• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಗ್ರಾಹಕರೇ ಗಮನಿಸಿ: ವಾಣಿಜ್ಯ ಬಳಕೆ ಅಡುಗೆ ಅನಿಲ ದರ ಏರಿಕೆ

|
Google Oneindia Kannada News

ಬೆಂಗಳೂರು, ಆಗಸ್ಟ್ 2: ಆಗಸ್ಟ್ ತಿಂಗಳ ಆರಂಭದಲ್ಲಿ ನಿರೀಕ್ಷೆಯಂತೆ ಗ್ರಾಹಕರಿಗೆ ಕಹಿ ಸುದ್ದಿ ಸಿಕ್ಕಿದೆ. ವಾಣಿಜ್ಯ ಬಳಕೆ ಅಡುಗೆ ಅನಿಲ ಸಿಲಿಂಡರ್ ದರ ಏರಿಕೆ ಮಾಡಲಾಗಿದೆ. ಆದರೆ, ಗೃಹ ಬಳಕೆ ಅಡುಗೆ ಅನಿಲ ದರದಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಕಳೆದ ತಿಂಗಳು 25.5 ರು ಏರಿಕೆಯಾಗಿತ್ತು.

ಜೂನ್ ತಿಂಗಳಲ್ಲಿ 19 ಕೆಜಿ ಸಿಲಿಂಡರ್ ಬೆಲೆ ಸರಾಸರಿ 45 ರು ತಗ್ಗಿಸಲಾಗಿತ್ತು. ಆದರೆ, ಆಗಸ್ಟ್ ತಿಂಗಳಲ್ಲಿ ವಾಣಿಜ್ಯ ಬಳಕೆ ಅಡುಗೆ ಅನಿಲ ಪ್ರತಿ ಸಿಲಿಂಡರ್ ₹73.5 ರುಪಾಯಿ ಹೆಚ್ಚಳವಾಗಿದೆ.

ಗ್ರಾಹಕರಿಗೆ ಸೂಚನೆ: ಆಗಸ್ಟ್ 1 ರಿಂದ ಏನೆಲ್ಲ ಬದಲಾವಣೆಯಾಗಲಿದೆ? ಗ್ರಾಹಕರಿಗೆ ಸೂಚನೆ: ಆಗಸ್ಟ್ 1 ರಿಂದ ಏನೆಲ್ಲ ಬದಲಾವಣೆಯಾಗಲಿದೆ?

ದರ ಪರಿಷ್ಕರಣೆ ನಂತರ ಆಗಸ್ಟ್ 2ರಿಂದ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆಜಿ ಸಿಲಿಂಡರ್ ಬೆಲೆ 1,623ರು ಆಗಲಿದೆ. ಈ ಮುಂಚೆ 1,500 ರು ಪ್ರತಿ ಸಿಲಿಂಡರ್ ನಷ್ಟಿತ್ತು.

ಮುಂಬೈನಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 1,579.5 ರು, ಕೋಲ್ಕತಾದಲ್ಲಿ 1,629 ರು, ಮೆಟ್ರೋಪಾಲಿಟನ್ ನಗರಗಳ ಪೈಕಿ ಚೆನ್ನೈನಲ್ಲಿ ಅತ್ಯಧಿಕ 1,761 ರು ಆಗಲಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಾಗಿತ್ತು. ಹೀಗಾಗಿ ಭಾರತದಲ್ಲಿಯೂ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆ ಕಂಡಿತ್ತು. ಪೆಟ್ರೋಲ್, ಡೀಸೆಲ್ ದರ ಸೇರಿದಂತೆ ಎಲ್‌ಪಿಜಿ ಸಿಲಿಂಡರ್ ದರದಲ್ಲಿಯೂ ಏರಿಕೆ ಮಾಡಲಾಗಿತ್ತು. ಫೆಬ್ರವರಿ ತಿಂಗಳಲ್ಲಿ ಮೂರನೇ ಬಾರಿಗೆ ಅಡುಗೆ ಅನಿಲ ದರ ಏರಿಕೆ ಮಾಡಿದ್ದ ತೈಲ ಮಾರುಕಟ್ಟೆ ಕಂಪನಿಗಳು, ಮಾರ್ಚ್ ತಿಂಗಳಲ್ಲಿ ಸಿಲಿಂಡರ್ ಬೆಲೆ 25 ರು ಏರಿಕೆ ಮಾಡಲಾಗಿತ್ತು. ಒಟ್ಟಾರೆ ಕಳೆದ ಡಿಸೆಂಬರ್ ತಿಂಗಳಿನಿಂದ 200 ರು ಪ್ರತಿ ಸಿಲಿಂಡರ್ ನಂತೆ ಏರಿಕೆ ಕಾಣಲಾಗಿದೆ.

