆ ಇದುವರೆಗಿನ ಎಲ್ಲಾ ಐಪಿಒಗಳಿಗಿಂತ ದೊಡ್ಡದಾಗಿ ಹೊರಹೊಮ್ಮುವ ಸಾಧ್ಯತೆಯಿದೆ. ಇದರ ಜೊತೆಗೆ ಎಲ್ಐಸಿ ಐಪಿಒಗಿಂತ ಮುಂಚೆ ಲೈಫ್ ಇನ್ಶುರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದ ವಿಮಾ ಪಾಲಿಸಿಗಳನ್ನು ಹೊಂದಿರುವವರಿಗೆ ಗುಡ್‌ನ್ಯೂಸ್ ಇಲ್ಲಿದೆ.

ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಅವರು ಎಲ್ಐಸಿ ಐಪಿಒ ವಿತರಣೆಯ ಗಾತ್ರದ ಶೇಕಡಾ 10 ರಷ್ಟು ಎಲ್ಐಸಿ ಪಾಲಿಸಿದಾರರಿಗೆ ಮೀಸಲಿಡುತ್ತಾರೆ ಎಂಬುದನ್ನು ಖಚಿತಪಡಿಸಿದ್ದಾರೆ.

 ಎಲ್‌ಐಸಿ ಐಪಿಒ ಆರಂಭಕ್ಕೆ ವಿರೋಧ: ನೌಕರರ ಪ್ರತಿಭಟನೆ ಎಲ್‌ಐಸಿ ಐಪಿಒ ಆರಂಭಕ್ಕೆ ವಿರೋಧ: ನೌಕರರ ಪ್ರತಿಭಟನೆ

ಪಾಲಿಸಿದಾರರ ಹಿತರಕ್ಷಣೆಯ ಉದ್ದೇಶದಿಂದ ಕೇಂದ್ರ ಸರ್ಕಾರವೇ ಗರಿಷ್ಠ ಷೇರುಪಾಲು ಉಳಿಸಿಕೊಳ್ಳಲಿದ್ದು, ಆಡಳಿತಾತ್ಮಕ ನಿಯಂತ್ರಣವನ್ನೂ ತನ್ನ ಬಳಿಯೇ ಇಟ್ಟುಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ.

ಹಣಕಾಸು ಮಸೂದೆ 2021-22ರಲ್ಲಿ ಎಲ್‌ಐಸಿಯ ಜೀವ ವಿಮಾ ಪಾಲಿಸಿದಾರರಿಗೆ ಐಪಿಒದಲ್ಲಿ ಶೇಕಡಾ 10ರವರೆಗೆ ಮೀಸಲಿಡುವ ಪ್ರಸ್ತಾಪ ಇದೆ. ಏಪ್ರಿಲ್ 1 ರಿಂದ ಆರಂಭವಾಗುವ ಮುಂದಿನ ಹಣಕಾಸು ವರ್ಷದಲ್ಲಿ ಎಲ್‌ಐಸಿ ಐಪಿಒ ಬಿಡುಗಡೆ ಮಾಡುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ನಲ್ಲಿ ತಿಳಿಸಿದ್ದರು.

English summary
Modi government's Minister of State for Finance Anurag Thakur has confirmed that up to 10 per cent of the LIC IPO issue size would be reserved for LIC policyholders.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X