ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೃದಯ್, ಪ್ರಸಾದ್ ಪ್ರವಾಸೋದ್ಯಮ ಯೋಜನೆ ಜಾರಿ: ಅನಂತ್

By Mahesh
|
Google Oneindia Kannada News

ಬೆಂಗಳೂರು, ಸೆ. 08: ಭಾರತ ಸರ್ಕಾರವು ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡುತ್ತಿದ್ದು, ಪ್ರವಾಸೋದ್ಯಮ ಉತ್ತೇಜನಕ್ಕೆ ಅನೇಕ ಯೋಜನೆಗಳನ್ನು ಕೈಗೊಂಡಿದೆ. ಹೃದಯ್ ಹಾಗೂ ಪ್ರಸಾದ್ ಹೆಸರಿನ ಎರಡು ಹೊಸ ಯೋಜನೆಗಳನ್ನು ಸರ್ಕಾರ ಪರಿಚಯಿಸುತ್ತಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಅನಂತಕುಮಾರ್ ಅವರು ಹೇಳಿದರು.

ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಪೆಸಿಫಿಕ್ ಏಷ್ಯಾ ಟ್ರಾವೆಲ್ ಅಸೋಸಿಯೇಷನ್ ನವರು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಏರ್ಪಡಿಸಿದ್ದ 38ನೇ ಪ್ರವಾಸಿ ಮೇಳದ ಎರಡನೇ ದಿನದಂದು ವಸ್ತುಪ್ರದರ್ಶನ ಮಳಿಗೆಗಳನ್ನು ಉದ್ಘಾಟಿಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕಳೆದ ವರ್ಷ ಭಾರತಕ್ಕೆ ಭೇಟಿ ನೀಡಿದ ವಿದೇಶಿ ಪ್ರವಾಸಿಗರ ಸಂಖ್ಯೆ ಶೇ. 9 ರಷ್ಟು ಹೆಚ್ಚಾಗಿದ್ದು, ಒಟ್ಟಾರೆಯಾಗಿ ಆತಿಥ್ಯ ಉದ್ಯಮದಲ್ಲಿ ಶೇ. 15 ರಷ್ಟು ಬೆಳವಣಿಗೆಯಾಗಿದೆ ಎಂದು ಸಚಿವ ಅನಂತಕುಮಾರ್ ಅವರು ತಿಳಿಸಿದರು.

ಪ್ರವಾಸೋದ್ಯಮ ಉತ್ತೇಜನಕ್ಕೆ ಭಾರತ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ವಿವರಿಸಿದ ಅವರು ಭಾರತ ಸರ್ಕಾರವು ವೀಸಾ ಆನ್ ಅರೈವಲ್ ಸೌಲಭ್ಯವನ್ನು ಪ್ರಸ್ತುತ 43 ರಾಷ್ಟ್ರಗಳಿಗೆ ವಿಸ್ತರಿಸಿದ್ದು, ಮುಂದಿನ ದಿನಗಳಲ್ಲಿ 150 ರಾಷ್ಟ್ರಗಳಿಗೆ ವಿಸ್ತರಿಸಲಾಗುವುದು ಎಂದು ಮಾಹಿತಿ ನೀಡಿದರು.

ಹೊಸ ಯೋಜನೆಯಲ್ಲಿ ಕರ್ನಾಟಕದ ಬಾದಾಮಿ

ಹೊಸ ಯೋಜನೆಯಲ್ಲಿ ಕರ್ನಾಟಕದ ಬಾದಾಮಿ

ಭಾರತದ ಪರಂಪರೆಯ ಪ್ರವಾಸಿ ತಾಣಗಳಲ್ಲಿ ಮೂಲಸೌಕರ್ಯ ಒದಗಿಸುವ 'ಹೃದಯ್' ಹಾಗೂ ಯಾತ್ರಾ ಸ್ಥಳಗಳನ್ನು ಅಭಿವೃದ್ಧಿ ಪಡಿಸುವ 'ಪ್ರಸಾದ್' ಎಂಬ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಹೃದಯ್ ಯೋಜನೆಗೆ ಆಯ್ಕೆಯಾದ ಸ್ಥಳಗಳಲ್ಲಿ ರಾಜ್ಯದ ಬಾದಾಮಿಯೂ ಸೇರಿದೆ.

