May 02 Gold Price: ಚಿನ್ನದ ಬೆಲೆಯಲ್ಲಿ ಬಂಪರ್ ಕುಸಿತ, ಇಂದಿನ ಚಿನ್ನ & ಬೆಳ್ಳಿ ಬೆಲೆ ಇಲ್ಲಿದೆ!
ಚಿನ್ನ ಪ್ರಿಯರು ಖುಷಿಪಡುವ ಸುದ್ದಿ ಇಲ್ಲಿದೆ. ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿದೆ. ಮೇ ಮೊದಲ ವಾರದಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದ್ದು. ಚಿನ್ನ ಪ್ರಿಯರು ಖುಷಿಪಡುವ ನ್ಯೂಸ್ ಇಲ್ಲಿದೆ. ಕಳೆದ ಎರಡು ತಿಂಗಳ ಅವಧಿಯಲ್ಲಿ ಚಿನ್ನದ ಬೆಲೆಯು ಬರೋಬ್ಬರಿ 1,00,000 ಲಕ್ಷ ರೂಪಾಯಿ ತಲುಪಿತ್ತು. ಇದೀಗ ಚಿನ್ನದ ಬೆಲೆಯು ಇಳಿಕೆ ಹಾದಿಯಲ್ಲಿ ಸಾಗಿದೆ. ಚಿನ್ನದ ಬೆಲೆಯು ನಿರಂತರವಾಗಿ ಇಳಿಕೆಯಾಗುತ್ತಿದೆ. ಮೇ 2ರ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ. ನೆನ್ನೆಗಿಂತ ಇಂದು ಚಿನ್ನ ಹಾಗೂ ಬೆಳ್ಳಿ ಬೆಲೆ ಎಷ್ಟು ಕಡಿಮೆಯಾಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಚಿನ್ನ ಹಾಗೂ ಬೆಳ್ಳಿ ಬೆಲೆಯು ನಿರಂತರವಾಗಿ ಇಳಿಕೆಯಾಗುತ್ತಿದೆ. ಇದೀಗ ಚಿನ್ನದ ಬೆಲೆಯು ಕಳೆದ ಎರಡರಿಂದ ಮೂರು ವಾರದ ಅವಧಿಯಲ್ಲಿ ಗೋಲ್ಡ್ ಬೆಲೆಯು 5,000 ಸಾವಿರ ರೂಪಾಯಿ ಸಮೀಪಕ್ಕೆ ಇಳಿಕೆಯಾಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದೆ. ವಿವಿಧ ಕಾರಣಗಳಿಗೆ ಚಿನ್ನದ ಬೆಲೆ ಇಳಿಕೆಗಿಂತ ಏರಿಕೆಯೇ ಆಗಬಹುದು ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ, ಆ ಲೆಕ್ಕಾಚಾರಗಳು ತಲೆಕೆಳಗಾಗಿವೆ. ಚಿನ್ನದ ಬೆಲೆಯು ಇದೀಗ ಪ್ರತಿ 10 ಗ್ರಾಂ ಬೆಲೆಯು 95,510 ರೂಪಾಯಿ ಆಗಿದೆ.

18 ಕ್ಯಾರೆಟ್ ಚಿನ್ನದ ಬೆಲೆ: ಮೇ 2ರಂದು 18 ಕ್ಯಾರೆಟ್ ಚಿನ್ನದ ಬೆಲೆಯು ಪ್ರತಿ 1 ಗ್ರಾಂಗೆ 7,164 ರೂಪಾಯಿ ಆಗಿದೆ. 10 ಗ್ರಾಂಗೆ 71,640 ರೂಪಾಯಿ ಆಗಿದೆ. ನೆನ್ನೆಗಿಂತ 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 160 ರೂಪಾಯಿ ಇಳಿಕೆಯಾಗಿದೆ.
22 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 22 ಕ್ಯಾರೆಟ್ ಚಿನ್ನದ ಬೆಲೆ ಸಹ ಇಳಿಕೆಯಾಗಿದೆ. 1 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆಯು 8,755 ರೂಪಾಯಿ ಹಾಗೂ 10 ಗ್ರಾಂ ಬೆಲೆಯು 87,550 ರೂಪಾಯಿ ಆಗಿದೆ. ನೆನ್ನೆಗಿಂತ ಚಿನ್ನದ ಬೆಲೆಯು 200 ರೂಪಾಯಿ ಇಳಿಕೆಯಾಗಿದೆ.

24 ಕ್ಯಾರೆಟ್ ಚಿನ್ನದ ಬೆಲೆ: 24 ಕ್ಯಾರೆಟ್ ಚಿನ್ನದ ಬೆಲೆ 1 ಗ್ರಾಂಗೆ 9,551 ರೂಪಾಯಿ ಆಗಿದೆ. 10 ಗ್ರಾಂಗೆ 95,510 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆಯು ಬರೋಬ್ಬರಿ 220 ರೂಪಾಯಿಯ ವರೆಗೆ ಇಳಿಕೆಯಾಗಿದೆ.
ಬೆಳ್ಳಿ ಬೆಲೆ ಎಷ್ಟಿದೆ ?
ಇನ್ನು ಬೆಳ್ಳಿ ಬೆಲೆಯಲ್ಲೂ ಇಳಿಕೆಯಾಗಿದೆ. ಬೆಳ್ಳಿ ಬೆಲೆಯು ಪ್ರತಿ ಗ್ರಾಂಗೆ 98 ರೂಪಾಯಿ ಆಗಿದೆ. ಪ್ರತಿ ಕೆ.ಜಿ ಬೆಳ್ಳಿ ಬೆಲೆಯು 98,000 ಸಾವಿರ ರೂಪಾಯಿ ಆಗಿದೆ. ಬೆಳ್ಳಿ ಹಾಗೂ ಚಿನ್ನದ ಬೆಲೆಯು ಯಥಾಸ್ಥಿತಿ ಮುಂದುವರಿದಿದೆ.
ಚಿನ್ನ ಖರೀದಿ ಹೆಚ್ಚಳ: ಇನ್ನು ಕಳೆದ ಎರಡು ವರ್ಷದ ಅವಧಿಯಲ್ಲಿ ಚಿನ್ನದ ಬೆಲೆಯು ನಿರಂತರವಾಗಿ ಏರಿಕೆಯಾಗುತ್ತಲ್ಲೇ ಇದೆ. ಚಿನ್ನದ ಬೆಲೆಯು 1 ಲಕ್ಷ ರೂಪಾಯಿ ತಲುಪಿದ ಸಂದರ್ಭದಲ್ಲಿ ಚಿನ್ನದ ಬೆಲೆ ಇನ್ನಷ್ಟು ಹೆಚ್ಚಳವಾಗಬಹುದು ಎಂದು ಹೇಳಲಾಗಿತ್ತು. ಆದರೆ, ಚಿನ್ನದ ಬೆಲೆಯು ಇದೀಗ ಇಳಿಕೆಯ ಹಾದಿಯಲ್ಲಿ ಸಾಗಿದೆ. ಆದರೆ ಚಿನ್ನದ ಬೆಲೆ ಏರಿಕೆಯಾದರೂ ಚಿನ್ನವನ್ನು ಖರೀದಿ ಮಾಡುವ ಪ್ರಮಾಣ ಇಳಿಕೆಯಾಗಿಲ್ಲ.












Click it and Unblock the Notifications