ಅ.2: ಸತತ 3ನೇ ದಿನ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ ಬೆಲೆ: ಪ್ರಮುಖ ನಗರಗಳಲ್ಲಿ ದರವೆಷ್ಟು?

ನವದೆಹಲಿ, ಅಕ್ಟೋಬರ್ 2: ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಮತ್ತೆ ಏರಿಕೆ ಮಾಡಿದ್ದು, ಸತತ ಮೂರನೇ ದಿನ ಇಂಧನ ದರವು ಏರುಗತಿಯಲ್ಲಿ ಸಾಗುತ್ತಿದೆ. ಇಂದು (ಅ.2, ಶನಿವಾರ) ಕೂಡ ಎಲ್ಲಾ ಮಹಾ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಮತ್ತೆ ಏರಿಕೆಯಾಗಿದೆ.

ಇಂದು ಲೀಟರ್ ಪೆಟ್ರೋಲ್ ದರ 25 ಪೈಸೆ ಹೆಚ್ಚಳವಾಗಿದ್ದರೆ, ಲೀಟರ್ ಡೀಸೆಲ್ ದರ 30 ಪೈಸೆ ಹೆಚ್ಚಳವಾಗಿದೆ. ಶುಕ್ರವಾರ ಸಹ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಏರಿಕೆ ಕಂಡಿತ್ತು. ಇಂದು ಸೇರಿದಂತೆ ಸತತ ಮೂರನೇ ದಿನ ಇಂಧನ ದರ ಏರಿಕೆ ಆಗಿರುವುದು ಗ್ರಾಹಕರಿಗೆ ಬೇಸರ ಮೂಡಿಸಿದೆ. ಈಗಲೇ ಇಂಧನ ದರ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿದ್ದು, ಇದರ ಮೇಲೆ ಮತ್ತೆ ಬೆಲೆ ಏರಿಕೆ ಆಗುತ್ತಿರುವುದು ಸಾಮಾನ್ಯ ಜನರ ಕೆಂಗಣ್ಣಿಗೆ ಕಾರಣವಾಗಿದೆ.

Recommended Video

      ಜಕ್ಕೂರು ವೈಮಾನಿಕ ಶಾಲೆ ಸದ್ಯದಲ್ಲೇ ಪುನರಾರಂಭ | Oneindia Kannada

       ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ ಎಷ್ಟಿದೆ?

      ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ ಎಷ್ಟಿದೆ?

      ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 102.14 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.47 ರೂಪಾಯಿಗೆ ಏರಿಕೆಯಾಗಿದೆ. ಮಹಾರಾಷ್ಟ್ರದ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 108.15 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.12 ರೂಪಾಯಿ ಆಗಿದೆ.

      ಅದೇ ರೀತಿ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 102.74 ರೂಪಾಯಿ ಹಾಗೂ ಲೀಟರ್ ಡಿಸೆಲ್ ದರ 93.54 ರೂಪಾಯಿ ಇದೆ. ತಮಿಳುನಾಡಿನ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 99.79 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.99 ರೂಪಾಯಿಗೆ ಏರಿಕೆ ಆಗಿದೆ.

       ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ ಎಷ್ಟು?

      ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ ಎಷ್ಟು?

      ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 105.65 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.98 ರೂಪಾಯಿಗೆ ಏರಿಕೆ ಆಗಿದೆ. ಮಧ್ಯಪ್ರದೇಶದ ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 110.59 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 99.17 ರೂಪಾಯಿ ಇದೆ.

      ಉತ್ತರ ಪ್ರದೇಶದ ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 99.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.85 ರೂಪಾಯಿ ಇದೆ. ಬಿಹಾರದ ಪಾಟ್ನಾದಲ್ಲಿ ಲೀಟರ್ ಪೆಟ್ರೋಲ್ ದರ 104.91 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.72 ರೂಪಾಯಿ ಇದೆ. ಚಂಡೀಗಢದಲ್ಲಿ ಲೀಟರ್ ಪೆಟ್ರೋಲ್ ದರ 98.29 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.17 ರೂಪಾಯಿ ನಿಗದಿಯಾಗಿದೆ.

       ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

      ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

      ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

       ಅಂತರರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ

      ಅಂತರರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ

      ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+