ಸತತವಾಗಿ 2ನೇ ತಿಂಗಳು ಅಡುಗೆ ಅನಿಲ ಬೆಲೆ ತುಸು ಏರಿಕೆ

ನವದೆಹಲಿ, ಜುಲೈ 1: ಪ್ರತಿ ತಿಂಗಳ ಆರಂಭದಲ್ಲಿ ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಪರಿಷ್ಕರಣೆ ಮಾಡಲಾಗುತ್ತದೆ. ಅದರಂತೆ, ಸತತ ಎರಡು ತಿಂಗಳಿನಿಂದ ಎಲ್ಪಿಜಿ ದರ ಏರಿಕೆ ಕಂಡಿದೆ. ಜುಲೈ 1ರಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ. ಪ್ರತಿ ಸಿಲಿಂಡರ್ ಮೇಲೆ 1 ರುನಿಂದ 4.5 ರು ನಷ್ಟು ಏರಿಕೆಯಾಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್(ಐಒಸಿ) ಲಿಮಿಟೆಡ್ ತಿಳಿಸಿದೆ.

ಮಾರ್ಚ್, ಏಪ್ರಿಲ್, ಮೇ ತಿಂಗಳಿನಲ್ಲಿ ಗೃಹಬಳಕೆಯ ಸಬ್ಸಿಡಿರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಮತ್ತೊಮ್ಮೆ ತಗ್ಗಿಸಲಾಗಿತ್ತು. ಆದರೆ, ಜೂನ್ ಹಾಗೂ ಜುಲೈ ತಿಂಗಳಿನಲ್ಲಿ ಬೆಲೆ ಏರಿಕೆ ಮಾಡಲಾಗಿದೆ.

ಎಲ್ಪಿಜಿ ಬೆಲೆ : ಗೃಹ ಬಳಕೆಯ ಸಬ್ಸಿಡಿರಹಿತ 14.2 ಕೆ.ಜಿ ಸಿಲಿಂಡರ್ ಬೆಲೆ 594 ರು ನಷ್ಟಾಗಿದೆ. ದೆಹಲಿಯಲ್ಲಿ 1 ರು ಹಾಗೂ ಮುಂಬೈನಲ್ಲಿ 3.5 ರು ನಷ್ಟು ಏರಿಕೆ ಮಾಡಲಾಗಿದೆ.ಇದೇ ರೀತಿ ಕೋಲ್ಕತಾದಲ್ಲಿ 620.5ರು(ಕಳೆದ ತಿಂಗಳ ದರ 616 ರು), ಹಾಗೂ ಬೆಂಗಳೂರು 597ರು (596.50).

LPG cylinder price hiked on July 1: Check latest rates

ಗಮನಿಸಿ: ಸರ್ಕಾರಿ ಸ್ವಾಮ್ಯದ ಇಂಧನ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ, ಭಾರತ್ ಪೆಟ್ರೋಲಿಯಂ ಪ್ರತಿ ತಿಂಗಳ ಮೊದಲ ದಿನದಂದು ಇಂಧನ ದರ, ಸಬ್ಸಿಡಿ ರಹಿತ ಎಲ್ ಪಿಜಿ, ಜೆಟ್ ಇಂಧನ, ಸೀಮೆಎಣ್ಣೆ ಬೆಲೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತವೆ. ಬೆಲೆ ಏರಿಕೆ ಹಾಗೂ ಇಳಿಕೆ ಎಲ್ಲವೂ ಜಾಗತಿಕ ಮಾರುಕಟ್ಟೆ ದರದ ಮೇಲೆ ಅವಲಂಬಿತವಾಗಿರುತ್ತದೆ. ಇದಲ್ಲದೆ ಆರು ತಿಂಗಳಿಗೊಮ್ಮೆ ನೈಸರ್ಗಿಕ ಅನಿಲದ ಸರಾಸರಿ ದರ ನಿಗದಿಪಡಿಸಲಾಗುತ್ತದೆ.

ಈ ಹೊಸ ದರಗಳು ಪ್ರಧಾನ್ ಮಂತ್ರಿ ಉಜ್ವಲ ಯೋಜನೆಯ (ಪಿಎಂಯುವೈ) ಫಲಾನುಭವಿಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸರ್ಕಾರಿ ಸ್ವಾಮ್ಯದ ತೈಲ ಮತ್ತು ಅನಿಲ ಕಂಪನಿ ಹೇಳಿದೆ. ಏಕೆಂದರೆ ಅವುಗಳು ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆಗೆ ಒಳಪಟ್ಟಿವೆ

ನಿಮ್ಮ ನಗರದಲ್ಲಿ ಎಲ್ಪಿಜಿ, ಪೆಟ್ರೋಲ್, ಡೀಸೆಲ್ ದರವನ್ನು ತಿಳಿಯಲು ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+