ಸತತ 2ನೇ ದಿನ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ; ದರ ಪಟ್ಟಿ ನೋಡಿ

ನವದೆಹಲಿ, ಮಾರ್ಚ್ 23: ಸರಿ ಸುಮಾರು 137 ದಿನಗಳ ಬಳಿಕ ಭಾರತದ ಪ್ರಮುಖ ನಗರಗಳಲ್ಲಿ ಇಂಧನ ದರದಲ್ಲಿ ಮಾರ್ಚ್ 22ರಂದು ಏರಿಕೆ ಕಂಡು ಬಂದಿತ್ತು. ಇಂದು ಸತತ ಎರಡನೇ ದಿನ ಇಂಧನ ದರ ಮತ್ತೊಮ್ಮೆ ಪರಿಷ್ಕರಿಸಲಾಗಿದೆ. ಪೆಟ್ರೋಲ್ ಹಾಗೂ ಡೀಸೆಲ್ ದರ ಸುಮಾರು 80 ಪೈಸೆ ಪ್ರತಿ ಲೀಟರ್ ನಂತೆ ಬುಧವಾರವೂ ಏರಿಕೆ ಮಾಡಲಾಗಿದೆ. ರಷ್ಯಾ ಮತ್ತು ಉಕ್ರೇನ್ ನಡುವಿನ ಸಂಘರ್ಷ ಮುಂದುವರೆದಿದ್ದು, ಜಾಗತಿಕವಾಗಿ ಕಚ್ಚಾತೈಲ ಬೆಲೆ ಏರಿಳಿತ ಕಾಣುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಯಲ್ಲಿ ಸುಮಾರು 40% ಏರಿಕೆಯಾಗಿದ್ದು, ಕೈಗಾರಿಕಾ ಡೀಸೆಲ್ ಬೆಲೆ 25 ರು ಏರಿಕೆ ಮಾಡಲಾಗಿತ್ತು. ಇದಾದ ಬೆನ್ನಲ್ಲೇ ರೀಟೈಲ್ ದರ ಪೆಟ್ರೋಲ್, ಡೀಸೆಲ್ ದರ ಕೂಡಾ ಪರಿಷ್ಕರಿಸಲಾಗಿದೆ.

ಭಾರತದ ಮೂರು ಸರ್ಕಾರಿ ತೈಲ ಕಂಪನಿಗಳು ಇಂದು ಬುಧವಾರ (ಮಾರ್ಚ್, 23) ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿದ್ದು, ಇಂದು ಇಂಧನ ದರದಲ್ಲಿ ಬದಲಾವಣೆ ಕಂಡು ಬಂದಿದೆ. ದೇಶದ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಕಳೆದ ನವೆಂಬರ್​ 4ರಿಂದ ಇಂಧನ ದರ ಪರಿಷ್ಕರಿಸಿರಲಿಲ್ಲ.

Petrol And Diesel Price hiked On 23rd March 2022: Check Rate in Your City

ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್‌ಗೆ 115.6 ಯುಸ್ ಡಾಲರ್‌ನಂತೆ ವ್ಯವಹಾರ ನಡೆಸುತ್ತಿದೆ. ನಿನ್ನೆಯ ಸೆಷನ್‌ಗೆ ಹೋಲಿಸಿದರೆ ಶೇ 0.11ರಷ್ಟು ಏರಿಕೆ ಕಂಡಿದೆ. ಭಾರತದಲ್ಲಿ ಇಂಧನ ಆಮದು ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ರಾಜ್ಯಗಳಲ್ಲಿ ಅಬಕಾರಿ ಸುಂಕಗಳನ್ನು ಸೇರಿಸಲಾಗುತ್ತದೆ, ನಂತರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಗುರುಗ್ರಾಮ, ಪಾಟ್ನಾ, ನೋಯ್ಡಾ

ಗುರುಗ್ರಾಮ, ಪಾಟ್ನಾ, ನೋಯ್ಡಾ

ಪ್ರಮುಖ ಮೆಟ್ರೋ ನಗರಗಳನ್ನು ಹೊರತುಪಡಿಸಿದರೆ ಗುರುಗ್ರಾಮ, ಪಾಟ್ನಾ, ನೋಯ್ಡಾ, ಜೈಪುರ, ಭುವನೇಶ್ವರದಲ್ಲಿ ಇಂಧನ ದರ ಅಲ್ಪ ಪ್ರಮಾಣದಲ್ಲಿ ಏರಿಳಿತ ಕಾಣುತ್ತಿತ್ತು.
ಪಾಟ್ನಾದಲ್ಲಿ ಪೆಟ್ರೋಲ್ ದರ 107.55 ರೂಪಾಯಿ, ಡೀಸೆಲ್ ದರ 92.69 ರೂ;
ಗುರುಗ್ರಾಮದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 97.28 ರೂಪಾಯಿ, ಡೀಸೆಲ್ ದರ 88.51ರೂ;
ನೋಯ್ಡಾದಲ್ಲಿ ಲೀಟರ್ ಪೆಟ್ರೋಲ್ ದರ 97.23ರೂಪಾಯಿ, ಡೀಸೆಲ್ ದರ 88.75 ರೂ;
ಭುವನೇಶ್ವರ್‌ದಲ್ಲಿ ಲೀಟರ್ ಪೆಟ್ರೋಲ್ ದರ 103.81 ರೂಪಾಯಿ,ಡೀಸೆಲ್ ದರ 93.61 ರೂ;
ಜೈಪುರದಲ್ಲಿ ಲೀಟರ್ ಪೆಟ್ರೋಲ್ ದರ 108.40 ರೂಪಾಯಿ, ಡೀಸೆಲ್ ದರ 91.98 ರೂ;
ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 96.73 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 88.28 ರೂಪಾಯಿ ನಿಗದಿಯಾಗಿದೆ

ಪ್ರಮುಖ ನಗರಗಳಲ್ಲಿ ಎಷ್ಟು ಬದಲಾವಣೆ

ಪ್ರಮುಖ ನಗರಗಳಲ್ಲಿ ಎಷ್ಟು ಬದಲಾವಣೆ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 97.01 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 88.27 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 111.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.85 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.96 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 92.99 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 106.34 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 91.42 ರೂಪಾಯಿ ನಿಗದಿಯಾಗಿದೆ.

ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಅತ್ಯಧಿಕ

ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಅತ್ಯಧಿಕ

ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್‌ಗೆ 113.83 ರೂಪಾಯಿ ಹಾಗೂ ಲೀಟರ್ ಡೀಸೆಲ್‌ಗೆ 96.88 ರೂಪಾಯಿ ದಾಖಲಾಗಿದೆ. ಭೋಪಾಲ್‌ನಲ್ಲಿ ಲೀಟರ್ ಪೆಟ್ರೋಲ್ ದರ 108.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 92.52 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 97.24 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 83.35ರೂಪಾಯಿ ನಿಗದಿಯಾಗಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ

ಹೈದರಾಬಾದ್‌ನಲ್ಲಿ ಲೀಟರ್ ಪೆಟ್ರೋಲ್ ದರ 110.01 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.37 ರೂಪಾಯಿ ನಿಗದಿಯಾಗಿದೆ. ಗುಜರಾತ್‌ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 97.18 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.25 ರೂಪಾಯಿ ನಿಗದಿಯಾಗಿದೆ. ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್‌ಗೆ 108.11 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 95.17 ರೂಪಾಯಿ ನಿಗದಿಯಾಗಿದೆ. ಇನ್ನು ಕರ್ನಾಟಕದ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 102.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.58 ರೂಪಾಯಿ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+