ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೂನ್ 30ರೊಳಗೆ ಹೀಗೆ ಮಾಡದಿದ್ದರೆ ನಿಮ್ಮ ಪ್ಯಾನ್‌ ಕಾರ್ಡ್ ರದ್ದು:10,000 ರುಪಾಯಿ ದಂಡ

|
Google Oneindia Kannada News

ದೆಹಲಿ, ಜೂನ್ 16: ನಿಮ್ಮ ಬಳಿ ಪ್ಯಾನ್ ಕಾರ್ಡ್ ಇದ್ದರೆ ಜೂನ್ 30ರ ಮೊದಲು ಆಧಾರ್‌ಗೆ ಲಿಂಕ್ ಮಾಡದಿದ್ದರೆ 10 ಸಾವಿರ ರೂಪಾಯಿಗಳ ದಂಡವನ್ನು ಪಾವತಿಸಲು ಸಿದ್ಧರಾಗಿರಿ. ಆಧಾರ್ ಕಾರ್ಡ್‌ ಜೊತೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡದಿದ್ದರೆ ನಿಮ್ಮ ಕಾರ್ಡ್ ನಿಷ್ಕ್ರಿಯವಾಗಲಿದೆ. ಆನಂತರ ಒಂದು ವೇಳೆ ಪ್ಯಾನ್ ಕಾರ್ಡ್ ಬಳಸಿದರೆ 10,000 ರುಪಾಯಿ ದಂಡ ತೆರಬೇಕಾಗುತ್ತದೆ.

ಈ ಹಿಂದೆಯೇ ಪ್ಯಾನ್ -ಆಧಾರ್ ಕಾರ್ಡ್ ಲಿಂಕ್‌ಗೆ ಗಡುವು ನೀಡಲಾಗಿತ್ತು. ಆದರೆ ಆದಾಯ ತೆರಿಗೆ ಇಲಾಖೆಯು ಈ ಗಡುವನ್ನು ವಿಸ್ತರಿಸುತ್ತಲೇ ಬಂದಿತ್ತು. ಮಾರ್ಚ್ 31 ರಿಂದ ಜೂನ್ 30ಕ್ಕೆ ಅವಧಿಯನ್ನು ವಿಸ್ತರಿಸಲಾಗಿತ್ತು.

ಜೂನ್ 30 ಡೆಡ್‌ಲೈನ್

ಜೂನ್ 30 ಡೆಡ್‌ಲೈನ್

ಪ್ಯಾನ್ ಅನ್ನು ಆಧಾರ್‌ಗೆ ಲಿಂಕ್ ಮಾಡಲು ಕೊನೆಯ ದಿನಾಂಕ ಜೂನ್ 30 ಆಗಿದೆ. ಈ ನಿಟ್ಟಿನಲ್ಲಿ ಆದಾಯ ತೆರಿಗೆ ಇಲಾಖೆಯ ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 272B ಅಡಿಯಲ್ಲಿ ಅಧಿಸೂಚನೆ ಹೊರಡಿಸಲಾಗಿದೆ.

ಇನ್ನು ಮುಂದೆ ತೆರಿಗೆ ಪಾವತಿಸಲು ಆಧಾರ್ ಸಂಖ್ಯೆಯೇ ಸಾಕುಇನ್ನು ಮುಂದೆ ತೆರಿಗೆ ಪಾವತಿಸಲು ಆಧಾರ್ ಸಂಖ್ಯೆಯೇ ಸಾಕು

ಇದಕ್ಕೂ ಮೊದಲು ಆಧಾರ್ ಅನ್ನು ಪ್ಯಾನ್ ಕಾರ್ಡ್‌ನೊಂದಿಗೆ ಲಿಂಕ್ ಮಾಡುವ ಕೊನೆಯ ದಿನಾಂಕ 31 ಮಾರ್ಚ್ 2020. ಆದರೆ ಕರೋನಾವೈರಸ್ ಸಾಂಕ್ರಾಮಿಕದಿಂದ ಉಂಟಾದ ಲಾಕ್‌ಡೌನ್ ಕಾರಣ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆಧಾರ್-ಪ್ಯಾನ್ ಲಿಂಕ್ ಮಾಡಲು ಕೊನೆಯ ದಿನಾಂಕವನ್ನು ಜೂನ್ 30ಕ್ಕೆ ವಿಸ್ತರಿಸಿದ್ದಾರೆ.

ಪ್ಯಾನ್ ಕಾರ್ಡ್ ರದ್ದು

ಪ್ಯಾನ್ ಕಾರ್ಡ್ ರದ್ದು

ಆದಾಯ ತೆರಿಗೆ ಕಾನೂನಿನ ಪ್ರಕಾರ ನಿಗದಿತ ದಿನಾಂಕದೊಳಗೆ ಆಧಾರ್-ಪ್ಯಾನ್ ಎರಡೂ ಕಾರ್ಡ್‌ಗಳನ್ನು ಲಿಂಕ್ ಮಾಡದಿದ್ದರೆ, ಜೂನ್ 30 ರ ನಂತರ ಪ್ಯಾನ್ ಕಾರ್ಡ್ ರದ್ದುಗೊಳ್ಳುತ್ತದೆ. ಆನಂತರ ವಹಿವಾಟು ನಡೆಸಿದರೆ 10 ಸಾವಿರ ರುಪಾಯಿಗಳ ದಂಡವನ್ನೂ ವಿಧಿಸಲಾಗುತ್ತದೆ. ಆದ್ದರಿಂದ ಇನ್ನು 15 ದಿನಗಳಲ್ಲಿ ಆಧಾರ್‌ಗೆ ಲಿಂಕ್ ಮಾಡಿ

ಆನ್​ಲೈನ್ ನಲ್ಲಿ ಆಧಾರ್ ಮೂಲಕ ಇ-ಪ್ಯಾನ್ ಕಾರ್ಡ್ ಪಡೆಯುವುದು ಹೇಗೆ?ಆನ್​ಲೈನ್ ನಲ್ಲಿ ಆಧಾರ್ ಮೂಲಕ ಇ-ಪ್ಯಾನ್ ಕಾರ್ಡ್ ಪಡೆಯುವುದು ಹೇಗೆ?

ಪ್ಯಾನ್ ಕಾರ್ಡ್ ನಿಷ್ಕ್ರಿಯವಾದರೆ ಹೊಸ ಕಾರ್ಡ್‌ಗೆ ಅರ್ಜಿ ಹಾಕಬೇಕಾ?

ಪ್ಯಾನ್ ಕಾರ್ಡ್ ನಿಷ್ಕ್ರಿಯವಾದರೆ ಹೊಸ ಕಾರ್ಡ್‌ಗೆ ಅರ್ಜಿ ಹಾಕಬೇಕಾ?

ಒಂದು ವೇಳೆ ನಿಮ್ಮ ಪ್ಯಾನ್ ಆಧಾರ್ ಲಿಂಕ್ ಆಗದಿದ್ದರೆ ಜುಲೈ 1ರಿಂದ ಕಾರ್ಡ್ ನಿಷ್ಕ್ರಿಯವಾಗುತ್ತದೆ. ಈ ಸಂದರ್ಭದಲ್ಲಿ ಹೊಸ ಪ್ಯಾನ್ ಕಾರ್ಡ್ ಅರ್ಜಿ ಸಲ್ಲಿಸುವುದು ಬೇಡ. ಆಧಾರ್ ಜೊತೆ ಲಿಂಕ್ ಮಾಡಿದರೆ ಸಾಕು ಮತ್ತೆ ಪ್ಯಾನ್ ಕಾರ್ಡ್ ಸಕ್ರಿಯವಾಗುತ್ತದೆ.

ಪ್ಯಾನ್ -ಆಧಾರ್ ಲಿಂಕ್ ಆಗಿರದಿದ್ದರೆ ಏನು ಮಾಡಬೇಕು?

ಪ್ಯಾನ್ -ಆಧಾರ್ ಲಿಂಕ್ ಆಗಿರದಿದ್ದರೆ ಏನು ಮಾಡಬೇಕು?

ಜೂನ್ 30ರೊಳಗೆ ಪ್ಯಾನ್-ಆಧಾರ್ ಲಿಂಕ್ ಆಗದಿದ್ದರೆ ಏನು ಮಾಡಬೇಕು ಎಂಬುದು ನಿಮ್ಮಲ್ಲಿ ಮೂಡಬಹುದಾದ ಪ್ರಶ್ನೆಯಾಗಿರಬಹುದು. ಒಂದು ವೇಳೆ ಈ ಗಡುವಿನಲ್ಲಿ ಲಿಂಕ್ ಆಗದಿದ್ದರೆ ನಿಷ್ಕ್ರಿಯವಾಗುವ ಪ್ಯಾನ್ ಅನ್ನು ಯಾವುದೇ ವ್ಯವಹಾರಕ್ಕೆ ಬಳಸಬೇಡಿ. ಜುಲೈ 1ರ ಬಳಿಕವೂ ಆಧಾರ್ ಲಿಂಕ್ ಮಾಡುವ ಅವಕಾಶವಿದೆ. ಹೀಗಾಗಿ ನಿಷ್ಕ್ರಿಯ ಪ್ಯಾನ್ ಬಳಸಿ ದಂಡಕ್ಕೆ ಒಳಗಾಗದಿರಿ.

