ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೊಸೂರಿನಲ್ಲಿ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕ ತೆರೆಯಲಿರುವ ಓಲಾ

|
Google Oneindia Kannada News

ಹೊಸೂರು, ಡಿಸೆಂಬರ್ 14: ಬೆಂಗಳೂರು ಮೂಲದ ಆ್ಯಪ್ ಆಧಾರಿತ ಬಾಡಿಗೆ ಕಾರು ಬುಕ್ಕಿಂಗ್ ಸೇವಾ ಆಧಾರಿತ ಸಂಸ್ಥೆ ಓಲಾ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಭಾರತೀಯ ಮಾರುಕಟ್ಟೆಗೆ ಯೋಜನೆ ರೂಪಿಸಿಕೊಂಡಿದ್ದು, ತಮಿಳುನಾಡಿನ ಹೊಸೂರಿನಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಉತ್ಪಾದನಾ ಘಟಕ ತೆರೆಯುವುದಾಗಿ ಹೇಳಿದೆ.

ಸೋಮವಾರ ಈ ಕುರಿತು ಪ್ರಕಟಣೆ ಹೊರಡಿಸಿರುವ ಓಲಾ ಸಂಸ್ಥೆಯು ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕ ತೆರೆಯಲು 2,400 ಕೋಟಿ ರೂಪಾಯಿ ಹೂಡಿಕೆ ಮಾಡುವುದಾಗಿ ಘೋಷಿಸಿದೆ.

2021ಕ್ಕೆ ಮಾರುಕಟ್ಟೆ ಪ್ರವೇಶಿಸಲಿದೆ ಓಲಾ ಎಲೆಕ್ಟ್ರಿಕ್ ಸ್ಕೂಟರ್ 2021ಕ್ಕೆ ಮಾರುಕಟ್ಟೆ ಪ್ರವೇಶಿಸಲಿದೆ ಓಲಾ ಎಲೆಕ್ಟ್ರಿಕ್ ಸ್ಕೂಟರ್

ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕ ಒಮ್ಮೆ ತೆರೆದ ಬಳಿಕ ವಾರ್ಷಿಕವಾಗಿ ಎರಡು ಮಿಲಿಯನ್ ವಾಹನಗಳ ಉತ್ಪಾದನೆಯ ಗುರಿ ಇಟ್ಟುಕೊಂಡಿದೆ. ಓಲಾ ಎಲೆಕ್ಟ್ರಿಕ್ ಮೊಬಿಲಿಟಿ ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರ ಸಮ್ಮುಖದಲ್ಲಿ ತಮಿಳುನಾಡು ಸರ್ಕಾರದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿತು.

Ola To Establish Electric Vehicle Manufacturing Unit In Hosur

ಬೆಂಗಳೂರಿನಿಂದ 40 ಕಿ.ಮೀ ದೂರದಲ್ಲಿ ಸ್ಥಾಪನೆಯಾಗಲಿರುವ ಈ ಎಲೆಕ್ಟ್ರಿಕ್ ಉತ್ಪಾದನಾ ಘಟಕವು ಪ್ರಪಂಚದಲ್ಲಿಯೇ ಅತಿ ದೊಡ್ಡ ಸ್ಕೂಟರ್ ಉತ್ಪಾದನಾ ಸ್ಥಳವಾಗಲಿದೆ ಎಂದು ಓಲಾ ಹೇಳಿದೆ.

ಮೇ 2020 ರಲ್ಲಿ, ಓಲಾ ನೆದರ್ಲೆಂಡ್ಸ್‌ ಮೂಲದ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಎಟರ್ಗೊ ಬಿವಿ ಯನ್ನು ಬಹಿರಂಗಪಡಿಸದ ಮೊತ್ತಕ್ಕೆ ಸ್ವಾಧೀನಪಡಿಸಿಕೊಂಡ ಬಳಿಕ ಓಲಾ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಉತ್ಪಾದಿಸುವುದಾಗಿ ಪ್ರಕಟಿಸಿದೆ.

English summary
Bengaluru-based cab aggregator Ola on Monday announced that it will invest Rs 2,400 crores to set up a factory to manufacture electric two-wheelers in Hosur in Tamil Nadu.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X