ನ.27: ಸತತ 23ನೇ ದಿನವೂ ಏರಿಳಿತ ಕಾಣದ ಪೆಟ್ರೋಲ್, ಡೀಸೆಲ್ ದರ

ನವದೆಹಲಿ, ನವೆಂಬರ್ 27: ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಇಂದು (ನವೆಂಬರ್ 27, ಶನಿವಾರ) ಸಹ ಯಾವುದೇ ಬದಲಾವಣೆ ಮಾಡಿಲ್ಲ. ಸತತ ಇಪ್ಪತ್ಮೂರನೇ ದಿನವೂ ಇಂಧನ ದರ ಸ್ಥಿರವಾಗಿದೆ. ಇತ್ತೀಚೆಗೆ ಕೇಂದ್ರ ಹಾಗೂ ವಿವಿಧ ರಾಜ್ಯಗಳಲ್ಲಿ ಅಬಕಾರಿ ಸುಂಕ, ಸೆಸ್, ವ್ಯಾಟ್ ಇಳಿಕೆ ಮಾಡಿದ್ದು, ಭಾರತದಲ್ಲಿ ಇಂಧನ ದರ ಭಾರಿ ಇಳಿಕೆ ಕಂಡಿದೆ.

ಡೀಸೆಲ್ ಬೆಲೆ ಏರಿಕೆಯಿಂದ ಸರಕು ಸಾಗಣೆ ವ್ಯತ್ಯಯ, ಅಗತ್ಯ ವಸ್ತುಗಳ ಬೆಲೆ ಏರಿಕೆಗೂ ಕಾರಣವಾಗಿತ್ತು. ಆದರೆ, ಅನೇಕ ನಗರಗಳಲ್ಲಿ ಇಂಧನ ದರ ತಗ್ಗಿದೆ. ನವೆಂಬರ್ 4ರಂದು ಕೇಂದ್ರ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ ಅನೇಕ ರಾಜ್ಯಗಳು ವ್ಯಾಟ್ ಅನ್ನು ಕಡಿಮೆ ಮಾಡಿದ್ದವು.

ದೀಪಾವಳಿ ಸಂದರ್ಭದಲ್ಲಿ ಕೊಂಚ ಪ್ರಮಾಣದಲ್ಲಿ ಇಳಿಕೆ ಆಯಿತು. ಆ ನಂತರದಲ್ಲಿ ಇಂಧನ ದರದಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ಕೆಲವೇ ಗಂಟೆಗಳ ನಂತರ ಹಲವಾರು ರಾಜ್ಯಗಳು ಕೂಡ ಇಂಧನ ಬೆಲೆ ಕಡಿತಗೊಳಿಸಿದವು. ರಾಜ್ಯಗಳು ಸ್ಥಳೀಯ ಮಾರಾಟ ತೆರಿಗೆ ಅಥವಾ ವ್ಯಾಟ್ಅನ್ನು ಮೂಲ ಬೆಲೆಯ ಮೇಲೆ ಮಾತ್ರವಲ್ಲದೇ ಕೇಂದ್ರವೂ ವಿಧಿಸುವ ಅಬಕಾರಿ ಸುಂಕದ ಮೇಲೂ ನಿರ್ಧರಿಸುವುದರಿಂದ ಹೆಚ್ಚು ವ್ಯಾಟ್ ಹೊಂದಿರುವ ರಾಜ್ಯಗಳಲ್ಲಿ ಕಡಿತವು ದೊಡ್ಡ ಮಟ್ಟದ್ದಾಗಿದೆ. ಪ್ರಮುಖ ನಗರಗಳಲ್ಲಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

 ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 103.97 ರೂ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 103.97 ರೂ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 103.97 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

 ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂ.

ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್‌ನ್ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಇನ್ನು ಕರ್ನಾಟಕದ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.

 ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

 ಅಂತರರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ

ಅಂತರರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+