ಮಾ.26: ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ; ನಿಮ್ಮ ನಗರಗಳಲ್ಲಿ ಬೆಲೆಯೆಷ್ಟು?
ನವದೆಹಲಿ, ಮಾರ್ಚ್ 26: ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ದಶಕದ ಬಳಿಕ ಮೊದಲ ಬಾರಿಗೆ ಪ್ರತಿ ಬ್ಯಾರೆಲ್‌ಗೆ 140 ಯುಎಸ್ ಡಾಲರ್ ಗಡಿ ಸಮೀಪಿಸಿತ್ತು. ಪರಿಣಾಮವಾಗಿ ಭಾರತದ ಸರ್ಕಾರಿ ತೈಲ ಕಂಪನಿಗಳು ಇಂಧನ ದರವನ್ನು ಏರಿಕೆ ಮಾಡುತ್ತಿವೆ. ಇಂದು (ಶನಿವಾರ, ಮಾರ್ಚ್ 26) ಕೂಡ ಇಂಧನ ಏರಿಕೆ ಕಂಡಿದೆ. ನಿನ್ನೆ (ಶುಕ್ರವಾರ) ಕೂಡ ಇಂಧನ ದರದಲ್ಲಿ ಏರಿಕೆಯಾಗಿದೆ. ಇದೀಗ ಶನಿವಾರವಾದ ಇಂದು(ಮಾರ್ಚ್ 26) ಸಹ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ. ಆ ಮೂಲಕ ಒಂದೇ ವಾರದಲ್ಲಿ ನಾಲ್ಕನೇ ಬಾರಿ ಇಂಧನ ದರ ಏರಿಕೆಯಾಗಿದೆ.
ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿರುವುದರಿಂದ ಮುಂದಿನ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಇಂಧನ ಏರಿಕೆ ಕಾಣುವ ಸಾಧ್ಯತೆಯನ್ನು ಅಂದಾಜಿಸಲಾಗಿತ್ತು.
ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಮಂಗಳವಾರ (ಮಾರ್ಚ್ 22) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು. ಅದಾದ ನಂತರ ಬುಧವಾರ (ಮಾರ್ಚ್ 23) ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 84 ಪೈಸೆ ಏರಿಕೆ ಮಾಡಲಾಗಿತ್ತು. ನಿನ್ನೆ (ಶುಕ್ರವಾರ) ಕೂಡ ಇಂಧನ ದರದಲ್ಲಿ ಏರಿಕೆಯಾಗಿದೆ. ಇದೀಗ ಶನಿವಾರವಾದ ಇಂದು(ಮಾರ್ಚ್ 26) ಸಹ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ. ಆ ಮೂಲಕ ಒಂದೇ ವಾರದಲ್ಲಿ ನಾಲ್ಕನೇ ಬಾರಿ ಇಂಧನ ದರ ಏರಿಕೆಯಾಗಿದೆ.
ವರದಿಗಳ ಪ್ರಕಾರ, ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್‌ಗೆ 120.7 ಯುಸ್ ಡಾಲರ್ನಂತೆ ವ್ಯವಹಾರ ನಡೆಸುತ್ತಿದೆ. ನಿನ್ನೆಯ ಸೆಷನ್ಗೆ ಹೋಲಿಸಿದರೆ 1.62 ಯುಎಸ್ ಡಾಲರ್‌ನಷ್ಟು ಏರಿಕೆಯಾಗಿದೆ. ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
Recommended Video

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 98.61 ರೂ.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆ ಹಿನ್ನಲೆ ಈಗ ಭಾರತದಲ್ಲೂ ತೈಲ ಬೆಲೆ ಏರಿಕೆ ಆರಂಭವಾಗಿದೆ. ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ 80 ಪೈಸೆ ಹೆಚ್ಚಳವಾಗಿದೆ. ದೆಹಲಿಯಲ್ಲಿ 80 ಪೈಸೆ ಹೆಚ್ಚಳದ ಮೂಲಕ ಪೆಟ್ರೋಲ್ ಬೆಲೆ ಪ್ರತಿ ಲೀಟರ್ಗೆ 98.61 ರೂಪಾಯಿಗೆ ಏರಿಕೆಯಾಗಿದೆ. ಡೀಸೆಲ್ ಬೆಲೆ 80 ಪೈಸೆ ಹೆಚ್ಚಳದ ಮೂಲಕ 89.87 ದಾಖಲಾಗಿದೆ.
ಗುರಗಾಂವ್‌ನಲ್ಲಿ ಲೀಟರ್ ಪೆಟ್ರೋಲ್ ದರ 98.78 ರೂಪಾಯಿ, ನೋಯ್ಡಾದಲ್ಲಿ ಲೀಟರ್ ಪೆಟ್ರೋಲ್ ದರ 98.54 ರೂಪಾಯಿ, ಭುವನೇಶ್ವರ್‌ದಲ್ಲಿ ಲೀಟರ್ ಪೆಟ್ರೋಲ್ ದರ 105.22 ರೂಪಾಯಿ, ಜೈಪುರದಲ್ಲಿ ಲೀಟರ್ ಪೆಟ್ರೋಲ್ ದರ 110.56 ರೂಪಾಯಿ ಇದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂ.
ಇನ್ನು ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 84 ಪೈಸೆ ಹೆಚ್ಚಳವಾಗಿದ್ದು, ಡೀಸೆಲ್ ಬೆಲೆಯಲ್ಲಿ 85 ಪೈಸೆ ಏರಿಕೆಯಾಗಿದೆ. ಈ ಮೂಲಕ ಲೀಟರ್ ಪೆಟ್ರೋಲ್ ದರ 113.35 ರೂ. ಡೀಸೆಲ್ ಬೆಲೆ 97.55 ರೂ. ದಾಖಲಾಗಿದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 104.43 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.47 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 103.93 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 88.14 ರೂಪಾಯಿ ದಾಖಲಾಗಿದೆ.

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಅಂತಾರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ
ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ದಶಕದ ಬಳಿಕ ಮೊದಲ ಬಾರಿಗೆ ಪ್ರತಿ ಬ್ಯಾರೆಲ್‌ಗೆ 140 ಯುಎಸ್ ಡಾಲರ್ ಗಡಿ ಸಮೀಪಿಸಿತ್ತು. ಪರಿಣಾಮವಾಗಿ ಭಾರತದ ಸರ್ಕಾರಿ ತೈಲ ಕಂಪನಿಗಳು ಇಂಧನ ದರವನ್ನು ಏರಿಕೆ ಮಾಡುತ್ತಿವೆ. ಇಂದು (ಶನಿವಾರ, ಮಾರ್ಚ್ 26) ಕೂಡ ಇಂಧನ ಏರಿಕೆ ಕಂಡಿದೆ. ವರದಿಗಳ ಪ್ರಕಾರ, ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್‌ಗೆ 120.7 ಯುಸ್ ಡಾಲರ್ನಂತೆ ವ್ಯವಹಾರ ನಡೆಸುತ್ತಿದೆ. ನಿನ್ನೆಯ ಸೆಷನ್ಗೆ ಹೋಲಿಸಿದರೆ 1.62 ಯುಎಸ್ ಡಾಲರ್‌ನಷ್ಟು ಏರಿಕೆಯಾಗಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.












Click it and Unblock the Notifications