ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಟಿಕ್‌ಟಾಕ್ ಖರೀದಿಗೆ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಜೊತೆ ಮೈಕ್ರೋಸಾಫ್ಟ್‌ ಮಾತುಕತೆ

|
Google Oneindia Kannada News

ವಾಷಿಂಗ್ಟನ್, ಆಗಸ್ಟ್‌ 03: ಚೀನಾದ ಬೈಟ್‌ಡ್ಯಾನ್ಸ್‌ ಕಂಪನಿಯ ಒಡೆತನದ ಟಿಕ್‌ಟಾಕ್ ಅನ್ನು ಕಪ್ಪುಪಟ್ಟಿಗೆ ಸೇರಿಸುವುದಾಗಿ ಅಮೆರಿಕಾ ಬೆದರಿಕೆ ಹಾಕಿದ ಬೆನ್ನಲ್ಲೇ ಟಿಕ್‌ಟಾಕ್ ಅಮೆರಿಕಾದ ಕಾರ್ಯಾಚರಣೆಯನ್ನು ಸ್ವಾಧೀನಪಡಿಸಿಕೊಳ್ಳುವ ಯೋಜನೆಯನ್ನು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರೊಂದಿಗೆ ಚರ್ಚಿಸಿದೆ ಎಂದು ಮೈಕ್ರೋಸಾಫ್ಟ್‌ ಭಾನುವಾರ ಹೇಳಿದೆ.

"ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ಮತ್ತು ಅಧ್ಯಕ್ಷ ಡೊನಾಲ್ಡ್ ಜೆ. ಟ್ರಂಪ್ ನಡುವಿನ ಸಂಭಾಷಣೆಯ ನಂತರ, ಮೈಕ್ರೋಸಾಫ್ಟ್ ಅಮೆರಿಕಾದಲ್ಲಿ ಟಿಕ್‌ಟಾಕ್ ಖರೀದಿಯನ್ನು ಅನ್ವೇಷಿಸಲು ಚರ್ಚೆಗಳನ್ನು ಮುಂದುವರಿಸಲು ಸಿದ್ಧವಾಗಿದೆ" ಎಂದು ಸಾಫ್ಟ್‌ವೇರ್ ದೈತ್ಯ ಬ್ಲಾಗ್ ಪೋಸ್ಟ್‌ನಲ್ಲಿ ತಿಳಿಸಿದೆ.

ಅಮೆರಿಕದಲ್ಲಿ ಟಿಕ್‌ಟಾಕ್ ಬ್ಯಾನ್: ಡೊನಾಲ್ಡ್ ಟ್ರಂಪ್ ಹೇಳಿದ್ದೇನು?ಅಮೆರಿಕದಲ್ಲಿ ಟಿಕ್‌ಟಾಕ್ ಬ್ಯಾನ್: ಡೊನಾಲ್ಡ್ ಟ್ರಂಪ್ ಹೇಳಿದ್ದೇನು?

ಟಿಕ್‌ಟಾಕ್ ಖರೀದಿ ಕುರಿತು ಇದು ಮೈಕ್ರೋಸಾಫ್ಟ್‌ನ ಮೊದಲ ಸಾರ್ವಜನಿಕ ಅಂಗೀಕಾರವಾಗಿದ್ದು, ಟಿಕ್ ಟಾಕ್ ಅನ್ನು ಸ್ವಾಧೀನಪಡಿಸಿಕೊಳ್ಳಲು ಮಾತುಕತೆ ನಡೆಸುತ್ತಿದೆ. ಅಲ್ಲದೆ ಇದು ಶತಕೋಟಿ ಡಾಲರ್ ಮೌಲ್ಯದ ಒಪ್ಪಂದವಾಗಿದೆ.

Microsoft Consults With Trumps To Buy Tiktok US Operations

"ಅಧ್ಯಕ್ಷರ ಕಳವಳಗಳನ್ನು ಪರಿಹರಿಸುವ ಮಹತ್ವವನ್ನು ಮೈಕ್ರೋಸಾಫ್ಟ್ ಸಂಪೂರ್ಣವಾಗಿ ಶ್ಲಾಘಿಸುತ್ತದೆ. ಸಂಪೂರ್ಣ ಭದ್ರತಾ ಪರಿಶೀಲನೆಗೆ ಒಳಪಟ್ಟಂತೆ ಟಿಕ್ ಟಾಕ್ ಅನ್ನು ಸ್ವಾಧೀನಪಡಿಸಿಕೊಳ್ಳಲು ಮತ್ತು ಯುನೈಟೆಡ್ ಸ್ಟೇಟ್ಸ್ ಖಜಾನೆ ಸೇರಿದಂತೆ ಯುನೈಟೆಡ್ ಸ್ಟೇಟ್ಸ್‌ಗೆ ಸರಿಯಾದ ಆರ್ಥಿಕ ಪ್ರಯೋಜನಗಳನ್ನು ಒದಗಿಸಲು ಇದು ಬದ್ಧವಾಗಿದೆ" ಎಂದು ಮೈಕ್ರೋಸಾಫ್ಟ್ ಹೇಳಿದೆ.

ಅಮೆರಿಕಾ, ಕೆನಡಾ, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ಗಳಲ್ಲಿ ಟಿಕ್‌ಟಾಕ್ ಸೇವೆಯನ್ನು ಖರೀದಿಸಲು ಮೈಕ್ರೋಸಾಫ್ಟ್ ಎದುರು ನೋಡುತ್ತಿದೆ ಮತ್ತು ಈ ಮಾರುಕಟ್ಟೆಗಳಲ್ಲಿ ಅಪ್ಲಿಕೇಶನ್ ಅನ್ನು ನಿರ್ವಹಿಸುತ್ತದೆ ಎಂದು ಹೇಳಿದೆ.

ಇತ್ತೀಚೆಗಷ್ಟೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಚೀನಾದ ಅನೇಕ ಅಪ್ಲಿಕೇಶನ್‌ಗಳನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು, ಟಿಕ್‌ಟಾಕ್ ಬ್ಯಾನ್ ಮಾಡಲಾಗುವುದು ಎಂದು ಬಹಿರಂಗವಾಗಿ ಹೇಳಿದ್ದರು.

English summary
Microsoft said Sunday it has discussed with President Trump its plan to acquire TikTok's U.S. operations.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X