ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫೆಬ್ರವರಿಯಲ್ಲಿ ಮತ್ತೊಮ್ಮೆ ಅಡುಗೆ ಅನಿಲ ದರ ಏರಿಕೆ

|
Google Oneindia Kannada News

ನವದೆಹಲಿ, ಫೆಬ್ರವರಿ 25: ಫೆಬ್ರವರಿ ತಿಂಗಳಲ್ಲಿ ಮೂರನೇ ಬಾರಿಗೆ ಅಡುಗೆ ಅನಿಲ ದರ ಏರಿಕೆ ಮಾಡಿ ತೈಲ ಮಾರುಕಟ್ಟೆ ಕಂಪನಿಗಳು ಪರಿಷ್ಕೃತ ದರ ಪಟ್ಟಿ ಪ್ರಕಟಿಸಿವೆ. ಗೃಹ ಬಳಕೆಯ 14.2 ಕೆ.ಜಿ ಎಲ್ ಪಿ ಜಿ ಸಿಲಿಂಡರ್ ಬೆಲೆ 25 ರು ಏರಿಕೆ ಮಾಡಲಾಗಿದ್ದು, ಗುರುವಾರದಿಂದಲೇ ಜಾರಿಗೆ ಬರಲಿದೆ. ಒಟ್ಟಾರೆ, ಫೆಬ್ರವರಿ ತಿಂಗಳಲ್ಲಿ 100 ರು ಏರಿಕೆ ಮಾಡಲಾಗಿದೆ.

ಬೆಲೆ ಏರಿಕೆ ನಂತರ ದೆಹಲಿಯಲ್ಲಿ ಅಡುಗೆ ಅನಿಲ ಸಿಲಿಂಡರ್ ಬಲೆ 794 ರು ಆಗಲಿದೆ. ಫೆಬ್ರವರಿ 4, ಫೆ.14 ಹಾಗೂ ಫೆ.25ರಂದು ಎಲ್ ಪಿಜಿ ಸಿಲಿಂಡರ್ ದರ ಏರಿಕೆ ಮಾಡಲಾಗಿದ್ದು, ಇದೇ ಮೊದಲ ಬಾರಿಗೆ ಒಂದೇ ತಿಂಗಳಲ್ಲಿ ಮೂರು ಬಾರಿ ಬೆಲೆ ಹೆಚ್ಚಳ ಮಾಡಿ ದಾಖಲೆ ಬರೆಯಲಾಗಿದೆ. ಒಟ್ಟಾರೆ ಕಳೆದ ಡಿಸೆಂಬರ್ ತಿಂಗಳಿನಿಂದ 200 ರು ಪ್ರತಿ ಸಿಲಿಂಡರ್ ನಂತೆ ಏರಿಕೆ ಕಾಣಲಾಗಿದೆ.

ಮಿಸ್ಡ್ ಕಾಲ್ ಕೊಟ್ಟು ಅಡುಗೆ ಅನಿಲ ಸಿಲಿಂಡರ್ ಬುಕ್ ಮಾಡಿಮಿಸ್ಡ್ ಕಾಲ್ ಕೊಟ್ಟು ಅಡುಗೆ ಅನಿಲ ಸಿಲಿಂಡರ್ ಬುಕ್ ಮಾಡಿ

ಪೆಟ್ರೋಲ್, ಡೀಸೆಲ್ ದರ ಕಳೆದ ಎರಡು ದಿನಗಳಿಂದ ಸ್ಥಿರತೆ ಹೊಂದಿದ್ದರೂ ಅನೇಕ ನಗರಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ 100 ರು ಗಡಿ ದಾಟಿದೆ.

LPG price hike: Cooking gas rate increased

ವಾಟ್ಸಾಪ್ ಮೂಲಕ LPG ಸಿಲಿಂಡರ್ ಬುಕ್ ಮಾಡೋದು ಹೇಗೆ? ವಾಟ್ಸಾಪ್ ಮೂಲಕ LPG ಸಿಲಿಂಡರ್ ಬುಕ್ ಮಾಡೋದು ಹೇಗೆ?

ಗಮನಿಸಿ: ಸರ್ಕಾರಿ ಸ್ವಾಮ್ಯದ ಇಂಧನ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ, ಭಾರತ್ ಪೆಟ್ರೋಲಿಯಂ ಪ್ರತಿ ತಿಂಗಳ ಮೊದಲ ದಿನದಂದು ಇಂಧನ ದರ, ಸಬ್ಸಿಡಿ ರಹಿತ ಎಲ್ ಪಿಜಿ, ಜೆಟ್ ಇಂಧನ, ಸೀಮೆಎಣ್ಣೆ ಬೆಲೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತವೆ. ಬೆಲೆ ಏರಿಕೆ ಹಾಗೂ ಇಳಿಕೆ ಎಲ್ಲವೂ ಜಾಗತಿಕ ಮಾರುಕಟ್ಟೆ ದರದ ಮೇಲೆ ಅವಲಂಬಿತವಾಗಿರುತ್ತದೆ. ಇದಲ್ಲದೆ ಆರು ತಿಂಗಳಿಗೊಮ್ಮೆ ನೈಸರ್ಗಿಕ ಅನಿಲದ ಸರಾಸರಿ ದರ ನಿಗದಿಪಡಿಸಲಾಗುತ್ತದೆ. ಈ ಹೊಸ ದರಗಳು ಪ್ರಧಾನ್ ಮಂತ್ರಿ ಉಜ್ವಲ ಯೋಜನೆಯ (ಪಿಎಂಯುವೈ) ಫಲಾನುಭವಿಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಸರ್ಕಾರಿ ಸ್ವಾಮ್ಯದ ತೈಲ ಮತ್ತು ಅನಿಲ ಕಂಪನಿ ಹೇಳಿದೆ. ಏಕೆಂದರೆ ಅವುಗಳು ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಯೋಜನೆಗೆ ಒಳಪಟ್ಟಿವೆ

English summary
The price of LPG cylinder has been increased for the second time in February. Overall hike to Rs 100 per cylinder in a month.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X