LPG Gas: ಭರ್ಜರಿ ಡಿಸ್ಕೌಂಟ್ ದರದಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಲಭ್ಯ
LPG Gas Cylinder: ಈಗಾಗಲೇ ಗೃಹಬಳಕೆ ಗ್ಯಾಸ್ ಸಿಲಿಂಡರ್ ದರ ಏರಿಕೆ ಮಾಡಲಾಗಿದೆ. ಇದರಿಂದ ಮಧ್ಯಮ ವರ್ಗದ ಜನರಿಗೆ ತುಂಬಾ ಹೊರೆ ಆಗಿದೆ. ಈ ನಡುವೆಯೇ ಇದೀಗ ಭರ್ಜರಿ ಗುಡ್ ನ್ಯೂಸ್‌ವೊಂದು ಇದ್ದು, ಡಿಸ್ಕೌಂಟ್ ದರದಲ್ಲಿ ಎಲ್‌ಪಿಜಿ ಸಿಲಿಂಡರ್ ಪಡೆಯಬಹುದಾಗಿದೆ. ಹಾಗಾದ್ರೆ, ಇದು ಹೇಗೆ ಸಾಧ್ಯ ಎನ್ನುವ ಪ್ರಶ್ನೆ ಬಹುತೇಕರಲ್ಲಿ ಮೂಡಿರುತ್ತದೆ. ಇದೆಲ್ಲದಕ್ಕೂ ಉತ್ತರವನ್ನು ನೀಡಲಾಗಿದೆ ತಿಳಿಯಿರಿ.
ಸಾಮಾನ್ಯವಾಗಿ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಸಿಲಿಂಡರ್ ದರಗಳನ್ನು ಪ್ರತಿ ತಿಂಗಳ ಆರಂಭದಲ್ಲೇ ಪರಿಷ್ಕರಣೆ ಮಾಡುತ್ತಲಿರುತ್ತವೆ. ಮತ್ತೊಂದೆಡೆ ಗೃಹಬಳಕೆ ಗ್ಯಾಸ್ ಸಿಲಿಂಡರ್ ದರವನ್ನು ಮಾತ್ರ ಯಾವಾಗ ಬೇಕಾದರೂ ಪರಿಷ್ಕರಣೆ ಮಾಡಬಹುದು. ಈ ಹಿಂದೆ 50 ರೂಪಾಯಿ ಏರಿಕೆ ಮಾಡಲಾಗಿದೆ. ಇದೀಗ ಮತ್ತೆ ಯಾವಾಗ ಪರಿಷ್ಕರಣೆ ಆಗುತ್ತದೆಯೋ ಗೊತ್ತಿಲ್ಲ. ಆದರೆ, ಇದೀಗ ಈ ಕೆಲ್ಸ ಮಾಡಿದ್ರೆ ಸಾಕು ಗೃಹಬಳಕೆ ಎಲ್‌ಪಿಜಿ ಸಿಲಿಂಡರ್ ಅನ್ನು ಭರ್ಜರಿ ಡಿಸ್ಕೌಂಡ್ ದರದಲ್ಲಿ ಪಡೆಯವುದು.

ಎಲ್‌ಪಿಜಿ ಸಿಲಿಂಡರ್ ನ ಬೆಲೆ ಸುಮಾರು 870 ರೂಪಾಯಿಗೂ ಅಧಿಕ ಆಗಿದ್ದು, ಇದು ಮಧ್ಯಮ ವರ್ಗದವರಿಗೆ ಹೊರೆಯಾಗಿದೆ. ಇದೀಗ ಡಿಸ್ಕೌಂಡ್ ದರದಲ್ಲೇ ಎಲ್‌ಪಿಜಿ ಸಿಲಿಂಡರ್ ಪಡೆಯಹುದು. ಗ್ರಾಹಕರು ಗ್ಯಾಸ್ ಸಿಲಿಂಡರ್ ಬುಕ್ ಮಾಡಲು ಹಲವು ಮಾರ್ಗಗಳು ಇವೆ. ಮಿಸ್ಡ್ ಕಾಲ್, ಕಂಪನಿಯ ಗ್ರಾಹಕ ಸೇವಾ ಸಂಖ್ಯೆ, ಎಲ್‌ಪಿಜಿ ಪೂರೈಕೆದಾರರ ಮೊಬೈಲ್ ಅಪ್ಲಿಕೇಶನ್‌ನಂತಹ ವಿಧಾನಗಳಿವೆ.
