Get Updates
Get notified of breaking news, exclusive insights, and must-see stories!

ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ

ನವದೆಹಲಿ, ನವೆಂಬರ್ 02: ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ದರಗಳ ಏರಿಳಿತ, ಡಾಲರ್ ಎದುರು ರುಪಾಯಿ ಮೌಲ್ಯ ಕುಸಿತದ ಕಾರಣ ನೀಡಲಾಗಿದೆ. ಸಬ್ಸಿಡಿ ಸಹಿತ ಹಾಗೂ ರಹಿತ ಎಲ್ ಪಿಜಿ ಪ್ರತಿ ಸಿಲಿಂಡರ್ ಮೇಲೆ ಎರಡು ಏರಿಕೆಯಾಗಿದೆ.

ದೀಪಾವಳಿ ವಿಶೇಷ ಪುರವಣಿ

ಶುಕ್ರವಾರ(ನವೆಂಬರ್ 02) ಮಧ್ಯರಾತ್ರಿಯಿಂದ ಜಾರಿಗೊಳ್ಳಲಿರುವ ಪರಿಷ್ಕೃತ ದರದಂತೆ 14.2 ಕೆಜಿ ಸಬ್ಸಿಡಿ ಸಹಿತ ಎಲ್ ಪಿಜಿ ಸಿಲಿಂಡರ್ ಬೆಲೆ 2.94 ರು ಏರಿಕೆಯಾಗಿದೆ. ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ ಪ್ರತಿ ಸಿಲಿಂಡರ್ ಗೆ 60ರು ಹೆಚ್ಚಳವಾಗಿದೆ. ಕಳೆದ 6 ತಿಂಗಳುಗಳಲ್ಲಿ ಸುಮಾರು 14.13ರು ಪ್ರತಿ ಸಿಲಿಂಡರ್ ಗೆ ಏರಿಕೆಯಾಗಿದೆ.

ದೆಹಲಿಯಲ್ಲಿ ಸಬ್ಸಿಡಿ ಸಹಿತ ಎಲ್ ಪಿಜಿ ಸಿಲಿಂದರ್ 505.34 ರು, ಕೋಲ್ಕತಾ 508.7ರು, ಮುಂಬೈ 503.11 ರು , ಚೆನ್ನೈ 493.87 ರು ಏರಿಕೆಯಾಗಿದೆ.

LPG cylinder prices hiked once again. Latest rates in top cities

ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ ದೆಹಲಿಯಲ್ಲಿ 939ರು, ಕೋಲ್ಕತಾ 939.5ರು ಹಾಗೂ ಮುಂಬೈ 912 ರು ಹಾಗೂ ಚೆನ್ನೈನಲ್ಲಿ 958ರು ನಷ್ಟಿದೆ.

ನವೆಂಬರ್ 2018ರಲ್ಲಿ ಗ್ರಾಹಕರ ಬ್ಯಾಂಕ್ ಖಾತೆಗೆ ಸೇರಲಿರುವ ಸಬ್ಸಿಡಿ ವರ್ಗಾವಣೆ ಮೊತ್ತವನ್ನು 433.6 ರು ಪ್ರತಿ ಸಿಲಿಂಡರ್ ಗೆ ಏರಿಕೆ ಮಾಡಲಾಗಿದೆ. ಅಕ್ಟೋಬರ್ ತಿಂಗಳಿನಲ್ಲಿ 376.60ರು ನಷ್ಟಿತ್ತು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ದರ ವ್ಯತ್ಯಯದಿಂದ ಎಲ್ ಪಿಜಿ ಗ್ರಾಹಕರನ್ನು ಈ ಮೂಲಕ ರಕ್ಷಿಸಲಾಗಿದೆ ಎಂದು ಐಒಸಿ ಹೇಳಿದೆ.

ಗಮನಿಸಿ: ಸರ್ಕಾರಿ ಸ್ವಾಮ್ಯದ ಇಂಧನ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ, ಭಾರತ್ ಪೆಟ್ರೋಲಿಯಂ ಪ್ರತಿ ತಿಂಗಳ ಮೊದಲ ದಿನದಂದು ಇಂಧನ ದರ, ಸಬ್ಸಿಡಿ ರಹಿತ ಎಲ್ ಪಿಜಿ, ಜೆಟ್ ಇಂಧನ, ಸೀಮೆಎಣ್ಣೆ ಬೆಲೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತವೆ. ಬೆಲೆ ಏರಿಕೆ ಹಾಗೂ ಇಳಿಕೆ ಎಲ್ಲವೂ ಜಾಗತಿಕ ಮಾರುಕಟ್ಟೆ ದರದ ಮೇಲೆ ಅವಲಂಬಿತವಾಗಿರುತ್ತದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+