ಸಬ್ಸಿಡಿರಹಿತ ಅಡುಗೆ ಅನಿಲ ದರ ಏರಿಕೆ, ಜೆಟ್ ಇಂಧನ ಬೆಲೆ ಇಳಿಕೆ
ನವದೆಹಲಿ, ಸೆ.02: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಬೆಲೆ ಏರಿಕೆ ಮಾಡದೆ ನಷ್ಟ ಅನುಭವಿಸಿದ್ದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಈಗ ಅಡುಗೆ ಅನಿಲ ದರವನ್ನು ಪರಿಷ್ಕರಿಸಿವೆ. ಗಣೇಶ ಚತುರ್ಥಿ ಹಬ್ಬಕ್ಕೆ ಸರಿಯಾಗಿ ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆಯಾಗಿದೆ.
"ಜೆಟ್ ಇಂಧನ ಬೆಲೆ 1% ಇಳಿಕೆ ಮಾಡಲಾಗಿದೆ. ಸಬ್ಸಿಡಿ ರಹಿತ ಎಲ್ ಪಿಜಿ ಸಿಲಿಂಡರ್ ಬೆಲೆ ಪ್ರತಿ ಸಿಲಿಂಡರ್ ಗೆ 15.5 ರು ಏರಿಕೆಯಾಗಿದೆ, ಸೆ.01ರ ಮಧ್ಯರಾತ್ರಿಯಿಂದ ಪರಿಷ್ಕೃತ ದರಗಳು ಜಾರಿಗೆ ಬರಲಿವೆ" ಎಂದು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಹೇಳಿವೆ.

ದೆಹಲಿಯಲ್ಲಿ ಎಟಿಎಫ್ ಅಥವಾ ಜೆಟ್ ಇಂಧನ ಬೆಲೆ 592.62 ರು ಪ್ರತಿ ಕಿಲೋ ಲೀಟರ್ ಇಳಿಕೆಯಾಗಿದ್ದು, ಕಿಲೋ ಲೀಟರ್ ಗೆ 62,698.86 ರುನಷ್ಟಿದೆ. ಆಗಸ್ಟ್ 01ರಂದು 5.8% ಬೆಲೆ ಇಳಿಕೆ ಮಾಡಲಾಗಿತ್ತು.
14.2 ಕೆಜಿ ತೂಕದ 12 ಸಿಲಿಂಡರ್ ಗಳ ಕೋಟಾ ಮುಗಿದ ಬಳಿಕ ಪಡೆಯುವ ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ ಬೆಲೆ 574.5 ರು ನಿಂದ 590ರುಗೇರಿದೆ.
ಸತತ ನಾಲ್ಕು ತಿಂಗಳು ಬೆಲೆ ಇಳಿಕೆಯಾಗಿತ್ತು
ಆಗಸ್ಟ್ 01ರಂದು ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಇಳಿಕೆಯಾಗಿತ್ತು. ಪ್ರತಿ ಸಿಲಿಂಡರ್ ಬೆಲೆಯಲ್ಲಿ 62.5 ರು ಇಳಿಕೆಯಾಗಿದ್ದು, 637 ರೂ.ನಿಂದ 574.5 ರೂ. ಗೆ ಇಳಿಕೆ ಮಾಡಲಾಗಿತ್ತು.
ಜೂನ್ 02ರಂದು ಸಬ್ಸಿಡಿ ರಹಿತ ಗ್ಯಾಸ್ ಬೆಲೆ 25 ರೂ. ಏರಿಕೆಯಾಗಿತ್ತು. ಸಬ್ಸಿಡಿ ಇರುವ ಗ್ಯಾಸ್ ಸಿಲಿಂಡರ್ ಬೆಲೆ 1.23 ರೂ.ಏರಿಕೆಯಾಗಿತ್ತು ಸತತ ನಾಲ್ಕನೇ ಬಾರಿಗೆ ಎಲ್ ಪಿಜಿ ಬೆಲೆ ಏರಿಕೆಯಾಗಿತ್ತು. ಜುಲೈ ಹಾಗೂ ಆಗಸ್ಟ್ ತಿಂಗಳಿನಲ್ಲಿ ಇಳಿಕೆ ಕಂಡು ಬಂದಿತ್ತು. ಆದರೆ ಈಗ ಮತ್ತೊಮ್ಮೆ ಬೆಲೆ ಏರಿಕೆಯಾಗಿದೆ.
ಎಲ್ಲ ಎಲ್ ಪಿಜಿ ಗ್ರಾಹಕರೂ ಮಾರುಕಟ್ಟೆ ಬೆಲೆಯಲ್ಲಿ ಅನಿಲ ಖರೀದಿ ಮಾಡಬೇಕಿದೆ. ವರ್ಷಕ್ಕೆ 14.2 ಕೆಜಿ ತೂಕದ 12 ಸಿಲಿಂಡರ್‌ಗಳಿಗೆ ಸರ್ಕಾರ ಸಬ್ಸಿಡಿ ಒದಗಿಸುತ್ತಿದ್ದು, ಅದು ನೇರವಾಗಿ ಗ್ರಾಹಕರ ಬ್ಯಾಂಕ್ ಖಾತೆಗೆ ಜಮೆಯಾಗುತ್ತಿದೆ.
ಗಮನಿಸಿ: ಸರ್ಕಾರಿ ಸ್ವಾಮ್ಯದ ಇಂಧನ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ, ಭಾರತ್ ಪೆಟ್ರೋಲಿಯಂ ಪ್ರತಿ ತಿಂಗಳ ಮೊದಲ ದಿನದಂದು ಇಂಧನ ದರ, ಸಬ್ಸಿಡಿ ರಹಿತ ಎಲ್ ಪಿಜಿ, ಜೆಟ್ ಇಂಧನ, ಸೀಮೆಎಣ್ಣೆ ಬೆಲೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತವೆ. ಬೆಲೆ ಏರಿಕೆ ಹಾಗೂ ಇಳಿಕೆ ಎಲ್ಲವೂ ಜಾಗತಿಕ ಮಾರುಕಟ್ಟೆ ದರದ ಮೇಲೆ ಅವಲಂಬಿತವಾಗಿರುತ್ತದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications