New Rules: 2026ರ ಹೊಸ ವರ್ಷಕ್ಕೆ ಎಲ್‌ಪಿಜಿ ದರ, ಪಡಿತರ ಚೀಟಿ ಸೇರಿದಂತೆ ಹಲವು ನಿಯಮಗಳಲ್ಲಿ ಬದಲಾವಣೆ
New Rules: ಹೊಸ ವರ್ಷ 2026 ಎಂಟ್ರಿಗೆ ಕೆಲವೇ ದಿನಗಳು ಮಾತ್ರ ಬಾಕಿಯಿದೆ. ಇನ್ನೂ ಪ್ರತಿ ತಿಂಗಳಿನಂತೆ ಮುಂಬರುವ ಜನವರಿ 1ರಂದು ಎಲ್‌ಪಿಜಿ ದರ ಸೇರಿ ಹಲವು ನಿಯಮಗಳಲ್ಲಿ ಬದಲಾವಣೆಗಳು ಆಗಲಿವೆ. ಹಾಗಾದ್ರೆ. ಯಾವೆಲ್ಲಾ ಹೊಸ ನಿಯಗಳು ಜಾರಿಯಾಗಲಿವೆ? ಇದರಿಂದ ಜನಸಾಮಾನರ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಜನವರಿ 1, 2026 ರಿಂದ, ದೇಶಾದ್ಯಂತ ಹಲವಾರು ಹೊಸ ನಿಯಮಗಳನ್ನು ಜಾರಿಗೆಯಾಗಲಿದೆ. ಇದು ಸಾಮಾನ್ಯ ಜನರ ಮೇಲೆ ನೇರ ಪರಿಣಾಮ ಬೀರುತ್ತದೆ. ಹೀಗೆ ಏನೇ ಬದಲಾವಣೆ ಮಾಡಿದರೂ ಸಹ ಇದರ ಎಫೆಕ್ಟ್ ತಟ್ಟುವುದೇ ಸಾಮಾನ್ಯ ಜನರಿಗೆ. ಹಾಗೆಯೇ ಮುಂಬರುವ ಜನವರಿ ತಿಂಗಳ ಮೊದಲ ದಿನವೇ ದೇಶಾದ್ಯಂತ ಹಲವು ನಿಯಮಗಳಲ್ಲಿ ಪ್ರಮುಖ ಬದಲಾವಣೆಗಳಾಗಲಿವೆ. ಹಾಗಾದ್ರೆ ಅವುಗಳೇನು ಎನ್ನುವ ಪ್ರೆಶ್ನೆಗೆ ಉತ್ತರ ಇಲ್ಲಿದೆ ನೋಡಿ.

ರೈತರು ಗಮನಿಸಬೇಕಾದ ಪ್ರಮುಖ ಅಂಶಗಳು: ರೈತರಿಗೆ ಪಿಎಂ ಕಿಸಾನ್ ಯೋಜನೆಯಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತಿದೆ. ಜನವರಿ 2026, 1ರಿಂದ ಹಲವು ರಾಜ್ಯಗಳಲ್ಲಿ ರೈತ ಐಡಿ ಕಡ್ಡಾಯ ಆಗಲಿದೆ. ರೈತ ಐಡಿ ಇಲ್ಲದಿದ್ದರೆ, ಪಿಎಂ ಕಿಸಾನ್ ಕಂತುಗಳನ್ನು ನಿಲ್ಲಿಸಲಾಗುತ್ತದೆ. ಪಿಎಂಎಫ್‌ಬಿವೈ 2026ರ ಅಡಿಯಲ್ಲಿ, ಕಾಡು ಪ್ರಾಣಿಗಳಿಂದ ಹಾನಿಗೊಳಗಾದ ಖಾರಿಫ್ ಬೆಳೆಗಳಿಗೆ ವಿಮಾ ರಕ್ಷಣೆಯೂ ಲಭ್ಯ ಇರುತ್ತದೆ. ನಷ್ಟಗಳ ವರದಿಯನ್ನು ಈಗ 72 ಗಂಟೆಗಳ ಒಳಗೆ ಕಡ್ಡಾಯ ಮಾಡಲಾಗುತ್ತದೆ.
ಬ್ಯಾಂಕಿಂಗ್ ಮತ್ತು ತೆರಿಗೆ: ಬ್ಯಾಂಕಿಂಗ್ ನಿಯಮಗಳು ಮತ್ತು ಆದಾಯ ತೆರಿಗೆ ರಿಟರ್ನ್ ಫಾರ್ಮ್‌ಗಳು ಸಹ ಬದಲಾಗುತ್ತವೆ. ಹೆಚ್ಚಿನ ಡೇಟಾ-ಚಾಲಿತ ವರದಿಯಿಂದಾಗಿ, ಕ್ರೆಡಿಟ್ ಸ್ಕೋರ್ ನಿಯಮವನ್ನು ಏಪ್ರಿಲ್ 2026ರಿಂದ ಪ್ರತಿ 7 ದಿನಗಳಿಗೊಮ್ಮೆ ಅಪ್ಡೇಟ್ ಮಾಡಲಾಗುತ್ತದೆ. ಇದು ಹಿಂದಿನ 15 ದಿನಗಳಿಗಿಂತ ಹೆಚ್ಚಾಗಿದೆ. ಹೆಚ್ಚುವರಿಯಾಗಿ, ಎಸ್‌ಬಿಐನಂತಹ ಬ್ಯಾಂಕುಗಳು ಸಾಲದ ಬಡ್ಡಿದರಗಳು ಮತ್ತು ಸ್ಥಿರ ಠೇವಣಿ ದರಗಳನ್ನು ಕಡಿಮೆ ಮಾಡಿದ್ದು, ಪರಿಣಾಮ ಮುಂದಿನ ವರ್ಷ ಬೀರಲಿದೆ ಎಂದು ತಿಳಿದುಬಂದಿದೆ.
