ಮಾರ್ಚ್ 31ರ ಒಳಗೆ ಪ್ಯಾನ್-ಆಧಾರ್ ಜೋಡಿಸದಿದ್ದರೆ ಏನೆಲ್ಲ ಅನುಭವಿಸಬೇಕು ಗೊತ್ತೇ?
ನವದೆಹಲಿ, ಮಾರ್ಚ್ 25: ಆಧಾರ್ ಸಂಖ್ಯೆಯೊಂದಿಗೆ ಕಾಯಂ ಖಾತೆ ಸಂಖ್ಯೆಯನ್ನು (ಪ್ಯಾನ್) ಜೋಡಿಸುವ ಗಡುವು ಹಲವು ಬಾರಿ ವಿಸ್ತರಣೆಯಾದ ಬಳಿಕ ಇದೇ ಮಾರ್ಚ್ 31ಕ್ಕೆ ಅಂತ್ಯಗೊಳ್ಳುತ್ತಿದೆ. ಒಂದು ವೇಳೆ ಈ ಎರಡೂ ಸಂಖ್ಯೆಗಳ ಜೋಡಣೆ ಮಾಡದೆ ಹೋದರೆ ನೀವು 1,000 ರೂ.ವರೆಗೂ ದಂಡಕ್ಕೆ ಒಳಗಾಗಬಹುದು ಮತ್ತು ನಿಮ್ಮ ಪ್ಯಾನ್ ಸಂಖ್ಯೆ ಅಮಾನ್ಯಗೊಳ್ಳಬಹುದು.
ಲೋಕಸಭೆಯಲ್ಲಿ ಮಂಗಳವಾರ ಅನುಮೋದನೆಗೊಂಡ ಹಣಕಾಸು ಮಸೂದೆ 2021ರಲ್ಲಿನ ಹೊಸ ತಿದ್ದುಪಡಿಯಲ್ಲಿ ಈ ನಿಯಮ ಅಳವಡಿಸಲಾಗಿದೆ. ಹಣಕಾಸು ಮಸೂದೆ 2021ಅನ್ನು ಅಂಗೀಕರಿಸುವಾಗ ಸರ್ಕಾರವು 1961ರ ಆದಾಯ ತೆರಿಗೆ ಕಾಯ್ದೆಗೆ ಹೊಸ ಸೆಕ್ಷನ್ (ಸೆಕ್ಷನ್ 234ಎಚ್) ಅಳವಡಿಸಿದೆ. ಇದರ ಪ್ರಕಾರ 2021ರ ಮಾರ್ಚ್ 31ರ ಒಳಗೆ ಪ್ಯಾನ್‌ಅನ್ನು ಆಧಾರ್ ಜತೆ ಜೋಡಣೆ ಮಾಡದ ಜನರಿಗೆ ದಂಡ ವಿಧಿಸಬಹುದು.
ದಂಡವಲ್ಲದೆ, ವ್ಯಕ್ತಿಯ ಪ್ಯಾನ್ ನಿಷ್ಕ್ರಿಯಗೊಳ್ಳಲಿದೆ. ಅಂತಹ ಸಂದರ್ಭದಲ್ಲಿ ವ್ಯಕ್ತಿಗಳು ತಮ್ಮ ಪ್ಯಾನ್ ಅಗತ್ಯವಿರುವ ಕಡೆಗಳಲ್ಲಿ ಪ್ಯಾನ್ ಸಂಖ್ಯೆ ಉಲ್ಲೇಖಿಸಿ ಹಣಕಾಸು ವ್ಯವಹಾರ ನಡೆಸುವುದು ಸಾಧ್ಯವಾಗುವುದಿಲ್ಲ. ಪ್ಯಾನ್-ಆಧಾರ್ ಜೋಡಣೆಯಲ್ಲಿ ವಿಫಲವಾದರೆ ವಿಧಿಸುವ ದಂಡ 1,000 ರೂ.ಗಿಂತ ಕಡಿಮೆ ಇರಬಹುದು. ಆದರೆ ಅದಕ್ಕಿಂತ ಹೆಚ್ಚಿರಲು ಸಾಧ್ಯವಿಲ್ಲ. ನಿರ್ದಿಷ್ಟ ಗಡುವಿನ ಅವಧಿಯಲ್ಲಿ ಪ್ಯಾನ್- ಆಧಾರ್ ಜೋಡಿಸಲು ವಿಫಲವಾದ ವ್ಯಕ್ತಿಗಳಿಗೆ ಅದಕ್ಕೆ ಅನುಗುಣವಾಗಿ ದಂಡ ವಿಧಿಸಲಾಗುತ್ತದೆ.

ಈ ಎರಡೂ ಕಾರ್ಡ್‌ಗಳ ಜೋಡಣೆಗೆ ಸರ್ಕಾರ ಅನೇಕ ಬಾರಿ ಗಡುವುಗಳನ್ನು ವಿಸ್ತರಿಸಿತ್ತು. ಆದರೆ ಈ ಬಾರಿ ಮತ್ತೆ ವಿಸ್ತರಿಸುವ ಸಾಧ್ಯತೆ ಇಲ್ಲ. ಜತೆಗೆ ಪ್ರಕ್ರಿಯೆ ಪೂರ್ಣಗೊಳಿಸದವರಿಗೆ ದಂಡ ವಿಧಿಸಲು ಬಯಸಿದೆ.
ಪ್ಯಾನ್ ಅಮಾನ್ಯಗೊಂಡರೆ ಜನರು ತಮ್ಮ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಸಹ ಸಾಧ್ಯವಾಗುವುದಿಲ್ಲ. ಅಲ್ಲದೆ, ಅದನ್ನು ಮಾಡದ ಕಾರಣಕ್ಕೆ ಭಾರಿ ದಂಡ ಎದುರಿಸಬೇಕಾಗುತ್ತದೆ. ನಿಷ್ಕ್ರಿಯ ಪ್ಯಾನ್ ಟಿಡಿಎಸ್‌ನಲ್ಲಿ ಅಧಿಕ ಪ್ರಮಾಣದ ಕಡಿತಕ್ಕೆ ಕಾರಣವಾಗಲಿದೆ. ಆದಾಯ ತೆರಿಗೆ ಕಾಯ್ದೆ ಪ್ರಕಾರ ಪ್ಯಾನ್ ನೀಡದವರು ಅಥವಾ ನಿಷ್ಕ್ರಿಯ ಪ್ಯಾನ್ ನೀಡುವವರು ಅಧಿಕ ಟಿಡಿಎಸ್ ಅಥವಾ ಟಿಸಿಎಸ್ ವಿಧಿಸಲಾಗುತ್ತದೆ.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications