ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

21ದಿನಗಳ ಬಳಿಕ ಏನಿದು ಅಚ್ಚರಿ, ತೈಲ ಬೆಲೆ ಏರಿಕೆ ಸ್ಥಗಿತ

|
Google Oneindia Kannada News

ನವದೆಹಲಿ, ಜೂನ್ 28: ಜೂನ್ 7ರಿಂದ ಪ್ರತಿದಿನದಂದು ತೈಲ ಬೆಲೆಯನ್ನು ಪರಿಷ್ಕರಿಸುತ್ತಾ ಬಂದಿದ್ದ ಸರ್ಕಾರಿ ಸ್ವಾಮ್ಯದ ಪ್ರಮುಖ ಮೂರು ತೈಲ ಕಂಪನಿಗಳು ಇಂದು ಬೆಲೆ ಏರಿಕೆಗೆ ಬ್ರೇಕ್ ಹಾಕಿವೆ.

ಅದರಂತೆ ಸತತವಾಗಿ 21ನೇ ದಿನಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಭಾನುವಾರ ಬೆಳಗ್ಗೆ ಪರಿಷ್ಕರಣೆ ಮಾಡಿಲ್ಲ, ಯಾವುದೇ ಏರಿಕೆ, ಇಳಿಕೆ ಇಲ್ಲ ಎಂದು ಸಂಸ್ಥೆಗಳು ಹೇಳಿವೆ. ಶನಿವಾರದಂದು ಡೀಸೆಲ್ ದರಲ್ಲಿ 25 ಪೈಸೆ ಪ್ರತಿ ಲೀಟರ್ ನಂತೆ ಹೆಚ್ಚಳ, ಹಾಗೂ ಪೆಟ್ರೋಲ್ ದರದಲ್ಲಿ 17 ಪೈಸೆ ಏರಿಕೆಯಾಗಿತ್ತು.

ಸತತ 21ನೇ ದಿನವೂ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ ದರಸತತ 21ನೇ ದಿನವೂ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ ದರ

ದೆಹಲಿಯಲ್ಲಿ ಡೀಸೆಲ್ ದರ ಪ್ರತಿ ಲೀಟರ್ ಗೆ 80.40 ರು ಇದ್ದರೆ, ಪೆಟ್ರೋಲ್ ದರ ಪ್ರತಿ ಲೀಟರ್ ಗೆ 80.38ರು ನಷ್ಟಿದೆ. ಒಟ್ಟಾರೆ 21ದಿನಗಳಲ್ಲಿ ಒಂದು ದಿನ ಮಾತ್ರ ಪೆಟ್ರೋಲ್ ದರ ವ್ಯತ್ಯಾಸ ಕಂಡು ಬಂದಿರಲಿಲ್ಲ, ಡೀಸೆಲ್ ಬೆಲೆ ಪ್ರತಿದಿನವೂ ತುಸು ಏರಿಕೆ ಕಂಡಿತ್ತು. ಕಳೆದ 20ಕ್ಕೂ ಅಧಿಕ ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ತಲಾ 10 ರು ಹೆಚ್ಚಳ ಕಂಡಿವೆ.

No increase in petrol, diesel prices June 28 after hiked for 21 days

ಜೂನ್ 7ರಂದು ಸತತ 83 ದಿನಗಳ ವಿರಾಮದ ಬಳಿಕ ದೇಶಾದ್ಯಂತ ಇಂಧನ ದರ ಪರಿಷ್ಕರಣೆ ಪುನಾರಂಭಗೊಂಡಿತು. ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ಪರಿಷ್ಕರಿಸುತ್ತಾ ಬಂದಿವೆ.

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರ, ಅಮೆರಿಕ-ಚೀನಾ ನಡುವಿನ ವಹಿವಾಟು ಆರಂಭದ ಮಾತುಕತೆ, ಕೊರೊನಾವೈರಸ್ ಆರ್ಥಿಕ ಹೊಡೆತ, ಭಾರತದಲ್ಲಿ ತೈಲದ ಮೇಲೆ ಹೆಚ್ಚಿದ ಅಬಕಾರಿ ಸುಂಕ ಎಲ್ಲವೂ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ.

ಬೆಂಗಳೂರಿನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ ಗೆ 82.99 ರು ನಷ್ಟಿದ್ದರೆ, ಡೀಸೆಲ್ ದರ ಪ್ರತಿ ಲೀಟರ್ ಗೆ 76.45 ರು ನಷ್ಟಿದೆ.

English summary
Delhi: No increase in prices of petrol & diesel in the national capital today. Petrol at Rs 80.38/litre & diesel at Rs 80.40/litre.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X