ನಿಷ್ಕ್ರಿಯಗೊಂಡರೂ ಐಡಿ ಪ್ರೂಫ್‌ ಆಗಿ ಬಳಸಬಹುದು

ನಿಷ್ಕ್ರಿಯಗೊಂಡರೂ ಐಡಿ ಪ್ರೂಫ್‌ ಆಗಿ ಬಳಸಬಹುದು

ಒಂದು ವೇಳೆ ನಿಮ್ಮ ನಿಮ್ಮ ಪ್ಯಾನ್ ಕಾರ್ಡ್ ನಿಷ್ಕ್ರಿಯಗೊಂಡರೆ ಅದನ್ನು ವ್ಯಹವಾರಕ್ಕೆ ಬಳಸುವಂತಿಲ್ಲ. ಆದರೆ ಅದನ್ನು ಗುರುತಿನ ಚೀಟಿಯಾಗಿ ಬಳಸಿಕೊಳ್ಳಬಹುದು. ಉದಾಹರಣೆಗೆ ಬ್ಯಾಂಕ್ ಖಾತೆ ತೆರೆಯಲು ಅಥವಾ ಡ್ರೈವಿಂಗ್ ಲೈಸೆನ್ಸ್‌ ಪಡೆಯಲು ಬಳಸಿದರೆ ನಿಮಗೆ ಯಾವುದೇ ದಂಡ ವಿಧಿಸುವುದಿಲ್ಲ. ಆದರೆ ಯಾವುದೇ ಬ್ಯಾಂಕಿಂಗ್ ವ್ಯವಹಾರ ಮಾಡಲು ಸಕ್ರಿಯ ಪ್ಯಾನ್ ಕಾರ್ಡ್ ಅವಶ್ಯಕತೆ ಇದೆ. ಹಣ ಡೆಪಾಸಿಟ್ ಮಾಡಲು, ಹಣ ವರ್ಗಾವಣೆಗೆ ಪ್ಯಾನ್ ಕಾರ್ಡ್ ಬಳಕೆ ಅತ್ಯವಶ್ಯಕ.

ಆಧಾರ್ ಬಳಸಿ ಇ-ಪ್ಯಾನ್ ಕಾರ್ಡನ್ನು ತ್ವರಿತವಾಗಿ ಪಡೆಯುವುದು ಹೇಗೆ?ಆಧಾರ್ ಬಳಸಿ ಇ-ಪ್ಯಾನ್ ಕಾರ್ಡನ್ನು ತ್ವರಿತವಾಗಿ ಪಡೆಯುವುದು ಹೇಗೆ?

ಪ್ಯಾನ್-ಆಧಾರ್ ಲಿಂಕ್ ಆಗಿದೆಯೇ ಎಂದು ಪರಿಶೀಲಿಸುವುದು ಹೇಗೆ?

ಪ್ಯಾನ್-ಆಧಾರ್ ಲಿಂಕ್ ಆಗಿದೆಯೇ ಎಂದು ಪರಿಶೀಲಿಸುವುದು ಹೇಗೆ?

-ಮೊದಲನೆಯದಾಗಿ, ಆದಾಯ ತೆರಿಗೆ ಇಲಾಖೆಯ ನ ಇ-ಫೈಲಿಂಗ್ ವೆಬ್‌ಸೈಟ್‌ಗೆ ಹೋಗಿ.

-ಅಲ್ಲಿ ಮೇಲ್ಭಾಗದ 'ಕ್ವಿಕ್ ಲಿಂಕ್ಸ್' ಮೇಲೆ 'ಲಿಂಕ್ ಆಧಾರ್' ಕ್ಲಿಕ್ ಮಾಡಿ. ನಂತರ ಸ್ಕ್ರೀನ್ ಮೇಲೆ ಹೊಸ ಪೇಜ್ ತೆರೆಯುತ್ತದೆ.

-ಈ ಪುಟದ ಮೇಲ್ಭಾಗದಲ್ಲಿ ಹೈಪರ್ಲಿಂಕ್ ಇರುತ್ತದೆ, ಅದನ್ನು ಇಂಗ್ಲಿಷ್‌ನಲ್ಲಿ ಬರೆಯಲಾಗಿರುತ್ತದೆ, ನೀವು ಈಗಾಗಲೇ ಆಧಾರ್ ಲಿಂಕ್ ಮಾಡಲು ವಿನಂತಿಸಿದ್ದರೆ ಸ್ಟೇಟಸ್ ಪರಿಶೀಲಿಸಿ ಮೇಲೆ ಕ್ಲಿಕ್ ಮಾಡಿ.

-ಈ ಹೈಪರ್ ಲಿಂಕ್ ಅನ್ನು ಕ್ಲಿಕ್ ಮಾಡಿದ ನಂತರ ನಿಮ್ಮ ಪ್ಯಾನ್ ಮತ್ತು ಆಧಾರ್ ವಿವರಗಳನ್ನು ನೀವು ನಮೂದಿಸಬೇಕಾಗುತ್ತದೆ.

-'ವ್ಯೂ ಲಿಂಕ್ ಆಧಾರ್ ಸ್ಥಿತಿ' ಕ್ಲಿಕ್ ಮಾಡಿ. ಅದರ ಫಲಿತಾಂಶದಲ್ಲಿ ಪ್ಯಾನ್ ನಿಮ್ಮ ಆಧಾರ್ ಗೆ ಲಿಂಕ್ ಆಗಿದೆಯೇ ಅಥವಾ ಇಲ್ಲವೇ ಎಂಬುದು ನಿಮಗೆ ತಿಳಿಯುತ್ತದೆ.

English summary
Here are the Consequences You May Face If You Don't Link Pan With Aadhaar by June 30
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X