ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿದೇಶಿ ಬಂಡವಾಳ ಹೂಡಿಕೆ ಆಕರ್ಷಣೆಗೆ ನೆರವಾದ ಮುರುಗೇಶ್ ನಿರಾಣಿ ದುಬೈ ಭೇಟಿ

|
Google Oneindia Kannada News

ಬೆಂಗಳೂರು, ಅ. 22: 'ದುಬೈ ಎಕ್ಸ್‌ಪೋ 2020' ಭಾಗವಹಿಸಿದ್ದರಿಂದ ರಾಜ್ಯದಲ್ಲಿ ಅನೇಕ ಪ್ರತಿಷ್ಠಿತ ಉದ್ಯಮಿಗಳು ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ಅದರಿಂದ ಉದ್ಯೋಗ ಅವಕಾಶಗಳು ಮತ್ತಷ್ಟು ಹೆಚ್ಚಳವಾಗಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಾಲ್ಕು ದಿನಗಳ ದುಬೈ ಪ್ರವಾಸದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ, "ಮೂರು ದಿನಗಳಲ್ಲಿ ಕಾಲ ನಡೆದ 'ದುಬೈ ಎಕ್ಸ್ ಪೋ'ದಲ್ಲಿ ಐಟಿಬಿಟಿ ಸಚಿವ ಡಾ. ಅಶ್ವಥ್ ನಾರಾಯಣ, ದುಬೈ-ಭಾರತೀಯ ಕೌನ್ಸಿಲರ್ ಡಾ. ಅಮನ್ ಪುರಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ. ರಮಣರೆಡ್ಡಿ, ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಐಟಿಬಿಟಿ ನಿರ್ದೇಶಕ ಮೀನಾ ನಾಗರಾಜ್, ಕೆಐಎಡಿಬಿ ಸಿಇಒ ಡಾ.ಎನ್.ಶಿವಶಂಕರ ಅಧಿಕಾರಿಗಳ ನೇತೃತ್ವದ ನಿಯೋಗವು ಉದ್ಯಮಿಗಳನ್ನು ಭೇಟಿಯಾಗಿ ರಾಜ್ಯದಲ್ಲಿ ಬಂಡವಾಳ ಹೂಡಲು ಮನವರಿಕೆ ಮಾಡಿದ್ದೇವೆ. ಬಹುತೇಕ ಉದ್ಯಮಿಗಳು ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ಆಸಕ್ತಿ ತೋರಿದ್ದಾರೆ" ಎಂದು ನಿರಾಣಿ ಹೇಳಿದ್ದಾರೆ.

"ವಿಶ್ವದಲ್ಲೇ ಮುಂಚೂಣಿಯಲ್ಲಿರುವ ಲುಲು ಗ್ರೂಪ್, ಮುಬದಾಲ, ಕೆಇಎಪ್ ಹೋಲ್ಡಿಂಗ್ಸ್ ದುಕಬ್, ಎಲೆಕ್ಟ್ರಿಕ್ ವೇ ಡಿಪಿ ವಲ್ಡ್, ಅಸ್ಟರ್ ಹೆಲ್ತ್ ಕೇರ್, ಎ.1 ಶಂಶಿ ಟ್ರಾವೆಲರ್ಸ್, ಬಿಎಲ್‍ಎಸ್ ಇಂಟರ್‌ನ್ಯಾಷನಲ್, ಯುನೈಟೆಡ್ ಪಾರ್ಕ್ ಅಂಡ್ ಸರ್ವೀಸ್, ಎಕ್ಸ್ ಪೋರ್ಟ್ ಬಹ್ರೇನ್, ಎಐಎಂಎಲ, ತಗ್ಲೀಪ್ ಇಂಡಸ್ಟ್ರೀಸ್ ಸೇರಿದಂತೆ ಅನೇಕ ಕಂಪನಿಗಳು ಬಂಡವಾಳ ಹೂಡಿಕೆಗೆ ಸಮ್ಮತಿಸಿದೆ" ಎಂದು ಮಾಹಿತಿ ನೀಡಿದರು.

ಉದ್ಯೋಗ ಸೃಷ್ಟಿಯಲ್ಲಿ ಕರ್ನಾಟಕ ಮುಂದು!

ಉದ್ಯೋಗ ಸೃಷ್ಟಿಯಲ್ಲಿ ಕರ್ನಾಟಕ ಮುಂದು!

"ಯುನೈಟೆಡ್ ಅರಬ್ ಎಮಿರೈಟ್ ಮೂಲದ ಪ್ರತಿಷ್ಠಿತ ಗಲ್ಫ್ ಇಸ್ಲಾಮಿಕ್ ಇನ್ವೆಸ್ಟಮೆಂಟ್ ಬೆಂಗಳೂರಿನಲ್ಲಿ ತನ್ನ ಕಚೇರಿಯನ್ನು ತೆರೆಯಲು ಸಮ್ಮತಿಸಿದೆ. ಮುಂದಿನ ದಿನಗಳಲ್ಲಿ ಸುಮಾರು 3500 ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲಿದೆ" ಎಂದು ಸಚಿವ ಮುರುಗೇಶ್ ನಿರಾಣಿ ಮಾಹಿತಿ ನೀಡಿದ್ದಾರೆ.

"ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಉದ್ಯೋಗ ಸೃಷ್ಟಿಯಲ್ಲಿ ಪ್ರಥಮ ಸ್ಥಾನದಲ್ಲಿದೆ. ನಮ್ಮಲ್ಲಿರುವ ವಿಶ್ವದರ್ಜೆ ಮೂಲಭೂತ ಸೌಕರ್ಯಗಳ ಕಾರಣಕ್ಕಾಗಿ ಉದ್ಯಮಿಗಳು ಬಂಡವಾಳ ಹೂಡಲು ಆಸಕ್ತಿ ತೋರುತ್ತಿದ್ದಾರೆ. ನೀರು, ವಿದ್ಯುತ್, ಭೂಮಿ ಸೇರಿದಂತೆ ಹಲವು ಸೌಲಭ್ಯಗಳನ್ನು ಕಲ್ಪಿಸಿಕೊಡುತ್ತಿದ್ದೇವೆ" ಎಂದು ವಿವರಿಸಿದರು.

ಬಾಹ್ಯಾಕಾಶ ಕ್ಷೇತ್ರದ ಹೂಡಿಕೆಗೆ ವಿಪುಲ ಅವಕಾಶ

ಬಾಹ್ಯಾಕಾಶ ಕ್ಷೇತ್ರದ ಹೂಡಿಕೆಗೆ ವಿಪುಲ ಅವಕಾಶ

"ಮುಂದಿನ 2022ರ ನವೆಂಬರ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ 'ಜಾಗತಿಕ ಹೂಡಿಕೆದಾರರ ಸಮಾವೇಶ' ನಡೆಸಲಿದ್ದೇವೆ. ಈ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ಉದ್ಯಮಿಗಳು ರಾಜ್ಯಕ್ಕೆ ಆಗಮಿಸುವ ಸಂಭವವಿದೆ. ಜೊತೆಗೆ ದೊಡ್ಡ ಪ್ರಮಾಣದಲ್ಲಿ ಉದ್ಯೋಗಗಳು ಲಭಿಸಲಿದೆ" ಎಂದು ನಿರಾಣಿ ಮಾಹಿತಿ ನೀಡಿದ್ದಾರೆ.

"ಅಕ್ಟೋಬರ್‌ 15-21ರವರೆ ನಡೆದ ಒಂದು ವಾರದ "ಬಾಹ್ಯಾಕಾಶ ಸಪ್ತಾಹ"ಕ್ಕೆ ಕರ್ನಾಟಕ ಸಾಕ್ಷಿಯಾಯಿತು. ಏರೋಸ್ಪೇಸ್ ಮತ್ತು ರಕ್ಷಣಾ ವಲಯದಲ್ಲಿ ಕರ್ನಾಟಕದ ಪ್ರಾಮುಖ್ಯತೆ ಮತ್ತು ಸಾಮರ್ಥ್ಯವನ್ನು ಪ್ರತಿಪಾದಿಸುವುದರ ಜತೆಗೆ, ರಾಜ್ಯದಲ್ಲಿ ಹೂಡಿಕೆಗೆ ಇರುವ ವಿಸ್ತೃತ ಅವಕಾಶಗಳ ಮೇಲೆ ಬೆಳಕು ಚೆಲ್ಲಿತು" ಎಂದು ವಿವರಿಸಿದ್ದಾರೆ.

ಅಂತರಿಕ್ಷ-ರಕ್ಷಣಾ ವಲಯದಲ್ಲಿ ವಿಪುಲ ಅವಕಾಶ!

ಅಂತರಿಕ್ಷ-ರಕ್ಷಣಾ ವಲಯದಲ್ಲಿ ವಿಪುಲ ಅವಕಾಶ!

"ಕರ್ನಾಟಕದಲ್ಲಿ ಅಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿರುವ ವಿಪುಲ ಅವಕಾಶಗಳ ಬಗ್ಗೆ ಇಂಡಿಯಾ ಪೆವಿಲಿಯನ್‌ನಲ್ಲಿ ನಡೆದ ಸಮಾವೇಶದಲ್ಲಿ ಇಸ್ರೋ ಸೇರಿದಂತೆ ಬಾಹ್ಯಾಕಾಶ ವಲಯದ ಸ್ಟಾರ್ಟ್‌ಅಪ್‌ಗಳು ಭಾಗವಹಿಸಿದ್ದವು ಎಂದು ನಿರಾಣಿ ಹೇಳಿದ್ದಾರೆ.

