• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ತಿಂಗಳ ಆರಂಭದಲ್ಲೇ ಕಹಿ ಸುದ್ದಿ, ಅಡುಗೆ ಅನಿಲ ದರ ಏರಿಕೆ!

|

ನವದೆಹಲಿ, ಮಾರ್ಚ್ 1: ಫೆಬ್ರವರಿ ತಿಂಗಳಲ್ಲಿ ಮೂರನೇ ಬಾರಿಗೆ ಅಡುಗೆ ಅನಿಲ ದರ ಏರಿಕೆ ಮಾಡಿದ್ದ ತೈಲ ಮಾರುಕಟ್ಟೆ ಕಂಪನಿಗಳು, ಮಾರ್ಚ್ ತಿಂಗಳ ಆರಂಭದಲ್ಲೇ ಮತ್ತೊಮ್ಮೆ ಎಲ್ ಪಿ ಜಿ ಸಿಲಿಂಡರ್ ಬೆಲೆ ಏರಿಕೆ ಮಾಡಿ ಪರಿಷ್ಕೃತ ದರ ಪಟ್ಟಿ ಪ್ರಕಟಿಸಿವೆ. ಮಾರ್ಚ್ 1ರಂದು ಗೃಹಬಳಕೆ ಎಲ್ ಪಿ ಜಿ ಸಿಲಿಂಡರ್ ಬೆಲೆ 25 ರು ಏರಿಕೆ ಮಾಡಲಾಗಿದೆ.

ನಾಲ್ಕು ದಿನಗಳಲ್ಲೇ ಮತ್ತೊಮ್ಮೆ ಎಲ್ ಪಿ ಜಿ ಸಿಲಿಂಡರ್ ದರ ಪರಿಷ್ಕರಿಸಲಾಗಿದೆ. ಮೂರು ದಿನಗಳ ಹಿಂದೆ ಗೃಹಬಳಕೆಯ ಸಿಲಿಂಡರ್ ಬೆಲೆ 25 ರು ಏರಿಕೆಯಾಗಿತ್ತು.

ಫೆಬ್ರವರಿಯಲ್ಲಿ ಮತ್ತೊಮ್ಮೆ ಅಡುಗೆ ಅನಿಲ ದರ ಏರಿಕೆ

ಫೆಬ್ರವರಿ ತಿಂಗಳಲ್ಲಿ 100 ರು ಏರಿಕೆ ಮಾಡಲಾಗಿತ್ತು. ಫೆಬ್ರವರಿ 4, ಫೆ.14 ಹಾಗೂ ಫೆ.25ರಂದು ಎಲ್ ಪಿಜಿ ಸಿಲಿಂಡರ್ ದರ ಏರಿಕೆ ಮಾಡಲಾಗಿದ್ದು, ಇದೇ ಮೊದಲ ಬಾರಿಗೆ ಒಂದೇ ತಿಂಗಳಲ್ಲಿ ಮೂರು ಬಾರಿ ಬೆಲೆ ಹೆಚ್ಚಳ ಮಾಡಿ ದಾಖಲೆ ಬರೆಯಲಾಗಿದೆ. ಒಟ್ಟಾರೆ ಕಳೆದ ಡಿಸೆಂಬರ್ ತಿಂಗಳಿನಿಂದ 200 ರು ಪ್ರತಿ ಸಿಲಿಂಡರ್ ನಂತೆ ಏರಿಕೆ ಕಾಣಲಾಗಿದೆ.

ಮಾರ್ಚ್ 1ರಂದು ಬೆಲೆ ಏರಿಕೆ ನಂತರ ದೆಹಲಿಯಲ್ಲಿ 14.2 ಕೆ.ಜಿ ಅಡುಗೆ ಅನಿಲ ಸಿಲಿಂಡರ್ ಬಲೆ 819ರು (ಈ ಹಿಂದಿನ ಬೆಲೆ 794 ರು) ಆಗಲಿದೆ.

ಮಾರ್ಚ್ 1ರಂದು ಎಲ್ ಪಿ ಜಿ ಸಿಲಿಂಡರ್ ಬೆಲೆ :

ದೆಹಲಿ: 819 ರು

ಬೆಂಗಳೂರು: 822 ರು

ಮುಂಬೈ: 819 ರು

ಕೋಲ್ಕತಾ: 845.50 ರು

ಚೆನ್ನೈ: 835 ರು

ಗಮನಿಸಿ: ಸರ್ಕಾರಿ ಸ್ವಾಮ್ಯದ ಇಂಧನ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ, ಭಾರತ್ ಪೆಟ್ರೋಲಿಯಂ ಪ್ರತಿ ತಿಂಗಳ ಮೊದಲ ದಿನದಂದು ಇಂಧನ ದರ, ಸಬ್ಸಿಡಿ ರಹಿತ ಎಲ್ ಪಿಜಿ, ಜೆಟ್ ಇಂಧನ, ಸೀಮೆಎಣ್ಣೆ ಬೆಲೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತವೆ. ಬೆಲೆ ಏರಿಕೆ ಹಾಗೂ ಇಳಿಕೆ ಎಲ್ಲವೂ ಜಾಗತಿಕ ಮಾರುಕಟ್ಟೆ ದರದ ಮೇಲೆ ಅವಲಂಬಿತವಾಗಿರುತ್ತದೆ. ಇದಲ್ಲದೆ ಆರು ತಿಂಗಳಿಗೊಮ್ಮೆ ನೈಸರ್ಗಿಕ ಅನಿಲದ ಸರಾಸರಿ ದರ ನಿಗದಿಪಡಿಸಲಾಗುತ್ತದೆ. ಈ ಹೊಸ ದರಗಳು ಪ್ರಧಾನ್ ಮಂತ್ರಿ ಉಜ್ವಲ ಯೋಜನೆಯ (ಪಿಎಂಯುವೈ) ಫಲಾನುಭವಿಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸರ್ಕಾರಿ ಸ್ವಾಮ್ಯದ ತೈಲ ಮತ್ತು ಅನಿಲ ಕಂಪನಿ ಹೇಳಿದೆ. ಏಕೆಂದರೆ ಅವುಗಳು ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆಗೆ ಒಳಪಟ್ಟಿವೆ

English summary
LPG cylinder prices were again hiked by Rs 25 on Monday. Just three days ago, the prices were hiked by Rs 25.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X