ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನ.26: ಸತತ 22ನೇ ದಿನವೂ ಪೆಟ್ರೋಲ್, ಡೀಸೆಲ್ ದರದಲ್ಲಿ ಸ್ಥಿರತೆ

|
Google Oneindia Kannada News

ನವದೆಹಲಿ, ನವೆಂಬರ್ 26: ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಇಂದು (ನವೆಂಬರ್ 26, ಶುಕ್ರವಾರ) ಸಹ ಯಾವುದೇ ಬದಲಾವಣೆ ಮಾಡಿಲ್ಲ. ಸತತ ಇಪ್ಪತ್ತೆರಡನೇ ದಿನವೂ ಇಂಧನ ದರ ಸ್ಥಿರವಾಗಿದೆ. ಇತ್ತೀಚಿಗೆ ಕೇಂದ್ರ ಹಾಗೂ ವಿವಿಧ ರಾಜ್ಯಗಳಲ್ಲಿ ಅಬಕಾರಿ ಸುಂಕ, ಸೆಸ್, ವ್ಯಾಟ್ ಇಳಿಕೆ ಮಾಡಿದ್ದು, ಭಾರತದಲ್ಲಿ ಇಂಧನ ದರ ಭಾರಿ ಇಳಿಕೆ ಕಂಡಿದೆ.

ಡೀಸೆಲ್ ಬೆಲೆ ಏರಿಕೆಯಿಂದ ಸರಕು ಸಾಗಣೆ ವ್ಯತ್ಯಯ, ಅಗತ್ಯ ವಸ್ತುಗಳ ಬೆಲೆ ಏರಿಕೆಗೂ ಕಾರಣವಾಗಿತ್ತು. ಆದರೆ, ಅನೇಕ ನಗರಗಳಲ್ಲಿ ಇಂಧನ ದರ ತಗ್ಗಿದೆ. ನವೆಂಬರ್ 4ರಂದು ಕೇಂದ್ರ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ ಅನೇಕ ರಾಜ್ಯಗಳು ವ್ಯಾಟ್ ಅನ್ನು ಕಡಿಮೆ ಮಾಡಿತ್ತು.

ದೀಪಾವಳಿ ಸಂದರ್ಭದಲ್ಲಿ ಕೊಂಚ ಪ್ರಮಾಣದಲ್ಲಿ ಇಳಿಕೆ ಆಯಿತು. ಆ ನಂತರದಲ್ಲಿ ಇಂಧನ ದರದಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ಕೆಲವೇ ಗಂಟೆಗಳ ನಂತರ ಹಲವಾರು ರಾಜ್ಯಗಳು ಕೂಡ ಇಂಧನ ಬೆಲೆ ಕಡಿತಗೊಳಿಸಿದವು. ರಾಜ್ಯಗಳು ಸ್ಥಳೀಯ ಮಾರಾಟ ತೆರಿಗೆ ಅಥವಾ ವ್ಯಾಟ್ಅನ್ನು ಮೂಲ ಬೆಲೆಯ ಮೇಲೆ ಮಾತ್ರವಲ್ಲದೇ ಕೇಂದ್ರವೂ ವಿಧಿಸುವ ಅಬಕಾರಿ ಸುಂಕದ ಮೇಲೂ ನಿರ್ಧರಿಸುವುದರಿಂದ ಹೆಚ್ಚು ವ್ಯಾಟ್ ಹೊಂದಿರುವ ರಾಜ್ಯಗಳಲ್ಲಿ ಕಡಿತವು ದೊಡ್ಡ ಮಟ್ಟದ್ದಾಗಿದೆ. ಪ್ರಮುಖ ನಗರಗಳಲ್ಲಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

 ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂ.

ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 103.97 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

 ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್‌ನ್ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಇನ್ನು ಕರ್ನಾಟಕದ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.

 ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

Recommended Video

New Zealand ವಿರುದ್ಧದ ಪಂದ್ಯದಲ್ಲಿ Pakistan ಬಗ್ಗೆ ಕೂಗು | Oneindia Kannada
 ಅಂತರರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ

ಅಂತರರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

English summary
State-owned oil companies have not changed their petrol and diesel rates on Friday (November. 26).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X