ವಿಷಯಾಧಾರಿತ ಪ್ರವಾಸೋದ್ಯಮದ ಅಭಿವೃದ್ಧಿ

ವಿಷಯಾಧಾರಿತ ಪ್ರವಾಸೋದ್ಯಮದ ಅಭಿವೃದ್ಧಿ

ವಿವಿಧ ವಿಷಯಾಧಾರಿತ ಪ್ರವಾಸೋದ್ಯಮದ ಅಭಿವೃದ್ಧಿಗಾಗಿ ಬೌದ್ಧ ಸರ್ಕ್ಯೂಟ್ ಅನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಅದರಂತೆ ಕರಾವಳಿ ಸರ್ಕ್ಯೂಟ್ , ಹಿಮಾಲಯನ್ ಸರ್ಕ್ಯೂಟ್, ಶ್ರೀಕೃಷ್ಣ ಸರ್ಕ್ಯೂಟ್ ಗಳನ್ನು 150 ಮಿಲಿಯನ್ ಯುಎಸ್ ಡಾಲರ್ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದ.ಭಾರತದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಇರುವ ವಿಫುಲ ಅವಕಾಶಗಳ ಸದ್ಬಳಕೆಗೆ ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳಲಿದೆ

ಪ್ರವಾಸೋದ್ಯಮ ಸಚಿವ ಆರ್.ವಿ. ದೇಶಪಾಂಡೆ

ಪ್ರವಾಸೋದ್ಯಮ ಸಚಿವ ಆರ್.ವಿ. ದೇಶಪಾಂಡೆ

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಸಚಿವ ಆರ್.ವಿ. ದೇಶಪಾಂಡೆ, ರಾಜ್ಯದಲ್ಲಿ ಪ್ರವಾಸೋದ್ಯಮ ನೀತಿಯನ್ನು ಜಾರಿಗೊಳಿಸಲಾಗುತ್ತಿದ್ದು, ಪ್ರವಾಸಿ ತಾಣಗಳ ಮೂಲಸೌಕರ್ಯ ಅಭಿವೃದ್ಧಿ, ಸ್ವಚ್ಛತೆ, ಪ್ರವಾಸಿಗರ ಸುರಕ್ಷತೆಗೆ ಆದ್ಯತೆ ನೀಡಲಾಗುತ್ತಿದೆ. ಜೊತೆಗೆ ರಾಜ್ಯದ ವೈವಿಧ್ಯಮಯ ಪ್ರವಾಸಿ ತಾಣಗಳು, ಸಂಸ್ಕೃತಿ ಪರಂಪರೆಯ ಕುರಿತು ಪ್ರಚಾರ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗುತ್ತಿದೆ

ಮೇಳದ ಯಶಸ್ಸಿಗೆ ಹಿಡಿದ ಕೈಗನ್ನಡಿ

ಮೇಳದ ಯಶಸ್ಸಿಗೆ ಹಿಡಿದ ಕೈಗನ್ನಡಿ

ಮೂರು ದಿನಗಳ(ಸೆ. 06 ರಿಂದ ಸೆ. 08) ಈ ಸಮ್ಮೇಳನದಲ್ಲಿ 61 ದೇಶಗಳು ಹಾಗೂ ಭಾರತ ಎಲ್ಲ ರಾಜ್ಯಗಳ ಪ್ರತಿನಿಧಿಗಳೂ ಸೇರಿದಂತೆ ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದು, ಎಲ್ಲ 350 ವಸ್ತುಪ್ರದರ್ಶನ ಮಳಿಗೆಗಳೂ ಸಕ್ರಿಯವಾಗಿರುವುದು, ಈ ಮೇಳದ ಯಶಸ್ಸಿಗೆ ಹಿಡಿದ ಕೈಗನ್ನಡಿ

