Get Updates
Get notified of breaking news, exclusive insights, and must-see stories!

ಷೇರುಪೇಟೆ: ಸೆನ್ಸೆಕ್ಸ್‌ ಮತ್ತಷ್ಟು ಎತ್ತರಕ್ಕೆ ಜಿಗಿತ, 15,000 ಗಡಿ ಸಮೀಪಿಸುತ್ತಿದೆ ನಿಫ್ಟಿ

ನವದೆಹಲಿ, ಫೆಬ್ರವರಿ 04: ಭಾರತೀಯ ಷೇರುಪೇಟೆಯಲ್ಲಿ ಗೂಳಿ ಓಟ ಜೋರಾಗಿಯೇ ಮುಂದುವರಿದಿದ್ದು, ಗುರುವಾರ ಸೆನ್ಸೆಕ್ಸ್ ಮತ್ತು ನಿಫ್ಟಿ ಹೊಸ ದಾಖಲೆಯ ಮಟ್ಟವನ್ನು ತಲುಪಿದೆ. ಮುಂಬೈ ಷೇರುಪೇಟೆ ಸೆನ್ಸೆಕ್ಸ್ 358 ಪಾಯಿಂಟ್ಸ್‌ ಏರಿಕೆಗೊಂಡರೆ, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 105 ಪಾಯಿಂಟ್ಸ್ ಹೆಚ್ಚಳಗೊಂಡಿದೆ.

ಬಿಎಸ್‌ಇ ಸೂಚ್ಯಂಕ ಸೆನ್ಸೆಕ್ಸ್ ಶೇಕಡಾ 0.71ರಷ್ಟು ಅಥವಾ 358.54 ಪಾಯಿಂಟ್ಸ್ ಹೆಚ್ಚಳಗೊಂಡು 50614.29 ಪಾಯಿಂಟ್ಸ್ ತಲುಪಿದೆ. ಎನ್‌ಎಸ್‌ಇ ಸೂಚ್ಯಂಕ ನಿಫ್ಟಿ ಶೇಕಡಾ 0.71ರಷ್ಟು ಅಥವಾ 105.70 ಪಾಯಿಂಟ್ಸ್ ಏರಿಕೆಗೊಂಡು 14895.70 ಪಾಯಿಂಟ್ಸ್‌ ದಾಖಲಾಗಿದೆ.

ಇಂದು 1813 ಷೇರುಗಳು ಏರಿಕೆಗೊಂಡರೆ, 1110 ಷೇರುಗಳು ಇಳಿಕೆಗೊಂಡಿವೆ ಮತ್ತು 142 ಷೇರುಗಳ ಮೌಲ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

Nifty Ends Near 14,900: Sensex Gains 358 Points

ಐಟಿಸಿ, ಎಸ್‌ಬಿಐ, ಬಜಾಜ್ ಫೈನಾನ್ಸ್, ಕೋಲ್ ಇಂಡಿಯಾ ಮತ್ತು ಒಎನ್‌ಜಿಸಿ ನಿಫ್ಟಿಯಲ್ಲಿ ಪ್ರಮುಖ ಲಾಭ ಗಳಿಸಿದ ಷೇರುಗಳಾಗಿದ್ದು, ಏಷ್ಯನ್ ಪೇಂಟ್ಸ್, ಯುಪಿಎಲ್, ಸಿಪ್ಲಾ, ಇಂಡಸ್ಇಂಡ್ ಬ್ಯಾಂಕ್ ಮತ್ತು ಟಾಟಾ ಮೋಟಾರ್ಸ್ ನಷ್ಟಗೊಂಡಿವೆ.

ಐಟಿ ಹೊರತುಪಡಿಸಿ ಉಳಿದೆಲ್ಲ ವಲಯ ಸೂಚ್ಯಂಕಗಳು ಹಸಿರು ಬಣ್ಣದಲ್ಲಿ ಕೊನೆಗೊಂಡಿವೆ. ಬಿಎಸ್‌ಇ ಮಿಡ್‌ಕ್ಯಾಪ್ ಮತ್ತು ಸ್ಮಾಲ್‌ಕ್ಯಾಪ್ ಸೂಚ್ಯಂಕಗಳು ತಲಾ 1 ಪ್ರತಿಶತಕ್ಕಿಂತ ಹೆಚ್ಚಾಗಿದೆ.

ಸತತ ನಾಲ್ಕನೇ ವಹಿವಾಟಿನಲ್ಲಿ ದೇಶೀಯ ಇಕ್ವಿಟಿ ಮಾರುಕಟ್ಟೆಯಲ್ಲಿ ಖರೀದಿಯ ಮಧ್ಯೆ ಭಾರತೀಯ ರೂಪಾಯಿ ಪ್ರತಿ ಡಾಲರ್‌ಗೆ 72.96 ಕ್ಕೆ ತಲುಪಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+