ಪ್ರತಿಷ್ಠಿತ ನೋಕಿಯಾ ಕಂಪನಿಯಲ್ಲಿ 10 ಸಾವಿರ ಉದ್ಯೋಗ ಕಡಿತ
ಪ್ರತಿಷ್ಠಿತ ಮೊಬೈಲ್ ಉತ್ಪಾದನಾ ಸಂಸ್ಥೆ ನೋಕಿಯಾ ಮುಂದಿನ ಎರಡು ವರ್ಷದಲ್ಲಿ 10 ಸಾವಿರ ಉದ್ಯೋಗ ಕಡಿತ ಮಾಡುವುದಾಗಿ ಘೋಷಿಸಿದೆ. 5ಜಿ ಮೊಬೈಲ್ ಉತ್ಪಾದನೆಯ ಹೊಡೆತದಿಂದ ಕಂಗೆಟ್ಟಿರುವ ನೋಕಿಯಾ ಭವಿಷ್ಯದಲ್ಲಿ ಹೆಚ್ಚಿನ ಸಂಶೋಧನೆಗೆ ಒತ್ತು ನೀಡಲು ನಿರ್ಧರಿಸಿದೆ.
ಹೀಗಾಗಿ ಮುಂದಿನ ಎರಡು ವರ್ಷದಲ್ಲಿ ಕಂಪನಿಯ ಮರುರಚನೆಗೆ ಸುಮಾರು 700 ಮಿಲಿಯನ್ ಯೂರೋ ಹಣ ಹೂಡಿಕೆ ಮಾಡಲಾಗುತ್ತಿದ್ದು, 10 ಸಾವಿರ ಉದ್ಯೋಗಿಗಳನ್ನು ತೆಗೆದು ಹಾಕುವುದು ಅನಿವಾರ್ಯ ಎಂದು ನೋಕಿಯಾ ಸಿಇಒ ಪೆಕ್ಕಾ ಲಂಡ್ಮಾರ್ಕ್ ತಿಳಿಸಿದ್ದಾರೆ.
ಕಳೆದ ವರ್ಷವೇ ಸಾವಿರಾರು ಉದ್ಯೋಗಿಗಳನ್ನು ತೆಗೆದು ಹಾಕಲಾಗಿದ್ದು, ಈ ಹತ್ತು ಸಾವಿರವೂ ಮುಂದಿನ ಎರಡು ವರ್ಷಗಳಲ್ಲಿ ಹೆಚ್ಚುವರಿಯಾಗಿ ಉದ್ಯೋಗ ಕಡಿತವಾಗಲಿವೆ. ಸದ್ಯಕ್ಕೆ ನೋಕಿಯಾದಲ್ಲಿ 90 ಸಾವಿರ ಉದ್ಯೋಗಿಗಳಿದ್ದಾರೆ.

ಈ ಉದ್ಯೋಗ ಕಡಿತವು ಬಹುತೇಕ ಎಲ್ಲಾ ನೋಕಿಯಾ ಕಂಪನಿ ಇರುವ ರಾಷ್ಟ್ರಗಳಿಗೆ ಅನ್ವಯವಾಗಲಿದ್ದು, ಫ್ರಾನ್ಸ್ ಮಾತ್ರ ಹೊರಗುಳಿಯಲಿದೆ. ಏಕೆಂದರೆ ಫ್ರಾನ್ಸ್ನಲ್ಲಿ ಸಾವಿರಕ್ಕೂ ಅಧಿಕ ಉದ್ಯೋಗಿಗಳನ್ನು ತೆಗೆದುಹಾಕಲಾಗಿತ್ತು.
ನೋಕಿಯಾ ಸಂಸ್ಥೆಯು ತನ್ನ ಭವಿಷ್ಯಕ್ಕಾಗಿ 5 ಜಿ , ಕ್ಲೌಡ್ ಹಾಗೂ ಡಿಜಿಟಲ್ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಹಣ ಹೂಡಿಕೆ ಮಾಡುತ್ತಿದೆ. ಇದಲ್ಲದೆ, ಈ ಬಾರಿ ನೋಕಿಯಾ ಲಾಭವು 21.9 ಬಿಲಿಯನ್ ಯೂರೋದಿಂದ 20.6 ಬಿಲಿಯನ್ ಯೂರೋಗೆ ಇಳಿಕೆಯಾಗುವ ಸಾಧ್ಯತೆ ಇದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications