Breaking: ದೇಶದ ಜನತೆಗೆ ಗುಡ್ ನ್ಯೂಸ್: ಇಂದಿನಿಂದ LPG ಸಿಲಿಂಡರ್ ಬೆಲೆ ಇಳಿಕೆ: ಸಂಪೂರ್ಣ ಮಾಹಿತಿ ಇಲ್ಲಿದೆ
ನವದೆಹಲಿ, ಜುಲೈ 01: ಪ್ರಧಾನಿ ನರೇಂದ್ರ ಮೋದಿ 3.0 ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ಬಾರಿಗೆ ದೇಶದ ಜನತೆಗೆ ಸಿಹಿ ಸುದ್ದಿ ಸಿಕ್ಕಿದೆ. ದೇಶದ ಜನತೆಗೆ ಜುಲೈ ತಿಂಗಳ ಮೊದಲ ದಿನವೇ ಗುಡ್‌ನ್ಯೂಸ್ ಸಿಕ್ಕಿದ್ದು, ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆಯಾಗಿದೆ.
ಇಂದು ಸಿಲಿಂಡರ್ ಬೆಲೆ ಗಣನೀಯವಾಗಿ ಇಳಿಕೆಯಾಗಲಿದೆ ಎಂದು ಹಲವರು ಭವಿಷ್ಯ ನುಡಿದಿದ್ದರು. ಆದರೆ ಅದು ಆಗಲಿಲ್ಲ. ಸಿಲಿಂಡರ್ ಬೆಲೆಯಲ್ಲಿನ ಕಡಿತವು ಕೇವಲ ಒಂದು ವರ್ಗಕ್ಕೆ ಮಾತ್ರ ಸೀಮಿತವಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು ಬೆಲೆ ಇಳಿಕೆ ಮಾಡಲು ನಿರ್ಧರಿಸಿರುವುದರಿಂದ ಜನ ಸಾಮಾನ್ಯರಿಗೆ ನೆಮ್ಮದಿ ಸಿಗಲಿದೆ. ಇದು ಕೆಲವರಿಗೆ ಮಾತ್ರ ಅನ್ವಯಿಸುತ್ತದೆ.

ಸಬ್ಸಿಡಿ ರಹಿತ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಡಿಯನ್ ಆಯಿಲ್ ಪ್ರಕಾರ, ಕೋಲ್ಕತ್ತಾದಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ಬೆಲೆ 829 ರೂಪಾಯಿ ಇದೆ. ದೆಹಲಿ, ಮುಂಬೈ ಮತ್ತು ಚೆನ್ನೈನಲ್ಲಿ ಸಬ್ಸಿಡಿ ರಹಿತ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಕ್ರಮವಾಗಿ ರೂ.803, ರೂ.802.5 ಮತ್ತು ರೂ.818.5 ಆಗಿದೆ.
ಇನ್ನು ಕರ್ನಾಟಕ ಮತ್ತು ಬೆಂಗಳೂರಿನಲ್ಲಿ ಸಿಲಿಂಡರ್ ಬೆಲೆ 14.5 ಕೆಜಿಯ ಡೊಮೆಸ್ಟಿಕ್ ಸಿಲಿಂಡರ್ ಬೆಲೆ 905.5 ರೂಪಾಯಿ ಇದೆ. ವಾಣಿಜ್ಯ ಬಳಕೆಯ 14.5 ಕೆಜಿಯ ಸಿಲಿಂಡರ್ ಬೆಲೆ 1813 ರೂಪಾಯಿ ಇದೆ. . ದೆಹಲಿಯಲ್ಲಿ ಪ್ರತಿ ಸಿಲಿಂಡರ್ ಬೆಲೆ 1,646 ರೂಪಾಯಿ ಇದೆ. ಅಂದರೆ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 30 ರೂಪಾಯಿ ಇಳಿಕೆಯಾಗಿದೆ. ಮುಂಬೈ ಮತ್ತು ಚೆನ್ನೈನಲ್ಲಿ 19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಕ್ರಮವಾಗಿ ರೂ.1,598 ಮತ್ತು ರೂ.1,809.5ಕ್ಕೆ ಇಳಿದಿದೆ. ಎರಡೂ ನಗರಗಳಲ್ಲಿ 31 ರೂಪಾಯಿ ಇಳಿಕೆಯಾಗಿದೆ.
ಉಜ್ವಲ ಯೋಜನೆಯಡಿ ಫಲಾನುಭವಿಗಳು 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಅನ್ನು ಸ್ವಲ್ಪ ಕಡಿಮೆ ಬೆಲೆಗೆ ಖರೀದಿಸಬಹುದು. ಅವರಿಗೆ 300 ರೂಪಾಯಿ ಕಡಿಮೆ ಸಿಗುತ್ತದೆ. ಅಂದರೆ ಕೋಲ್ಕತ್ತಾ, ದೆಹಲಿ, ಮುಂಬೈ ಮತ್ತು ಚೆನ್ನೈನಲ್ಲಿ ಸಬ್ಸಿಡಿ ರಹಿತ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಕ್ರಮವಾಗಿ ರೂ.529, ರೂ.503, ರೂ.502.5 ಮತ್ತು ರೂ.518.5 ಆಗಿದೆ. ಇನ್ನೂ, ಇಂಡಿಯನ್ ಆಯಿಲ್ ಅಥಾರಿಟಿ ಪ್ರಕಾರ, ಜುಲೈ 1 ರಿಂದ ಕೋಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ 1,756 ರೂಪಾಯಿಗೆ ಇಳಿಯಲಿದೆ.
ಇನ್ನೂ ದೇಶದ ಮೆಟ್ರೋ ನಗರಗಳಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ ರೂ.31 ಇಳಿಕೆಯಾಗಿದೆ. ಹೊಸ ಬೆಲೆ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಆದರೆ, 14.2 ಕೆಜಿ ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆ ಬದಲಾಗಿಲ್ಲ.












Click it and Unblock the Notifications