ಹೊಸ ಡಿಜಿಟಲ್ ಹಾಜರಾತಿ: ಮುಂಬರುವ ಜನವರಿ 1ರಿಂದ ಸರ್ಕಾರಿ ಶಾಲೆಗಳಲ್ಲಿ ಡಿಜಿಟಲ್ ಹಾಜರಾತಿಯನ್ನು ಜಾರಿಗೆ ತರಲಾಗುವುದು. ಅನೇಕ ರಾಜ್ಯಗಳಲ್ಲಿ, ವಿದ್ಯಾರ್ಥಿಗಳ ಹಾಜರಾತಿಯನ್ನು ಈಗ ಟ್ಯಾಬ್‌ಗಳ ಮೂಲಕ ದಾಖಲಿಸಲಾಗುವುದು. ಇದು ಶಾಲೆಗಳು ಮತ್ತು ಆಡಳಿತಗಳಿಗೆ ಸರಿಯಾದ ಮಾಹಿತಿಯನ್ನು ನೀಡಲಿದೆ. ಆದ್ದರಿಂದ ಇದನ್ನು ಜನವರಿಯಿಂದ ಜಾರಿಗೊಳಿಸಲಾಗುವುದು ಎನ್ನುವ ಮಾಹಿತಿ ಲಭ್ಯವಾಗಿದೆ.
ಪಡಿತರ ಚೀಟಿ: 2026ರಿಂದ ಹೊಸ ಪಡಿತರ ಚೀಟಿಗಳಿಗಾಗಿ ಆನ್‌ಲೈನ್ ಅರ್ಜಿ ಸಲ್ಲಿಕೆ ಮಾಡಲು ಹೊಸ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತದೆ. ಇದು ರೈತರು ಮತ್ತು ಗ್ರಾಮೀಣ ನಿವಾಸಿಗಳಿಗೆ ನೇರವಾಗಿ ಪ್ರಯೋಜನವನ್ನ ನೀಡುತ್ತದೆ. ಇದಕ್ಕೆ ಪ್ರಮುಖ ಕಾರಣವೂ ಇದೆ. ಹೊಸ ವ್ಯವಸ್ಥೆಯಿಂದ ಫಲಾನುಭವಿಗಳು ಇನ್ಮುಂದೆ ಪಡಿತರ ಚೀಟಿಗಳಿಗಾಗಿ ಸರತಿ ಸಾಲಿನಲ್ಲಿ ಕಾಯಬೇಕಾಗುವ ಪರಿಸ್ಥಿತಿ ಎದುರಾಗುವುದಿಲ್ಲ.
ಸಾಮಾಜಿಕ ಮಾಧ್ಯಮ: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣ ಚಿಕ್ಕ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ. ಆದ್ದರಿಂದ ಸಾಮಾಜಿಕ ಮಾಧ್ಯಮ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ನಿಯಮಗಳಲ್ಲಿ ಸಹ ಬದಲಾವಣೆಗಳನ್ನು ಜಾರಿಗೊಳಿಸಲಾಗುತ್ತದೆ. 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯು ಈಗ ಆಸ್ಟ್ರೇಲಿಯಾ ಮತ್ತು ಮಲೇಷ್ಯಾದಲ್ಲಿ ಇರುವಂತೆ ಕಠಿಣ ನಿಯಮಗಳಿಗೆ ಒಳಪಟ್ಟಿರುತ್ತದೆ.
ಎಲ್‌ಪಿಜಿ, ಇಂಧನ ಬೆಲೆಗಳು: ತೈಲ ಮಾರುಕಟ್ಟೆ ಕಂಪನಿಗಳು ಪ್ರತಿ ತಿಂಗಳ ಮೊದಲ ದಿನವೇ ಎಲ್‌ಪಿಜಿ ಮತ್ತು ಏರ್ ಟರ್ಬೈನ್ ಇಂಧನ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತದೆ. ಅದರಲ್ಲೂ ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ಬದಲಾವಣೆಗಳಾಗುತ್ತಿರುತ್ತವೆ. ಡಿಸೆಂಬರ್ 1ರಂದು ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು 10 ರೂಪಾಯಿ ಕಡಿಮೆ ಮಾಡಲಾಯಿತು. ಇನ್ನೂ ಜನವರಿಯಲ್ಲಿ ಗೃಹಬಳಕೆಯ ಸಿಲಿಂಡರ್‌ಗಳ ದರ ಇಳಿಕೆಯಾಗುವ ನಿರೀಕ್ಷೆಯಲ್ಲಿ ಸಾಮಾನ್ಯ ಜನರಿದ್ದಾರೆ. ಒಟ್ಟಿನಲ್ಲಿ ರೈತರು, ಪಡಿತರ ಚೀಟಿ, ಸಾಮಾಜಿಕ ಮಾಧ್ಯಮ ಹಾಗೂ ಎಲ್‌ಪಿಜಿ ನಿಯಮಗಳಲ್ಲಿ ಬದಲಾವಣೆಯಾಗಲಿದ್ದು, ಇವುಗಳ ಪರಿಣಾಮ ಸಾಮಾನ್ಯ ಜನರ ಮೇಲೆ ಹೆಚ್ಚಾಗಿ ಪರಿಣಾಮ ಬೀರುವುದಂತೂ ಗ್ಯಾರಂಟಿ.
-
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ? ಇಲ್ಲಿದೆ ಏಪ್ರಿಲ್ 13ರ ದರಪಟ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ












Click it and Unblock the Notifications