ಫೆ.12: ದೇಶದ ಪ್ರಮುಖ ನಗರಗಳಲ್ಲಿ ಇಂಧನ ದರ ಎಷ್ಟಿದೆ?
ನವದೆಹಲಿ, ಫೆಬ್ರವರಿ 12: ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ದೇಶದಲ್ಲಿ ಇಂದು (ಫೆಬ್ರವರಿ 12, ಶನಿವಾರ) ಸಹ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತ ಆಗುತ್ತಿದ್ದರೂ, ಭಾರತದಲ್ಲಿ ಇಂಧನ ದರ ಸ್ಥಿರತೆ ಕಾಪಾಡಿಕೊಂಡಿದೆ.
ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿರುವುದರಿಂದ ಬರೋಬ್ಬರಿ ಮೂರು ತಿಂಗಳುಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಾಣುವ ಸಾಧ್ಯತೆ ಇದೆ.
ವರದಿಗಳ ಪ್ರಕಾರ, ಜಾಗತಿಕ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್ಗೆ 88 ಡಾಲರ್ ಆಗಿದೆ. ಬ್ರೆಂಟ್ ಕಚ್ಚಾ ಫ್ಯೂಚರ್ಸ್ 87 ಸೆಂಟ್ಸ್ ಅಥವಾ ಶೇ.1ರಷ್ಟು ಮೇಲೇರಿ, 0543 GMTಯಲ್ಲಿ ಪ್ರತಿ ಬ್ಯಾರೆಲ್ಗೆ 88.38 ಡಾಲರ್ನಂತೆ ವ್ಯವಹಾರ ನಡೆಸುತ್ತಿತ್ತು. ಈ ಹಿಂದಿನ ಸೆಷನ್ಗೆ ಹೋಲಿಸಿದರೆ ಶೇ.1.2ರಷ್ಟು ಹೆಚ್ಚಳ ಆಗಿತ್ತು.
ಸಾಮಾನ್ಯ ಹಣದುಬ್ಬರದ ಹಿನ್ನೆಲೆಯಿಂದಾಗಿ ಭಾರತದಲ್ಲಿ ತೈಲ ಬೆಲೆಗೆ ಇನ್ನಷ್ಟು ಉತ್ತೇಜನ ನೀಡಬಹುದು. ಅದರಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೆ ಕಾರಣ ಆಗುತ್ತದೆ. ಅಂದಹಾಗೆ ಕಳೆದ ವರ್ಷದ ನವೆಂಬರ್ನಲ್ಲಿ ಸರ್ಕಾರದಿಂದ ತೈಲ ಬೆಲೆಯ ಅಬಕಾರಿ ಸುಂಕ ಇಳಿಕೆ ಮಾಡಿದ ಮೇಲೆ ಬೆಲೆ ಸ್ಥಿರವಾಗಿಯೇ ಇದೆ. ಆದರೆ ಹೊಸ ವರ್ಷದ ಶುರುವಿನಿಂದಲೂ ಕಚ್ಚಾ ತೈಲ ಬೆಲೆಯಲ್ಲಿ ಏರಿಕೆ ಆಗುತ್ತಲೇ ಇದೆ. ಒಂದು ವರದಿಗಳ ಪ್ರಕಾರ, ಕಳೆದ ನಾಲ್ಕು ವಾರದಲ್ಲಿ ಶೇ.25ರಷ್ಟು ಹೆಚ್ಚಳವಾಗಿದೆ.
ಜಾರ್ಖಂಡ್ ಸರ್ಕಾರ ದ್ವಿಚಕ್ರ ವಾಹನ ಸವಾರರಿಗೆ ಪೆಟ್ರೋಲ್ ಬೆಲೆಯಲ್ಲಿ 25 ರೂ. ಕಡಿತಗೊಳಿಸುವುದಾಗಿ ಘೋಷಿಸಿದ ನಂತರ ಜನವರಿ 26ರಿಂದ ಜಾರಿಗೆ ಬಂದಿದೆ. ಉಳಿದಂತೆ ಎಲ್ಲೆಡೆ ಇಂಧನ ದರ ಸ್ಥಿರವಾಗಿದ್ದು, ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಂದು ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.41 ರೂ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂ.
ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.
ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್‌ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಇನ್ನು ಕರ್ನಾಟಕದ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಅಂತರರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ
ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್- ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ಕಳೆದ ವಾರ ಯುಎಸ್ನ ಬೆಂಚ್ಮಾರ್ಕ್ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್ಗೆ 70 ಡಾಲರ್ಗಳಷ್ಟು ಕುಸಿದಿತ್ತು. ಹಾಗೆಯೇ, ಬ್ರೆಂಟ್ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್ಗೆ 72 ರೂ. ಕಡಿಮೆಯಾಗಿತ್ತು. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
-
Adani: ವಿಕಲಚೇತನ ಛಾಯಾಗ್ರಾಹಕರಿಗಾಗಿ 'ಗ್ಲೋಬಲ್ ಎಬಿಲಿಟಿ ಫೋಟೋಗ್ರಫಿ ಚಾಲೆಂಜ್ 2026' ಘೋಷಣೆ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಏರಿಕೆ: ಇಲ್ಲಿದೆ ಮಾರ್ಚ್ 26ರ ದರಪಟ್ಟಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL











Click it and Unblock the Notifications