ರೆಪೋ ದರದಲ್ಲಿ ಸತತ 3ನೇ ಬಾರಿಗೆ ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ
ನವದೆಹಲಿ, ಡಿಸೆಂಬರ್ 6: ಮತ್ತೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ತನ್ನ ಹಣಕಾಸು ನೀತಿ ಪರಾಮರ್ಶೆಯಲ್ಲಿ ಅಲ್ಪಾವಧಿ ಬಡ್ಡಿ ದರಗಳಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ.
ಬ್ಯಾಂಕ್‌ಗಳಿಗೆ ರಿಸರ್ವ್ ಬ್ಯಾಂಕ್ ನಿಂದ ನೀಡುವ ಸಾಲದ ಬಡ್ಡಿ ದರವನ್ನು (ರೆಪೋ) ಶೇ 6.00 ಮತ್ತು ಕಮರ್ಷಿಯಲ್ ಬ್ಯಾಂಕ್‌ಗಳಿಂದ ಪಡೆಯುವ ಸಾಲಕ್ಕೆ ಪಾವತಿಸುವ ಬಡ್ಡಿ ದರವನ್ನು (ರಿವರ್ಸ್ ರೆಪೋ) ಶೇ 5.75ರ ಮಟ್ಟದಲ್ಲಿಯೇ ಉಳಿಸಿಕೊಳ್ಳುವ ನಿರ್ಧಾರ ಕೈಗೊಂಡಿದೆ.
ರೆಪೊ ದರ ಇಳಿಕೆ ಆಗದೇ ಇರುವುದರಿಂದ ಗೃಹ ಸಾಲದ ಬಡ್ಡಿ ದರದಲ್ಲಿ ಇಳಿಕೆಯಾಗುವ ನಿರೀಕ್ಷೆ ಕಡಿಮೆಯಾಗಿದೆ.

ಈ ಹಿಂದೆ ಡಿಸೆಂಬರ್ ಹಾಗೂ ಅದಕ್ಕೂ ಮೊದಲು ಕೂಡ ರೆಪೋ ಮತ್ತು ರಿವರ್ಸ್ ರೆಪೋ ದರದಲ್ಲಿ ಆರ್‌ಬಿಐ ಬದಲಾವಣೆ ಮಾಡಿರಲಿಲ್ಲ. ಇದೀಗ ಮತ್ತೆ ಬದಲಾವಣೆ ಮಾಡದೇ ಇರಲು ಆರ್.ಬಿ.ಐ ನಿರ್ಧರಿಸಿದೆ.












Click it and Unblock the Notifications