ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿ ಅಧಿಕಾರಕ್ಕೆ ಬಂದ ಬಳಿಕ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ

|
Google Oneindia Kannada News

ನವದೆಹಲಿ, ಮೇ 02: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆಗಳ ಏರಿಕೆ ಮಾಡದೆ ನಷ್ಟ ಅನುಭವಿಸಿದ್ದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಈಗ ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ, ಹಂತ ಹಂತವಾಗಿ ಬೆಲೆ ಏರಿಕೆ ಮಾಡಲು ಆರಂಭಿಸಿವೆ.

ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಅಡುಗೆ ಅನಿಲ ಬೆಲೆ ಏರಿಕೆ ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಅಡುಗೆ ಅನಿಲ ಬೆಲೆ ಏರಿಕೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮುಂದುವರೆದಿದೆ. ಈಗ ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ ಮಾಡಲಾಗಿದೆ. ಆದರೆ, ಏರ್ ಟರ್ಬೈನ್ ಇಂಧನ (ಎಟಿಎಫ್) ಬೆಲೆ ತಗ್ಗಿಸಲಾಗಿದೆ.

LPG Cylinder Prices Increased By Rs 25; Jet Fuel Prices slashed

ಸಬ್ಸಿಡಿ ರಹಿತ ಗ್ಯಾಸ್ ಬೆಲೆ 25 ರೂ. ಏರಿಕೆಯಾಗಿದ್ದು, ಜೂನ್ 1 ರಿಂದಲೇ ಜಾರಿಗೆ ಬಂದಿದೆ. ಸಬ್ಸಿಡಿ ಇರುವ ಗ್ಯಾಸ್ ಸಿಲಿಂಡರ್ ಬೆಲೆ 1.23 ರೂ.ಏರಿಕೆಯಾಗಿದೆ. ಇದು ಸತತ ನಾಲ್ಕನೇ ಬಾರಿಗೆ ಎಲ್ ಪಿಜಿ ಬೆಲೆ ಏರಿಕೆಯಾಗಿದೆ.

ಚುನಾವಣೆ ಬಳಿಕ ಇಂಧನ ದರ 70 ರಿಂದ 80 ಪೈಸೆ ಏರಿಕೆ ಚುನಾವಣೆ ಬಳಿಕ ಇಂಧನ ದರ 70 ರಿಂದ 80 ಪೈಸೆ ಏರಿಕೆ

14.2 ಕೆಜಿ ಎಲ್.ಪಿ.ಜಿ. ಸಿಲಿಂಡರ್ ಬೆಲೆ 771.50 ರು ಆಗಲಿದ್ದು, ವಾಣಿಜ್ಯ ಉದ್ದೇಶಿತ ಅಡುಗೆ ಅನಿಲ ಸಿಲಿಂಡರ್(19 ಕೆಜಿ) ಬೆಲೆ ಪರಿಷ್ಕರಣೆ ಮಾಡಲಾಗಿದೆ. 5 ಕೆಜಿ ಗೃಹ ಬಳಕೆಯ ಅಡುಗೆ ಅನಿಲ ಬೆಲೆ 282.50 ರೂ.ಗೆ ಏರಿಕೆಯಾಗಿದೆ. ಇಂಧನ ಬೆಲೆ ಏರಿಕೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಈಗ ಅಡುಗೆ ಅನಿಲ ಬೆಲೆ ಏರಿಕೆಯನ್ನು ಖಂಡಿಸಿದ್ದು, ಬೆಲೆ ಏರಿಕೆ ಹಿಂಪಡೆಯಿರಿ ಎಂದು ಕಾಂಗ್ರೆಸ್ ವಕ್ತಾರ ರಂದೀಪ್ ಸಿಂಗ್ ಸುರ್ಜೇವಾಲ ಆಗ್ರಹಿಸಿದ್ದಾರೆ.

English summary
State-owned oil marketer Indian Oil Corporation Limited (IOCL) marginally increased the rates of 14.2 kg domestically used LPG cylinders while reducing ATF (Air Turbine Fuel) prices. This is the fourth consecutive increase in LPG cylinder prices.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X