ಅ.14: ದಸರಾ ಹಬ್ಬದಲ್ಲಿ ಗ್ರಾಹಕರಿಗೆ ಶಾಕ್; ಇಂಧನ ದರ ಮತ್ತೆ ಹೆಚ್ಚಳ!

ನವದೆಹಲಿ, ಅಕ್ಟೋಬರ್ 14: ನವರಾತ್ರಿ ಹಾಗೂ ದಸರಾ ಹಬ್ಬದ ಸಂದರ್ಭದಲ್ಲಿ ದೇಶದ ಗ್ರಾಹಕರಿಗೆ ಶಾಕ್ ನೀಡಿರುವ ತೈಲ ಕಂಪನಿಗಳು, ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿವೆ. ಈಗಾಗಲೇ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದರಿಂದಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಮೇಲೆ ಜನರು ಹಿಡಿ ಶಾಪ ಹಾಕುತ್ತಿದ್ದಾರೆ.

ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಮತ್ತೆ ಏರಿಕೆ ಮಾಡಿದ್ದು, ಕಳೆದ ಎರಡು ದಿನಗಳಿಂದ ಇಂಧನ ದರ ಸ್ಥಿರವಾಗಿತ್ತು. ಆದರೆ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ದಾಟಿ ಇಂಧನ ದರ ಏರಿಕೆಯಾಗಿದ್ದು, ಇಂದು (ಅ.14, ಗುರುವಾರ) ಕೂಡ ಎಲ್ಲಾ ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಮತ್ತೆ ಏರಿಕೆಯಾಗಿದೆ.

ಸರ್ಕಾರಿ ತೈಲ ಕಂಪನಿಗಳಿಂದ ಕಳೆದ ಎರಡು ದಿನಗಳ ಬಳಿಕ ಇಂದು ಮತ್ತೆ ತೈಲ ದರ ಏರಿಕೆ ಕಂಡಿದ್ದು, ಇಂದು ಲೀಟರ್ ಪೆಟ್ರೋಲ್ ದರದಲ್ಲಿ 31ರಿಂದ 35 ಪೈಸೆ ಏರಿಕೆ ಮಾಡಲಾಗಿದೆ. ಇದೇ ವೇಳೆ ಒಂದು ಲೀಟರ್ ಡೀಸೆಲ್ ದರ 34 ರಿಂದ 37 ಪೈಸೆ ಹೆಚ್ಚಳವಾಗಿದೆ. ಆ ಬಳಿಕ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ದರವೊಂದೇ ಅಲ್ಲದೇ ಲೀಟರ್ ಡೀಸೆಲ್ ದರವೂ ಸಹ 100ರ ಗಡಿ ದಾಟಿ ಮುನ್ನುಗ್ಗಿದೆ.

Petrol And Diesel Price Hiked On October 14th: Check Rate in Your City

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 104.79 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.52 ರೂಪಾಯಿ ಇದೆ. ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 110.75 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 101.40 ರೂಪಾಯಿಗೆ ಏರಿಕೆ ಆಗಿದೆ. ಇನ್ನು ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 105.43 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.63 ರೂಪಾಯಿ ಇದೆ. ತಮಿಳುನಾಡಿನ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.10 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.93 ರೂಪಾಯಿ ಇದೆ.

Recommended Video

      IPL ಟ್ರೋಫಿ ಗೆಲ್ಲೋದಕ್ಕೆ ಅರ್ಹವಾಗಿರೋರು ನಾವಲ್ಲ ಎಂದ ಧೋನಿ!ಮತ್ಯಾರು? | Oneindia Kannada

      ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ
      ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

      Petrol And Diesel Price Hiked On October 14th: Check Rate in Your City


      ಅಂತರರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ
      ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+