ಆಗಸ್ಟ್ 2021ರಲ್ಲಿ ಗೃಹಬಳಕೆ 14.2 ಕೆ.ಜಿ ಎಲ್ ಪಿ ಜಿ ಸಿಲಿಂಡರ್ ಬೆಲೆ
ನವದೆಹಲಿ: 834.50ರು (ಜುಲೈ ದರ: 834.50 ರು)
ಬೆಂಗಳೂರು: 837.5ರು
ಮುಂಬೈ: 834.50 ರು
ಕೋಲ್ಕತಾ: 861ರು
ಚೆನ್ನೈ: 850.50ರು

How to; ಅಂಚೆ ಕಚೇರಿ ಮೂಲಕ ಪಾಸ್‌ಪೋರ್ಟ್‌ಗೆ ಅರ್ಜಿ ಹಾಕುವುದು ಹೇಗೆ?How to; ಅಂಚೆ ಕಚೇರಿ ಮೂಲಕ ಪಾಸ್‌ಪೋರ್ಟ್‌ಗೆ ಅರ್ಜಿ ಹಾಕುವುದು ಹೇಗೆ?

19 ಕೆ.ಜಿ ಸಿಲಿಂಡರ್ ದರ

ದೆಹಲಿ: 1623.00 (ಜುಲೈ ದರ:1550.0)
ಮುಂಬೈ: 1579.50 ರು (1507.0)
ಕೋಲ್ಕತಾ: 1629.00ರು (1,598.50)
ಚೆನ್ನೈ: 1761.00ರು (1617.0)

ಗೃಹಬಳಕೆ ಸಿಲಿಂಡರ್ ದರ ಏರಿಕೆ ಇತಿಹಾಸ
ಗೃಹಬಳಕೆ ಸಿಲಿಂಡರ್ ದರ ಏರಿಕೆ ಇತಿಹಾಸ ಗಮನಿಸಿದರೆ 2016ರಲ್ಲಿ ದೆಹಲಿಯಲ್ಲಿ ಆಗಸ್ಟ್ 1, 2016ರಂದು 487 ರು ಇದ್ದ ಸಿಲಿಂಡರ್ ಈಗ 2021ರಂದು 834.5 ರು ಆಗಿದೆ. ಕೋಲ್ಕತಾದಲ್ಲಿ 861ರು, ಮುಂಬೈನಲ್ಲಿ 834.5 ರು ಹಾಗೂ ಚೆನ್ನೈನಲ್ಲಿ 850.5 ರು ಆಗಿದೆ.

ಪೆಟ್ರೋಲ್ ಬೆಲೆ ನಿರಂತರ ಏರಿಳಿತ: ಜಾಗತಿಕವಾಗಿ ಕಚ್ಚಾತೈಲ ಬೆಲೆ ಈ ವಾರದಲ್ಲಿ ಏರಿಕೆಯಾದರೂ ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸತತ 15 ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದೆ. ಆದರೆ, ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ರಾಜಸ್ಥಾನ, ಮಧ್ಯಪ್ರದೇಶ, ಕರ್ನಾಟಕ, ಉತ್ತರಪ್ರದೇಶ, ಹರ್ಯಾಣ, ಜಮ್ಮು ಮತ್ತು ಕಾಶ್ಮೀರ, ಒಡಿಶಾ, ಲಡಾಕ್, ಬಿಹಾರ, ಕೇರಳ, ಪಂಜಾಬ್, ಸಿಕ್ಕಿಂ ಹಾಗೂ ನಾಗಾಲ್ಯಾಂಡ್ ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರು ಪ್ಲಸ್ ದಾಟಿದೆ. ಈ ಪೈಕಿ ಅನೇಕ ರಾಜ್ಯಗಳಲ್ಲಿ ವ್ಯಾಟ್, ಸೆಸ್ ದರ ಅಧಿಕವಾಗಿವೆ.

ಗಮನಿಸಿ: ಸರ್ಕಾರಿ ಸ್ವಾಮ್ಯದ ಇಂಧನ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ, ಭಾರತ್ ಪೆಟ್ರೋಲಿಯಂ ಪ್ರತಿ ತಿಂಗಳ ಮೊದಲ ದಿನದಂದು ಇಂಧನ ದರ, ಸಬ್ಸಿಡಿ ರಹಿತ ಎಲ್ ಪಿಜಿ, ಜೆಟ್ ಇಂಧನ, ಸೀಮೆಎಣ್ಣೆ ಬೆಲೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತವೆ. ಬೆಲೆ ಏರಿಕೆ ಹಾಗೂ ಇಳಿಕೆ ಎಲ್ಲವೂ ಜಾಗತಿಕ ಮಾರುಕಟ್ಟೆ ದರದ ಮೇಲೆ ಅವಲಂಬಿತವಾಗಿರುತ್ತದೆ. ಇದಲ್ಲದೆ ಆರು ತಿಂಗಳಿಗೊಮ್ಮೆ ನೈಸರ್ಗಿಕ ಅನಿಲದ ಸರಾಸರಿ ದರ ನಿಗದಿಪಡಿಸಲಾಗುತ್ತದೆ. ಈ ಹೊಸ ದರಗಳು ಪ್ರಧಾನ್ ಮಂತ್ರಿ ಉಜ್ವಲ ಯೋಜನೆಯ (ಪಿಎಂಯುವೈ) ಫಲಾನುಭವಿಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸರ್ಕಾರಿ ಸ್ವಾಮ್ಯದ ತೈಲ ಮತ್ತು ಅನಿಲ ಕಂಪನಿ ಹೇಳಿದೆ. ಏಕೆಂದರೆ ಅವುಗಳು ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆಗೆ ಒಳಪಟ್ಟಿವೆ.

English summary
LPG gas Price hike: A commercial LPG cylinder in India is now costlier by Rs 73.5, according to the latest price revision for August 1.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X