N.R.Narayana Murthy: ಬಡತನ ನಿರ್ಮೂಲನೆ ಬಗ್ಗೆ ಇನ್ಫೋಸಿಸ್ ನಾರಾಯಣಮೂರ್ತಿ ನೀತಿ ಪಾಠ
ಇನ್ಫೋಸಿಸ್ ಸಹ ಸಂಸ್ಥಾಪಕ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇದ್ದಾರೆ. ಈಗಾಗಲೇ ಉದ್ಯೋಗಿಗಳು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕೆಂಬ ಹೇಳಿಕೆ ನೀಡಿ ಆಕ್ರೋಶಕ್ಕೆ ಗುರಿಯಾಗಿದ್ದರು. ಇದೀಗ ಬಡತನ ನಿರ್ಮೂಲನೆ ಬಗ್ಗೆ ಮಾತನಾಡಿ ಗಮನ ಸೆಳೆದಿದ್ದಾರೆ. ಹಾಗಾದ್ರೆ ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಕೇವಲ ಉಚಿತ ಕೊಡುಗೆಗಳನ್ನು ಕೊಡುವುದರಿಂದ ದೇಶದಲ್ಲಿನ ಬಡತನ ನಿರ್ಮೂಲನೆ ಆಗುವುದಿಲ್ಲ. ಉದ್ಯೋಗ ಸೃಷ್ಟಿಯಿಂದ ಮಾತ್ರವೇ ಅಭಿವೃದ್ಧಿ ಸಾಧ್ಯ ಎಂದು ಹೇಳಿ ಗಮನ ಸೆಳದಿದ್ದಾರೆ.

ಮುಂಬೈನಲ್ಲಿ ನಡೆದ ಟೈಕೂನ್ ಮುಂಬೈ 2025 ಸಮಾವೇಶದಲ್ಲಿ ಮಾತನಾಡಿದ ಅವರು, ಕೇವಲ ಉಚಿತ ಕೊಡುಗೆ ಕೊಟ್ಟರೆ ಬಡತನ ಮಾಯ ಆಗುತ್ತದೆ ಎಂದುಕೊಂಡಿದ್ದರೆ ಅದು ತಪ್ಪು ಕಲ್ಪನೆಯಾಗಿದೆ. ಇದುವರೆಗೂ ಉಚಿತ ಕೊಡುಗೆಗಳನ್ನು ಕೊಟ್ಟಿರುವ ಯಾವ ದೇಶವೂ ಬಡತನದಿಂದ ಹೊರಬಂದಿಲ್ಲ. ಬದಲಿಗೆ ನಾವು ಹೆಚ್ಚು ಉದ್ಯಮಗಳನ್ನು ಸೃಷ್ಟಿಸಬೇಕು ಸೃಷ್ಟಿಸಬೇಕು ಎಂದು ಹೇಳಿದ್ದಾರೆ.
ಉಚಿತ ವಿದ್ಯುತ್ ಉದಾರಣೆಯಾಗಿ ನೀಡಿದ ಇನ್ಫೋಸಿಸ್ ನಾರಾಯಣ ಮೂರ್ತಿ ಅವರು, ಉಚಿತ ವಿದ್ಯುತ್‌ನಿಂದ ಮಕ್ಕಳಲ್ಲಿ ಓದುವ ಹವ್ಯಾಸ ಹೆಚ್ಚಿದೆಯೇ ಅಥವಾ ಪೋಷಕರ ಕಾಳಜಿ ಹೆಚ್ಚಿದೆಯೇ ಎಂದು ಅರಿಯಲು 6 ತಿಂಗಳಿಗೊಮ್ಮೆ ಸಮೀಕ್ಷೆ ನಡೆಸಬಹುದಾಗಿದೆ ಎಂದು ಹೇಳಿದ್ದಾರೆ.
ಇದೀಗ ಮೊದಲು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಜನರಿಗೆ ಉಪಯೋಗ ಆಗಲೆಂದು 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಮಾಣದ ಅವಕಾಶವನ್ನು ಕಲ್ಪಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮನೆ ಯಮಾನಿ ಬ್ಯಾಂಕ್ ಖಾತೆಗೆ ಮಾಸಿಕ 2,000 ರೂಪಾಯಿ ನೀಡಲಾಗುತ್ತಿದೆ.
ಹಾಗೆಯೇ ಅನ್ನಭಾಗ್ಯ ಯೋಜನೆಯಡಿ ಉಚಿತ ಅಕ್ಕಿಯನ್ನು ನೀಡಲಾಗುತ್ತಿದ್ದು, ಯುವನಿಧಿ ಯೋಜನೆಯಡಿ ನಿರುದ್ಯೋಗ ಯುವಕ, ಯುವಕತಿಯರಿಗೆ ಹಣ ನೀಡಲು ಮುಂದಾಗಿದೆ. ಇದನ್ನು ನೂಡಿಕೊಂಡು ದೇಶದ ಹಲವೆಡೆ ಇದೇ ರೀತಿಯ ಮಾದರಿಯನ್ನು ಅನುಸರಿಸುತ್ತಿದ್ದಾರೆ. ಇನ್ನು ಇದೀಗ ಇನ್ಫೋಸಿಸ್ ನಾರಾಯಣ ಮೂರ್ತಿಯವರು ಈ ಯೋಜನೆಗಳನ್ನಿಟ್ಟುಕೊಂಡು ಏನಾದರೂ ಮಾತನಾಡಿದ್ದಾರೆಯಾ ಎನ್ನುವ ಪ್ರಶ್ನೆ ಮೂಡಿದೆ.












Click it and Unblock the Notifications