2 ಸಾವಿರದ ತನಕದ ಡೆಬಿಟ್ ಕಾರ್ಡ್ ವಹಿವಾಟಿಗೆ ಎಂಡಿಆರ್ ಶುಲ್ಕವಿಲ್ಲ
ನವದೆಹಲಿ, ಡಿಸೆಂಬರ್ 15 : ಡೆಬಿಟ್ ಕಾರ್ಡ್ ಬಳಸಿ 2 ಸಾವಿರದ ತನಕ ಮೊತ್ತ ಪಾವತಿ ಮಾಡುವವರು ಎಂಡಿಆರ್ ಶುಲ್ಕವನ್ನು ಪಾವತಿ ಮಾಡಬೇಕಾಗಿಲ್ಲ. ಎರಡು ವರ್ಷದ ತನಕ ಈ ನಿಯಮ ಜಾರಿಯಲ್ಲಿರುತ್ತದೆ.
ಡಿಜಿಟಲ್ ವಹಿವಾಟನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ಈ ಶುಲ್ಕ ಕಡಿತಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿದೆ. ಕೇಂದ್ರ ಸರ್ಕಾರವೇ ವರ್ತಕರ ರಿಯಾಯಿತಿ ದರವನ್ನು (ಎಂಡಿಆರ್) ಪಾವತಿ ಮಾಡಲಿದೆ. ಜನವರಿ 1ರಿಂದ ಈ ನಿಯಮ ಜಾರಿಗೆ ಬರಲಿದೆ.

ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಈ ಕುರಿತು ಮಾಹಿತಿ ನೀಡಿದರು. 'ಡೆಬಿಟ್ ಕಾರ್ಡ್, ಭೀಮ್ ಆಪ್ಲಿಕೇಶನ್ ಅಥವ ಆಧಾರ್ ಆಧಾರಿತ ಪಾವತಿ ವ್ಯವಸ್ಥೆ ಮೂಲಕ ಹಣ ಪಾವತಿಸಿದ ಶುಲ್ಕವನ್ನು ಕೇಂದ್ರ ಸರ್ಕಾರವು ಬ್ಯಾಂಕುಗಳಿಗೆ ಮರು ಪಾವತಿ ಮಾಡಲಿದೆ' ಎಂದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. ವರ್ತಕರ ರಿಯಾಯಿತಿ ದರವನ್ನು ಕೇಂದ್ರ ಸರ್ಕಾರ ಪಾವತಿ ಮಾಡುವುದರಿಂದ ಬೊಕ್ಕಸಕ್ಕೆ 2,512 ಕೋಟಿ ಹೊರೆಯಾಗಲಿದೆ.
Major policy boost to encourage digital payments and make India a less cash economy. Government will bear merchant charge on debit card purchases up to Rs 2,000. pic.twitter.com/TkwcsYtuIL
— BJP (@BJP4India) December 17, 2017
ಡಿಜಿಟಲ್ ಪಾವತಿ ಉತ್ತೇಜನಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ. ಇದರಿಂದಾಗಿ 2 ಸಾವಿರ ರೂ. ತನಕ ಪಾವತಿ ಮಾಡುವ ಗ್ರಾಹಕರು ಮತ್ತು ವರ್ತಕರ ಮೇಲೆ ಎಂಡಿಆರ್ ಶುಲ್ಕದ ಹೊರೆ ಬೀಳುವುದಿಲ್ಲ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ: 13,712 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ ಎಸ್ಐಟಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Viral Video: 'ಓಂಕಾರ' ಚಿತ್ರದ ಬೀಡಿ ಜಲೈಲೆ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಬ್ರೆಜಿಲ್ ಬೆಡಗಿಯರು -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ












Click it and Unblock the Notifications