"ಅಂತರಿಕ್ಷ, ಬಾಹ್ಯಾಕಾಶ, ರಕ್ಷಣೆ, ಆರೋಗ್ಯ, ಕೈಮಗ್ಗ, ಆಹಾರ ಸಂಸ್ಕರಣೆ ಸೇರಿದಂತೆ ವಿವಿಧ ವಲಯಗಳಲ್ಲಿ ಬಂಡವಾಳ ಹೂಡಿಕೆ ಮಾಡಲು ಮನವರಿಕೆ ಮಾಡಿದ್ದೇವೆ. ಕೆಐಎಡಿಬಿಯಿಂದ ಪಡೆದಿರುವ ಜಮೀನನ್ನು ಕೈಗಾರಿಕೆಗಳ ಉದ್ದೇಶಕ್ಕೆ ಬಳಸಬೇಕು. ಒಂದು ವೇಳೆ ಯಾರಾದರೂ ಬಳಸಿದ್ದರೆ ಜಮೀನನ್ನು ಹಿಂಪಡೆಯಲಾಗುವುದು. ಈಗಾಗಲೇ ಕೆಲವರಿಗೆ ನೋಟಿಸ್ ಕೂಡ ನೀಡಲಾಗಿದೆ. ಯಾವುದೇ ಕಾರಣಕ್ಕೂ ಜಮೀನು ದುರುಪಯೋಗ ಆಗಲು ಬಿಡುವುದಿಲ್ಲ" ಎಂದು ಸಚಿವ ನಿರಾಣಿ ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕ-ನೌ ಆ್ಯಂಡ್ ಬಿಯಾಂಡ್

ಕರ್ನಾಟಕ-ನೌ ಆ್ಯಂಡ್ ಬಿಯಾಂಡ್

ಜೊತೆಗೆ ಮೂರು ದಿನಗಳ ‌ದುಬೈ ಎಕ್ಸ್ ಪೋ 2020 ನಲ್ಲಿ ಭಾರತದ ಸಂಸ್ಕೃತಿ ಆನಾವರಣಗೊಂಡಿತು. ಬರೋಬ್ಬರಿ 192 ಸದಸ್ಯ ರಾಷ್ಟ್ರಗಳು ಭಾಗಿಯಾಗಿದ್ದ ದುಬೈ ಎಕ್ಸ್‌ಪೋ 2020ರಲ್ಲಿ ಒಂದು ವಾರ ಪಾಲ್ಗೊಂಡಿದ್ದ ಕರ್ನಾಟಕ ತನ್ನ ಶ್ರೀಮಂತ ಸಾಂಸ್ಕೃತಿಕ ವೈವಿಧ್ಯತೆಯೊಂದಿಗೆ ಉದ್ಯಮ ಮತ್ತು ಹೂಡಿಕೆ ಸಾಮರ್ಥ್ಯ ಪ್ರದರ್ಶಿಸಿತು ಎಂದು ವಿವರಿಸಿದ್ದಾರೆ.

'ಕರ್ನಾಟಕ- ನೌ ಆ್ಯಂಡ್ ಬಿಯಾಂಡ್' ವಿಶಿಷ್ಟ ಕಾರ್ಯಕ್ರಮದ ಮೂಲಕ ಗಲ್ಫ್‌ ಸೇರಿದಂತೆ ವಿಶ್ವದ 200ಕ್ಕೂ ಹೆಚ್ಚು ಪ್ರಮುಖ ಕೈಗಾರಿಕೋದ್ಯಮಿಗಳಿಗೆ, ಹೂಡಿಕೆಗೆ ಕರ್ನಾಟಕ ಪ್ರಶಸ್ತ ಸ್ಥಳ ಎಂದು ಮನದಟ್ಟು ಮಾಡಿಸುವಲ್ಲಿ ಯಶಸ್ವಿಯಾಗಿದೆ. ಎಕ್ಸ್‌ಪೋದಲ್ಲಿ ಏರೋಸ್ಪೇಸ್‌, ಡಿಫೆನ್ಸ್‌, ಸ್ಟಾರ್ಟ್‌ಅಪ್‌ ಸಮಾವೇಶಗಳನ್ನು ಆಯೋಜಿಸುವ ಮೂಲಕ ಈ ವಲಯಗಳಲ್ಲಿ ಬಂಡವಾಳ ಹೂಡಿಕೆಗೆ ಇರುವ ಅವಕಾಶಗಳ ಮಾಹಿತಿಯನ್ನು ಅಲ್ಲಿ ಸೇರಿದ್ದ ಉದ್ಯಮಿಗಳ ಮುಂದಿಟ್ಟಿದೆ. ಇದಲ್ಲದೇ, ಸ್ಟಾರ್ಟ್‌ಅಪ್‌ಗಳ ಜತೆಗೆ ಪ್ರತ್ಯೇಕ ಸಭೆ ನಡೆಸುವ ಜತೆಗೆ ಉದ್ಯಮ ಲೋಕದ ದಿಗ್ಗಜರನ್ನು ಭೇಟಿ ಮಾಡಿ ರಾಜ್ಯದಲ್ಲಿ ಹೂಡಿಕೆ ಮಾಡುವಂತೆ ಆಹ್ವಾನಿಸಲಾಗಿದೆ ಎಂದು ನಿರಾಣಿ ವಿವರಿಸಿದರು.

English summary
Minister Murugesh Nirani's Dubai visit generates state strong investments interests ahead of global investors meet 2022. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X