ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಬ್ಸಿಡಿ ರಹಿತ ಎಲ್ ಪಿಜಿ ಸಿಲಿಂಡರ್ ಬೆಲೆ ಇಳಿಕೆ!

By Mahesh
|
Google Oneindia Kannada News

ನವದೆಹಲಿ, ಏಪ್ರಿಲ್ 02: ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆ ಇಳಿಸಲಾಗಿದೆ. ಈ ಮೂಲಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಬಳಲಿದ್ದ ಗ್ರಾಹಕರಿಗೆ ಕೊಂಚ ನೆಮ್ಮದಿ ಸಿಕ್ಕಿದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು

ಮಾರ್ಚ್ 01ರಂದು 2017 ರ ಬಳಿಕ ಇದೇ ಮೊದಲ ಬಾರಿ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಇಳಿಕೆ ಮಾಡಲಾಗಿತ್ತು. ಇದು ಸಬ್ಸಿಡಿ ಹಾಗೂ ಸಬ್ಸಿಡಿ ರಹಿತ ಸಿಲಿಂಡರ್ ಬೆಲೆಗಳನ್ನು ಪರಿಷ್ಕರಿಸಲಾಗಿತ್ತು.

2017ರ ನಂತರ ಅಡುಗೆ ಅನಿಲ ಸಿಲಿಂಡರ್ ಬೆಲೆ ಇಳಿಕೆ2017ರ ನಂತರ ಅಡುಗೆ ಅನಿಲ ಸಿಲಿಂಡರ್ ಬೆಲೆ ಇಳಿಕೆ

ಈಗ ಸೋಮವಾರ(ಏಪ್ರಿಲ್ 02) ದಂದು ಸಬ್ಸಿಡಿ ರಹಿತ ಸಿಲಿಂಡರ್ ಬೆಲೆಯನ್ನು ಪ್ರತಿ ಸಿಲಿಂಡರ್ ಮೇಲೆ 35.50ರು ನಷ್ಟು ತಗ್ಗಿಸಲಾಗಿದೆ.

Non-subsidised LPG cylinder rates slashed

ಇದೇ ವೇಳೆ 19 ಕಿಲೋ ತೂಕದ ವಾಣಿಜ್ಯ ಉದ್ದೇಶಿತ ಸಿಲಿಂಡರ್ ಬೆಲೆ ಕೂಡಾ 54 ರು ನಷ್ಟು ಇಳಿಕೆಯಾಗಿದ್ದು, 5 ಕಿಲೋ ತೂಕದ ಸಿಲಿಂಡರ್ ಬೆಲೆಯಲ್ಲಿ 15ರು ಇಳಿಸಲಾಗಿದೆ.

2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ

ಗಮನಿಸಿ: ಸರ್ಕಾರಿ ಸ್ವಾಮ್ಯದ ಇಂಧನ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂ, ಭಾರತ್ ಪೆಟ್ರೋಲಿಯಂ ಪ್ರತಿ ತಿಂಗಳ ಮೊದಲ ದಿನದಂದು ಇಂಧನ ದರ, ಸಬ್ಸಿಡಿ ರಹಿತ ಎಲ್ ಪಿಜಿ, ಜೆಟ್ ಇಂಧನ, ಸೀಮೆಎಣ್ಣೆ ಬೆಲೆ ಬಗ್ಗೆ ನಿರ್ಧಾರ ಕೈಗೊಳ್ಳುತ್ತವೆ. ಬೆಲೆ ಏರಿಕೆ ಹಾಗೂ ಇಳಿಕೆ ಎಲ್ಲವೂ ಜಾಗತಿಕ ಮಾರುಕಟ್ಟೆ ದರದ ಮೇಲೆ ಅವಲಂಬಿತವಾಗಿರುತ್ತದೆ.

English summary
LPG or cooking gas cylinders will cost less from this month. Non Subsidised LPG (liquefied petroleum gas) rates slashed. Oil companies provided relief to some extent by cutting prices of non-subsidised LPG cylinders by Rs 35.50.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X