ವಾಹನ ಸವಾರರಿಗೆ ಮತ್ತಷ್ಟು ನೆಮ್ಮದಿ: ಪೆಟ್ರೋಲ್, ಡೀಸೆಲ್ ದರ ಇಳಿಕೆ
ನವದೆಹಲಿ, ನವೆಂಬರ್ 2: ಹಲವು ತಿಂಗಳಿಂದ ನಿರಂತರ ಏರಿಕೆಯಾಗುತ್ತಿದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ, ಒಂದು ವಾರದಿಂದ ಸತತ ಇಳಿಕೆ ಕಾಣುತ್ತಿದೆ. ಬೆಲೆ ಏರಿಕೆಯಿಂದ ತತ್ತರಿಸಿದ್ದ ವಾಹನ ಸವಾರರಿಗೆ ದೀಪಾವಳಿ ಹಬ್ಬದ ವೇಳೆಗೆ ತುಸು ನೆಮ್ಮದಿಯ ಸುದ್ದಿ ಸಿಗುತ್ತಿದೆ.
ಶುಕ್ರವಾರ ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕ್ರಮವಾಗಿ 19 ಮತ್ತು 14 ಪೈಸೆಗಳಷ್ಟು ಇಳಿಕೆಯಾಗಿದೆ.
ರಾಜಧಾನಿಯಲ್ಲಿ ಪೆಟ್ರೋಲ್ ಲೀಟರ್ಗೆ 79.18 ರೂ ಮತ್ತು ಡೀಸೆಲ್ ಬೆಲೆ ಲೀಟರ್ಗೆ 73.64 ರೂ.ನಂತೆ ಮಾರಾಟವಾಗುತ್ತಿದೆ.

ಮುಂಬೈನಲ್ಲಿ ಪೆಟ್ರೋಲ್ 18 ಪೈಸೆ ಮತ್ತು ಡೀಸೆಲ್ 14 ಪೈಸೆಗಳಷ್ಟು ತಗ್ಗಿದೆ. ವಾಣಿಜ್ಯ ನಗರಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 84.68 ರೂ. ಇದ್ದರೆ, ಡೀಸೆಲ್ ಬೆಲೆ 77.18 ರೂ. ಇದೆ.
ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 79.88 ರೂ. ಇದೆ. ಡೀಸೆಲ್ 74.10 ರೂ.ಗೆ ಮಾರಾಟವಾಗುತ್ತಿದೆ.
ತೈಲ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸುವಂತಾಗಿತ್ತು. ಕಳೆದ ತಿಂಗಳು ಕೇಂದ್ರ ಸರ್ಕಾರ ಸುಂಕ ಕಡಿತದ ಮೂಲಕ 2.50 ರೂ.ನಷ್ಟು ಬೆಲೆ ಇಳಿಕೆ ಮಾಡಿತ್ತು. ಆದರೆ, ಕೆಲವೇ ದಿನಗಳಲ್ಲಿ ಅದನ್ನೂ ಮೀರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕಂಡಿದ್ದವು.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications