ಗ್ರಾಹಕರೇ ಗಮನಿಸಿ: ಅಪರಂಜಿ ಖರೀದಿಗೆ ಹಾಲ್‌ಮಾರ್ಕ್ ಕಡ್ಡಾಯ
ನವದೆಹಲಿ, ಜೂನ್ 16: ಅಪರಂಜಿ(24 ಕ್ಯಾರೆಟ್) ಚಿನ್ನ ಖರೀದಿಗೆ ಬ್ಯೂರೋ ಆಫ್ ಇಂಡಿಯನ್ ಸ್ಟಾಂಡರ್ಡ್ಸ್ (ಬಿಐಎಸ್) ಹಾಲ್‌ಮಾರ್ಕ್ ಕಡ್ಡಾಯವಾಗಿದೆ. ಜೂನ್ 16ರಿಂದ ಈ ಯೋಜನೆ ಹಂತಹಂತವಾಗಿ ದೇಶದೆಲ್ಲೆಡೆ ಜಾರಿಗೆ ಬಂದಿದೆ.
ಗ್ರಾಹಕರ ಹಿತ ರಕ್ಷಿಸಲು ಚಿನ್ನಾಭರಣಗಳ ಮೇಲೆ ಹಾಲ್‌ಮಾರ್ಕ್ ಕಡ್ಡಾಯಗೊಳಿಸಬೇಕು ಎಂದು ಭಾರತದ ಮಹಾಲೇಖಪಾಲಕರು(CAG) ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದ ಪ್ರಸ್ತಾವನೆಗೆ ಒಪ್ಪಿಗೆ ಸಿಕ್ಕಿ, ಹಾಲ್ ಮಾರ್ಕ್ ಕಡ್ಡಾಯಗೊಳಿಸಿ ಹತ್ತು ವರ್ಷ ಕಳೆದರೂ ಇನ್ನೂ ಪೂರ್ಣಪ್ರಮಾಣದಲ್ಲಿ ಪರಿಶುದ್ಧ ಚಿನ್ನ ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಈ ಬಾರಿ ಮೋದಿ ಸರ್ಕಾರ ಕಟ್ಟುನಿಟ್ಟಾಗಿ ಹಾಲ್‌ಮಾರ್ಕ್ ಕಡ್ಡಾಯಗೊಳಿಸಲು ಮುಂದಾಗಿದೆ.
''ಗ್ರಾಹಕ ವ್ಯವಹಾರಗಳ ಸಚಿವಾಲಯದ ವ್ಯಾಪ್ತಿಯಲ್ಲಿರುವ ಬ್ಯೂರೋ ಆಫ್ ಇಂಡಿಯನ್ ಸ್ಟಾಂಡರ್ಡ್ಸ್ (ಬಿಐಎಸ್) ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡಿದ್ದು, 256 ಜಿಲ್ಲಾ ಕೇಂದ್ರಗಳಲ್ಲಿ ಪ್ರಾಥಮಿಕ ಹಂತದಲ್ಲಿ ಜಾರಿಗೆ ಬರಲಿದೆ,'' ಎಂದು ಗ್ರಾಹಕ ವ್ಯವಹಾರ ಖಾತೆ ಕೇಂದ್ರ ಸಚಿವ ಪಿಯೂಷ್ ಗೋಯೆಲ್ ಹೇಳಿದ್ದಾರೆ.

ಚಿನ್ನಾಭರಣಗಳ ಮೇಲೆ ಹಾಲ್‌ಮಾರ್ಕ್ ಕಡ್ಡಾಯಗೊಳಿಸದಿರುವುದರಿಂದ ಆಭರಣ ತಯಾರಕರು ಸಮರ್ಪಕವಾಗಿ ಭಾರತೀಯ ಆಭರಣಗಳನ್ನು ನೀಡದಿರುವುದರಿಂದ ಗ್ರಾಹಕರು ಪರಿಶುದ್ಧವಲ್ಲದ ಆಭರಣಗಳನ್ನು ಖರೀದಿಸುತ್ತಿದ್ದಾರೆ ಎಂದು ಸಿಎಜಿ ತನ್ನ ವರದಿಯಲ್ಲಿ ತಿಳಿಸಿತ್ತು.
ಚಿನ್ನಾಭರಣವನ್ನು ಎಲ್ಲಿ ತಯಾರು ಮಾಡಲಾಗಿದೆ? ಯಾವ ವರ್ಷ ತಯಾರಿಸಲಾಗಿದೆ ಎಂಬುದನ್ನು ತಿಳಿಸುತ್ತದೆ. ಇದಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಲಾಗ್ ಇನ್(http://www.bis.org.in) ಆಗುವುದರ ಮುಖೇನ ಪಡೆದುಕೊಳ್ಳಬಹುದು
''ಬಿಐಎಸ್‌ನಲ್ಲಿ ಇಲ್ಲಿ ತನಕ 34,647 ಆಭರಣ ಸಂಸ್ಥೆಗಳು ನೋಂದಣಿ ಮಾಡಿಕೊಂಡಿವೆ. ಶೇ 40ರಷ್ಟು ಮಾತ್ರ ಹಾಲ್ ಮಾರ್ಕ್ ಪಡೆಯಲು ಸಾಧ್ಯವಾಗಿವೆ.ಇನ್ಮುಂದೆ ಬಿಐಎಸ್ ನೋಂದಣಿ, ಹಾಲ್ ಮಾರ್ಕ್ ಇಲ್ಲದ ಆಭರಣಗಳಿಗೆ ಮಾನ್ಯತೆ ಇರುವುದಿಲ್ಲ,ಜೂನ್ 16 ರಿಂದ ಆಭರಣಗಾರರು 14, 18 ಹಾಗೂ 22 ಕ್ಯಾರೆಟ್ ಚಿನ್ನಾಭರಣಗಳನ್ನು ಮಾತ್ರ ಮಾರಾಟ ಮಾಡಬಹುದಾಗಿದೆ. ಅಪರಂಜಿ ಚಿನ್ನ ಮಾರಾಟಕ್ಕೆ ನೋಂದಣಿ, ಪರಿಶುದ್ಧತೆಯ ಮುದ್ರೆ ಅಗತ್ಯ,'' ಎಂದು ಗ್ರಾಹಕ ವ್ಯವಹಾರ ಇಲಾಖೆ ಕಾರ್ಯದರ್ಶಿ ಲೀನಾ ನಂದನ್ ಪಿಟಿಐಗೆ ತಿಳಿಸಿದ್ದಾರೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ












Click it and Unblock the Notifications