ಇದರ ಹೊರತಾಗಿಯೂ ವಿವಿಧ ಡಿಜಿಟಲ್ ಪ್ಲಾಟ್ ಫಾರ್ಮ್‌ಗಳ ಮೂಲಕವೂ ಗ್ರಾಹಕರು ಗ್ಯಾಸ್ ಸಿಲಿಂಡರ್ ಅನ್ನು ಮಾಡಬಹುದು. ಫೋನ್ ಪೇ, ಗೂಗಲ್ ಪೇ, ಪೇಟಿಎಂನಂತಹ ಅಪ್ಲಿಕೇಶನ್‌ಗಳಲ್ಲಿ ಬುಕಿಂಗ್ ಸೌಲಭ್ಯ ಲಭ್ಯ ಇದ್ದು, ಈ ಡಿಜಿಟಲ್ ಪಾವತಿ ಪ್ಲಾಟ್ ಫಾರ್ಮ್‌ಗಳ ಮೂಲಕ ಬುಕಿಂಗ್ ಮಾಡುವುದರಿಂದ ವಿಶೇಷ ಕ್ಯಾಶ್ ಬ್ಯಾಕ್‌ಗಳು ಹಾಗೂ ಹಲವು ಪ್ರಯೋಜನೆಗಳಾಗಲಿವೆ.
ಹೌದು..ಡಿಜಿಟಲ್ ಪಾವತಿ ವಿಭಾಗದಲ್ಲಿ ಪೇಟಿಎಂ ಭಾರೀ ಮುಂಚೂಣಿಯಲ್ಲಿ ಇದ್ದು, ಬಳಕೆದಾರರಿಗೆ ಭರ್ಜರಿ ಆಫರ್‌ಗಳನ್ನು ಘೋಷಣೆ ಮಾಡಿದೆ. ಇದರಿಂದ ನೀವು ಗರಿಷ್ಠ 150 ರೂಪಾಯಿ ರಿಯಾಯಿತಿ ಪಡೆಯಬಹುದಾಗಿದೆ. ಅದರಲ್ಲೂ ಎಚ್‌ಎಸ್‌ಬಿಸಿ ಕ್ರೆಡಿಟ್ ಕಾರ್ಡ್ ಹೊಂದಿರುವವರು ಕನಿಷ್ಠ 499 ರೂಪಾಯಿ ಅಥವಾ ಅದಕ್ಕಿಂತ ಹೆಚ್ಚಿನ ವಹಿವಾಟುಗಳ ಮೇಲೆ ಶೇಕಡಾ 5ರಷ್ಟು ರಿಯಾಯಿತಿ ಪಡೆಯಬಹುದು. ಆದ್ದರಿಂದಎಚ್‌ಎಸ್‌ಬಿಸಿ 150 ಪ್ರೋಮೋ ಕೋಡ್ ಅನ್ನು ನಿರ್ದಿಷ್ಟವಾಗಿ ಬಳಕೆ ಮಾಡಬೇಕು. ಈ ಆಫರ್ ಸೆಪ್ಟೆಂಬರ್ 30, 2025ರ ವರೆಗೆ ಇರಲಿದೆ ಎಂದು ತಿಳಿದುಬಂದಿದೆ.
ಫೆಡರಲ್ ಬ್ಯಾಂಕ್ ಕ್ರೆಡಿಟ್ ಹಾಗೂ ಡೆಬಿಟ್ ಕಾರ್ಡ್ ಬಳಸುವವರು ಕೂಡ ಗರಿಷ್ಠ 150 ರೂಪಾಯಿ ರಿಯಾಯಿತಿ ಪಡೆಯಬಹುದು. ಕನಿಷ್ಠ ವಹಿವಾಟು ಮೌಲ್ಯ 199 ರೂಪಾಯಿ ಅಥವಾ ಅದಕ್ಕಿಂತ ಹೆಚ್ಚಿನದಾಗಿ ಇರಬೇಕು. ಫೆಡರಲ್ 150 ಪ್ರೋಮೋ ಕೋಡ್ ಬಳಕೆ ಮಾಡುವ ಮೂಲಕ ಈ ಆಫರ್ ಪಡೆಯಬಹುದಾಗಿದ್ದು, ಈ ಅವಕಾಶ ಸೆಪ್ಟೆಂಬರ್ ಅಂತ್ಯದವರೆಗೆ ಇರಲಿದೆ.
