ಮಾ.8: ಕಚ್ಚಾತೈಲ ಬೆಲೆ ಸಾರ್ವಕಾಲಿಕ ಹೆಚ್ಚಳ; ದೇಶದಲ್ಲಿ ಇಂಧನ ದರವೆಷ್ಟು?

ನವದೆಹಲಿ, ಮಾರ್ಚ್ 8: ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ದಶಕದ ಬಳಿಕ ಮೊದಲ ಬಾರಿಗೆ ಪ್ರತಿ ಬ್ಯಾರೆಲ್‌ಗೆ 120 ಯುಎಸ್ ಡಾಲರ್ ಗಡಿ ದಾಟಿದೆ. ಈ ನಡುವೆ ಭಾರತದ ಸರ್ಕಾರಿ ತೈಲ ಕಂಪನಿಗಳು ಇಂದು (ಮಂಗಳವಾರ, ಮಾರ್ಚ್.8) ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿದ್ದು, ಇಂದು ಕೂಡ ಇಂಧನ ದರದಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ದೇಶದ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಕಳೆದ ನವೆಂಬರ್​ 4ರಿಂದ ಇಂಧನ ದರ ಸ್ಥಿರವಾಗಿದೆ.

ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿರುವುದರಿಂದ ಮುಂದಿನ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಾಣುವ ಸಾಧ್ಯತೆ ಇದೆ. ವರದಿಗಳ ಪ್ರಕಾರ, ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್​ಗೆ 127.1 ಯುಸ್ ಡಾಲರ್​ನಂತೆ ವ್ಯವಹಾರ ನಡೆಸುತ್ತಿದೆ. ನಿನ್ನೆಯ ಸೆಷನ್​ಗೆ ಹೋಲಿಸಿದರೆ 3.89 ಡಾಲರ್ ಏರಿಕೆಯಾಗಿದೆ. ಆದರೆ ಭಾರತದಲ್ಲಿ ಕಳೆದ ವರ್ಷದ ನವೆಂಬರ್​ನಲ್ಲಿ ಸರ್ಕಾರದಿಂದ ತೈಲ ಬೆಲೆಯ ಅಬಕಾರಿ ಸುಂಕ ಇಳಿಕೆ ಮಾಡಿದ ಮೇಲೆ ಬೆಲೆ ಸ್ಥಿರವಾಗಿಯೇ ಇದೆ.

ಪರಿಣಾಮವಾಗಿ, ಭೌಗೋಳಿಕ-ರಾಜಕೀಯ ಬಿಕ್ಕಟ್ಟು-ನೇತೃತ್ವದ ಕಚ್ಚಾ ತೈಲ ಬೆಲೆಯಲ್ಲಿ ಜಾಗತಿಕ ಏರಿಕೆಯು ಭಾರತದ ದೇಶೀಯ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಲೀಟರ್‌ಗೆ 15-22 ರೂ.ರಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.

ರಷ್ಯಾ ವಿಶ್ವದ ಮೂರನೇ ಅತಿದೊಡ್ಡ ಕಚ್ಚಾ ತೈಲ ಉತ್ಪಾದಕವಾಗಿದೆ. ರಷ್ಯಾದ ವಿರುದ್ಧದ ನಿರ್ಬಂಧಗಳು ಜಾಗತಿಕ ಪೂರೈಕೆಗಳನ್ನು ಮೊಟಕುಗೊಳಿಸುತ್ತದೆ ಮತ್ತು ಬೆಳವಣಿಗೆಯನ್ನು ನಿಗ್ರಹಿಸುತ್ತದೆ ಎಂದು ಭಯಪಡಲಾಗಿದೆ.

ಗುರಗಾಂವ್‌ನಲ್ಲಿ ಲೀಟರ್ ಪೆಟ್ರೋಲ್ ದರ 95.59 ರೂಪಾಯಿ, ನೋಯ್ಡಾದಲ್ಲಿ ಲೀಟರ್ ಪೆಟ್ರೋಲ್ ದರ 95.73 ರೂಪಾಯಿ, ಭುವನೇಶ್ವರ್‌ದಲ್ಲಿ ಲೀಟರ್ ಪೆಟ್ರೋಲ್ ದರ 101.81 ರೂಪಾಯಿ, ಜೈಪುರದಲ್ಲಿ ಲೀಟರ್ ಪೆಟ್ರೋಲ್ ದರ 107.06 ರೂಪಾಯಿ ಇದೆ.

 ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂ.

ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

 ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂ.

ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್‌ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಇನ್ನು ಕರ್ನಾಟಕದ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.

 ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

 ಅಂತಾರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ

ಅಂತಾರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ

ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್​- ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ವರದಿಗಳ ಪ್ರಕಾರ, ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್​ಗೆ 127.1 ಯುಸ್ ಡಾಲರ್​ನಂತೆ ವ್ಯವಹಾರ ನಡೆಸುತ್ತಿದೆ. ನಿನ್ನೆಯ ಸೆಷನ್​ಗೆ ಹೋಲಿಸಿದರೆ 3.89 ಡಾಲರ್ ಏರಿಕೆಯಾಗಿದೆ. ಆದರೆ ಭಾರತದಲ್ಲಿ ಕಳೆದ ವರ್ಷದ ನವೆಂಬರ್​ನಲ್ಲಿ ಸರ್ಕಾರದಿಂದ ತೈಲ ಬೆಲೆಯ ಅಬಕಾರಿ ಸುಂಕ ಇಳಿಕೆ ಮಾಡಿದ ಮೇಲೆ ಬೆಲೆ ಸ್ಥಿರವಾಗಿಯೇ ಇದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

Recommended Video

      ರಷ್ಯಾ ಸಪೋರ್ಟ್ ಗೆ ನಿಂತಿರೋ ಚೀನಾ‌ ವಿರುದ್ಧ ಅಮೆರಿಕಾ ದಾಳಿ ಗ್ಯಾರೆಂಟಿ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+