Budget 2025: ಇದು ಜನಪರ ಬಜೆಟ್; ಉಳಿತಾಯ ಮತ್ತು ಹೂಡಿಕೆಗೆ ಉತ್ತೇಜನ ಸಿಗುತ್ತದೆ ಎಂದ ಪ್ರಧಾನಿ ಮೋದಿ
2025ರ ಕೇಂದ್ರ ಬಜೆಟ್ ಮಂಡನೆಯಾಗಿದ್ದು ಇದು ಜನರ ಬಜೆಟ್ ಎಂದು ಪ್ರಧಾನಿ ನರೇಂದ್ರ ಮೋದಿ ಹಾಡಿ ಹೊಗಳಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರ ಬಜೆಟ್ ಮಂಡನೆ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಈ ಬಜೆಟ್ ಹೂಡಿಕೆಯನ್ನು ಹೆಚ್ಚಿಸುವ ಜೊತೆಗೆ ವಿಕಸಿತ ಭಾರತದ ಗುರಿಯನ್ನು ತಲುಪಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.
ಬಜೆಟ್‌ನಲ್ಲಿ ಆದಾಯ ತೆರಿಗೆ ವಿನಾಯಿತಿ ನೀಡಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ ಪ್ರಧಾನಿ ಮೋದಿ, ಈ ಬಜೆಟ್‌ನಲ್ಲಿ 12 ಲಕ್ಷ ರೂಪಾಯಿವರೆಗೆ ಆದಾಯ ಹೊಂದಿರುವವರಿಗೆ ತೆರಿಗೆ ವಿನಾಯಿತಿ ನೀಡಲಾಗಿದೆ. ದುಡಿಯುವ ವರ್ಗದ ಮೇಲಿನ ತೆರಿಗೆ ಹೊರೆಯನ್ನು ಕಡಿಮೆ ಮಾಡಿದ್ದು ಮಧ್ಯಮ ವರ್ಗಕ್ಕೆ ಹೆಚ್ಚಿನ ಪ್ರಯೋಜನ ನೀಡುತ್ತದೆ ಎಂದು ಹೇಳಿದ್ದಾರೆ.

ಮುಂದಿನ ವಾರ ಹೊಸ ತೆರಿಗೆ ನೀತಿಯನ್ನು ಪರಿಚಯಿಸಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಇದರಿಂದ ತೆರಿಗೆದಾರರಲ್ಲಿರು ಗೊಂದಲಗಳು ನಿವಾರಣೆಯಾಗಲಿವೆ ಎಂದರು.
ಬಜೆಟ್ ಮೇಲಿನ ಪ್ರತಿಕ್ರಿಯೆ ವಿಡಿಯೋ ಹಂಚಿಕೊಂಡಿದ್ದು, ಪ್ರವಾಸೋದ್ಯಮ, ಆತಿಥ್ಯ ಕ್ಷೇತ್ರಗಳು, ಹಡಗು ನಿರ್ಮಾಣ ಮತ್ತು ರೈತರಿಗೆ ಸಹಕಾರಿಯಾಗುವ ಬಜೆಟ್ ಸಲ್ಲಿಸಿದ್ದಕ್ಕಾಗಿ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಶ್ಲಾಘಿಸಿದ್ದಾರೆ.
ಬಜೆಟ್ ನಲ್ಲಿ ಎಲ್ಲಾ ಕ್ಷೇತ್ರಗಳಿಗೂ ಆದ್ಯತೆ ನೀಡಲಾಗಿದೆ, ಇದು ಮುಂದಿನ ವರ್ಷಗಳಲ್ಲಿ ದೊಡ್ಡ ಬದಲಾವಣೆಗಳಿಗೆ ಕಾರಣವಾಗಲಿದೆ. ಹಡಗು ನಿರ್ಮಾಣಕ್ಕೆ ಉದ್ಯಮ ಸ್ಥಾನಮಾನ ನೀಡಿದ್ದನ್ನು ಹೊಗಳುದ ಅವರು, ಇದರಿಂದ ದೇಶದಲ್ಲಿ ಹಡಗು ನಿರ್ಮಾಣಕ್ಕೆ ಹೆಚ್ಚಿನ ಪ್ರೋತ್ಸಾಹ ಸಿಕ್ಕಂತಾಗುತ್ತದೆ ಎಂದರು.
ಪ್ರವಾಸೋದ್ಯಮಕ್ಕೂ ಹೆಚ್ಚಿನ ಒತ್ತು ನೀಡಲಾಗಿದ್ದು 50 ಪ್ರಮುಖ ಪ್ರವಾಸಿ ಕೇಂದ್ರಗಳಲ್ಲಿ ಹೋಟೆಲ್ ಗಳನ್ನು ನಿರ್ಮಾಣ ಮಾಡಲಾಗುತ್ತದೆ. ಹೋಟೆಲ್ ಗಳನ್ನು ಮೂಲಸೌಕರ್ಯದ ವ್ಯಾಪ್ತಿಗೆ ತಂದಿರುವುದರಿಂದ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ಸಿಗುವ ಜೊತೆಗೆ ಉದ್ಯೋಗಗಳನ್ನು ಕೂಡ ಸೃಷ್ಟಿಸುತ್ತದೆ ಎಂದು ಹೇಳಿದ್ದಾರೆ.
ಇನ್ನು ಗಿಗ್ ಕೆಲಸಗಾರರಾದ (ಸ್ವಿಗ್ಗಿ, ಝೊಮಾಟೊದಂತಹ ಆನ್‌ಲೈನ್ ಡೆಲಿವರಿ ಕಂಪನಿ ಕೆಲಸಗಾರರು) ಸಾಮಾಜಿ ಭದ್ರತೆಗಳ ಬಗ್ಗೆ ಬಜೆಟ್‌ನಲ್ಲಿ ಒತ್ತು ನೀಡಿರುವುದನ್ನು ಕೂಡ ಅವರು ಶ್ಲಾಘಿಸಿದರು. ಕಾರ್ಮಿಕರ ಹಿತ ರಕ್ಷಣಗೆ ನಮ್ಮ ಸರ್ಕಾರ ಬದ್ದವಾಗಿದೆ ಎಂದರು.
'ಕಿಸಾನ್ ಕ್ರೆಡಿಟ್ ಕಾರ್ಡ್' ಅನ್ನು 5 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಿರುವುದು ಸೇರಿದಂತೆ ರೈತರಿಗಾಗಿ ಮಾಡಿರುವ ಘೋಷಣೆಗಳನ್ನು ಕೊಂಡಾಡಿದ ಅವರು, ಕೃಷಿ ವಲಯಕ್ಕೆ ಉತ್ತೇಜನೆ ನೀಡುವ ಮೂಲಕ ಗ್ರಾಮೀಣ ಆರ್ಥಿಕತೆಯಲ್ಲಿ ಹೊಸ ಕ್ರಾಂತಿ ಉಂಟಾಗಲಿದೆ ಎಂದು ಹೇಳಿದ್ದಾರೆ.












Click it and Unblock the Notifications