ಜೊತೆಗೆ ಇಂಡಸ್ ಇಂಡ್ ಬ್ಯಾಂಕ್ ಡೆಬಿಟ್ ಕಾರ್ಡ್ ಬಳಸುವವರು ಹೆಚ್ಚಿನ ಪ್ರಯೋಜನವನ್ನ ಪಡೆಯಬಹುದು. ಕನಿಷ್ಠ 299 ರೂಪಾಯಿ ಅಥವಾ ಅದಕ್ಕಿಂತ ಹೆಚ್ಚಿನ ಮೌಲ್ಯದ ವಹಿವಾಟುಗಳ ಮೇಲೆ ಅವರು ಶೇಕಡಾ 10ರಷ್ಟು ರಿಯಾಯಿತಿಯನ್ನ ಪಡೆಯಬಹುದು. ಇದು ಗರಿಷ್ಠ 50 ರೂಪಾಯಿವರೆಗೆ ಮಾತ್ರ ಲಭ್ಯ ಇದ್ದು, ಇದಕ್ಕೆ INDDDC50 ಪ್ರೋಮೋ ಕೋಡ್ ಅನ್ನು ಬಳಕೆ ಮಾಡಬೇಕಾಗುತ್ತದೆ.
ಆರ್‌ಬಿಎಲ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಕೆದಾರರು 50 ರೂಪಾಯಿವರೆಗಿನ ರಿಯಾಯಿತಿಗೆ ಅರ್ಹರಾಗಿರುತ್ತಾರೆ. ಇನ್ನು ಇಲ್ಲಿ ವಹಿವಾಟಿನ ಮೌಲ್ಯವು 999 ರೂಪಾಯಿ ಅಥವಾ ಅದಕ್ಕಿಂತ ಹೆಚ್ಚಿನದಾಗಿರಬೇಕು. ಈ ಆಫರ್ ಅನ್ನು RBL50 ಪ್ರೋಮೋ ಕೋಡ್‌ನೊಂದಿಗೆ ಪಡೆಯಬಹುದು. ಅಲ್ಲದೆ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಕ್ರೆಡಿಟ್ ಕಾರ್ಡ್‌ಗಳು ಕೂಡ 50 ರೂಪಾಯಿವರೆಗಿನ ರಿಯಾಯಿತಿಗೆ ಅರ್ಹ ಆಗಿವೆ. ಇದಕ್ಕಾಗಿ PNBCC ಕೋಡ್ ಅನ್ನು ಬಳಕೆ ಮಾಡಬೇಕಾಗುತ್ತದೆ.
ಇದು ಸೆಪ್ಟೆಂಬರ್ ಅಂತ್ಯದವರೆಗೂ ಮಾತ್ರ ಇರಲಿದ್ದು, ಇದರೊಳಗೆ ಗ್ರಾಹಕರು ಗ್ಯಾಸ್ ಸಿಲಿಂಡರ್‌ಗಳು ಹಾಗೂ ನೀವು ಹೊಸ ಸಿಲಿಂಡರ್ ಬುಕ್ ಮಾಡುವುದು ಉತ್ತಮ. ಹೀಗೆ ಡಿಜಿಟಲ್ ಪ್ಲಾಟ್ ಫಾರ್ಮ್ ಮೂಲಕ ಬುಕಿಂಗ್ ಮಾಡುವುದು ಹಾಗೂ ಕ್ರೆಡಿಟ್ ಕಾರ್ಡ್ ಅಥವಾ ಡೆಬಿಟ್ ಕಾರ್ಡ್ ಮೂಲಕ ಪಾವತಿಸುವುದರಿಂದ ತುಸು ಹಣ ಉಳಿಸಿದಂತಾಗಲಿದೆ. ಇದು ಸಾಮಾನ್ಯವಾಗಿ ಮಧ್ಯಮ ವರ್ಗದವರಿಗೆ ತುಂಬಾ ಪ್ರಯೋಜನಾಕಾರಿಯಾಗಿದೆ.
-
Kerosene: ಎಲ್‌ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್‌ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ












Click it and Unblock the Notifications