 ಪ್ರವಾಸೋದ್ಯಮ ಬೆಳವಣಿಗೆಗೂ ಉತ್ತೇಜನ

ಪ್ರವಾಸೋದ್ಯಮ ಬೆಳವಣಿಗೆಗೂ ಉತ್ತೇಜನ

ಈ ಮೇಳದಿಂದ ಜಾಗತಿಕ ಮಟ್ಟದಲ್ಲಿ ರಾಜ್ಯದ ಪ್ರವಾಸೋದ್ಯಮ ಕ್ಷೇತ್ರಗಳ ಅವಕಾಶವನ್ನು ಪರಿಚಯ ಮಾಡಿಸುವುದರೊಂದಿಗೆ ರಾಜ್ಯದ ಪ್ರವಾಸೋದ್ಯಮ ಬೆಳವಣಿಗೆಗೂ ಉತ್ತೇಜನ ದೊರೆಯಲಿದೆ ಎಂದು ಸಚಿವ ಆರ್ ವಿ ದೇಶಪಾಂಡೆ ಅಭಿಪ್ರಾಯಪಟ್ಟಿದ್ದಾರೆ. ಚಿತ್ರದಲ್ಲಿ ಯಕ್ಷಗಾನ ವೇಷಧಾರಿಗಳ ಜೊತೆ ಕೇಂದ್ರ ಸಚಿವ ಅನಂತ್ ಕುಮಾರ್.

ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ

ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ರಾಜ್ಯದ ಪ್ರವಾಸೋದ್ಯಮ ಚಟುವಟಿಕೆಗಳಿಗೆ ತಮ್ಮ ಇಲಾಖೆ ಸದಾ ಸಹಕಾರ ನೀಡಲಿದೆ ಎಂದು ತಿಳಿಸಿದರು. ಮೈಸೂರಿನ ಜಗತ್‍ಪ್ರಸಿದ್ಧ ದಸರಾದಲ್ಲಿ ಪಾಲ್ಗೊಳ್ಳುವಂತೆ ವಿದೇಶಿ ಪ್ರತಿನಿಧಿಗಳನ್ನು ಅವರು ಆಹ್ವಾನಿಸಿದರು.

ಟ್ರಾವೆಲ್ ಅಸೋಸಿಯೇಷನ್ ನ ಅಧ್ಯಕ್ಷ ಕೆವಿನ್ ಮರ್ಫಿ

ಟ್ರಾವೆಲ್ ಅಸೋಸಿಯೇಷನ್ ನ ಅಧ್ಯಕ್ಷ ಕೆವಿನ್ ಮರ್ಫಿ

ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದ ಪೆಸಿಫಿಕ್ ಏಷ್ಯನ್ ಟ್ರಾವೆಲ್ ಅಸೋಸಿಯೇಷನ್ ನ ಅಧ್ಯಕ್ಷ ಕೆವಿನ್ ಮರ್ಫಿ ಅವರು ಮಾತನಾಡಿ, ತಂತ್ರಜ್ಞಾನ ಹಾಗೂ ಹೂಡಿಕೆ ಕುರಿತ ಗೋಷ್ಠಿಗಳು ಬೆಂಗಳೂರಿನಲ್ಲಿ ನಡೆದ ಈ ಮೇಳದ ವಿಶೇಷತೆಗಳು ಎಂದು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗಣ್ಯರು

ಪತ್ರಿಕಾಗೋಷ್ಠಿಯಲ್ಲಿ ಗಣ್ಯರು

ಪತ್ರಿಕಾಗೋಷ್ಠಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ವಿಷನ್ ಗ್ರೂಪ್ ಅಧ್ಯಕ್ಷ ಮೋಹನ್ ದಾಸ್ ಪೈ, ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪ್ರದೀಪ್ ಸಿಂಗ್ ಖರೋಲಾ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಲತಾ ಕೃಷ್ಣರಾವ್, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾದ ಸತ್ಯವತಿ ಮತ್ತಿತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

English summary
Union Minister for Chemicals and Fertilizers- Ananth Kumar attended Pacific Asia Travel Association (PATA) Travel Mart 2015 at Bangalore international exhibition center (BIEC) said India's tourism department registered a growth as more and more foreigners often visit India for various purpose.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X