Gold Price: ಇಂದು ಮತ್ತಷ್ಟು ಹೆಚ್ಚಾದ ಬಂಗಾರದ ಬೆಲೆ: ಬೆಳ್ಳಿಯೂ ಬಲು ದುಬಾರಿ
ಬೆಂಗಳೂರು, ಮಾರ್ಚ್ 29: ಬಂಗಾರದ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನಿನ್ನೆಗಿಂತ ಇಂದು ಚಿನ್ನದ ದರ ಮತ್ತಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆಯೂ ಕೂಡ ಹೆಚ್ಚಾಗಿದ್ದು, ಶುಭಕಾರ್ಯಗಳಿಗೆ ಚಿನ್ನ ಖರೀದಿಸಬೇಕು ಎಂದುಕೊಂಡವರು ಯೋಚಿಸುವಂತಾಗಿದೆ.
ಇನ್ನೇನು ಯುಗಾದಿ ಹಬ್ಬ ಸಮೀಪಿಸುತ್ತಿದ್ದು, ನಿಶ್ಚಿತಾರ್ಥ-ಮದುವೆಯಂತಹ ಸಮಾರಂಭಗಳ ಸಂಖ್ಯೆ ಹೆಚ್ಚಾಗಿದೆ. ಶುಭಕಾರ್ಯಗಳು ಕೂಡ ಭರದಿಂದ ಸಾಗುತ್ತಿದ್ದು, ಶುಭ ಸಮಾರಂಭಗಳಿಗೆ ಚಿನ್ನಾಭರಣಕೊಳ್ಳುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಶುಭ ಸಮಾರಂಭಗಳು ಹೆಚ್ಚಿರುವ ಈ ಸಮಯದಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆ ಹಿಂದಿಗಿಂತ ದುಬಾರಿಯೇ ಇದೆ.

ಸದ್ಯ ಭಾರತದಲ್ಲಿ 22 ಕ್ಯಾರಟ್ ಚಿನ್ನದ 10 ಗ್ರಾಂ ಬೆಲೆ 61,700 ರೂಪಾಯಿ ಇದ್ದು, 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 10 ಗ್ರಾಂ ಬೆಲೆ 67,310 ರೂಪಾಯಿ ಇದೆ. ಇನ್ನು 100 ಗ್ರಾಂ ಬೆಳ್ಳಿಯ ಬೆಲೆ 7,750 ರೂಪಾಯಿ ಇದೆ. ಹಾಗಾದರೆ ಇಂದು (ಮಾರ್ಚ್ 29) ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿನ ದರಗಳ ವಿವರವನ್ನು ಇಲ್ಲಿ ತಿಳಿಯಿರಿ.
ಒಂದು ಗ್ರಾಂ ಚಿನ್ನದ ದರ
* 22 ಕ್ಯಾರೆಟ್ ಚಿನ್ನದ ದರ - 6,170 ರೂಪಾಯಿ
* 24 ಕ್ಯಾರೆಟ್ ಚಿನ್ನದ ದರ - 6,731 ರೂಪಾಯಿ
10 ಗ್ರಾಂ ಚಿನ್ನದ ದರ
* 22 ಕ್ಯಾರೆಟ್ ಆಭರಣ ಚಿನ್ನದ ದರ - 61,700 ರೂಪಾಯಿ
* 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - 67,310 ರೂಪಾಯಿ
8 ಗ್ರಾಂ ಚಿನ್ನದ ದರ
* 22 ಕ್ಯಾರೆಟ್ ಆಭರಣ ಚಿನ್ನದ ದರ - 49,360 ರೂಪಾಯಿ
* 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - 53,848 ರೂಪಾಯಿ
ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
* ಬೆಂಗಳೂರು- 61,700 ರೂಪಾಯಿ
* ಚೆನ್ನೈ - 62,500 ರೂಪಾಯಿ
*ಮುಂಬೈ - 61,700 ರೂಪಾಯಿ
* ಕೇರಳ -61,700 ರೂಪಾಯಿ
* ಕೋಲ್ಕತ್ತಾ - 61,700 ರೂಪಾಯಿ
* ಜೈಪುರ್ -61,850 ರೂಪಾಯಿ
* ಭುವನೇಶ್ವರ್- 61,700 ರೂಪಾಯಿ
*ಅಹ್ಮದಾಬಾದ್- 61,750 ರೂಪಾಯಿ
*ಲಕ್ನೋ - 61,850 ರೂಪಾಯಿ
* ನವದೆಹಲಿ - 61,850 ರೂಪಾಯಿ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
* ಬೆಂಗಳೂರು-7,750 ರೂಪಾಯಿ
* ಚೆನ್ನೈ- 8,050 ರೂಪಾಯಿ
* ಮುಂಬೈ-7,750 ರೂಪಾಯಿ
* ಕೋಲ್ಕತ್ತಾ-7,750 ರೂಪಾಯಿ
* ನವದೆಹಲಿ-7,750 ರೂಪಾಯಿ












Click it and Unblock the Notifications