13 ದಿನದಿಂದ ಪೆಟ್ರೋಲ್-ಡೀಸೆಲ್ ದರ ಸ್ಥಿರ: ಏ.19ರಂದು ನಿಮ್ಮ ನಗರಗಳಲ್ಲಿ ಬೆಲೆ ಹೇಗಿದೆ?
ನವದೆಹಲಿ, ಏಪ್ರಿಲ್ 19: ದೇಶದಲ್ಲಿ ಹಲವಾರು ದಿನಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಸ್ಥಿರವಾಗಿದೆ. ಮಾರ್ಚ್ 22ರಿಂದ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಏರಿಕೆ ಕಂಡು ಬಂದಿತ್ತು. ಆದರೆ ಕಳೆದ ಸತತ 13 ದಿನದಿಂದ ಇಂಧನ ದರವು ಸ್ಥಿರವಾಗಿದೆ. ಇಂದು (ಏಪ್ರಿಲ್ 19, 2022) ರಂದು ಕೂಡಾ ಪೆಟ್ರೋಲ್, ಡೀಸೆಲ್ ದರ ಸ್ಥಿರವಾಗಿದೆ.
ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಏಪ್ರಿಲ್ 19ರಂದು ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆ ಮಾಡಿಲ್ಲ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈಗ ಪೆಟ್ರೋಲ್ ಬೆಲೆ ರೂ. 105.41 ಆಗಿದೆ. ಇನ್ನು ಡಿಸೇಲ್ ಬೆಲೆಯು ಲೀಟರ್‌ಗೆ 96.67ಗೆ ತಲುಪಿದೆ.
ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ದಶಕದ ಬಳಿಕ ಮೊದಲ ಬಾರಿಗೆ ಭಾರೀ ಏರಿಕೆ ಕಂಡು ಬಂದಿದೆ. ಈ ಬೆನ್ನಲ್ಲೇ ದೇಶದಲ್ಲಿ ಸುಮಾರು 137 ದಿನಗಳ ನಂತರ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಏರಿಕೆ ಮಾಡಲಾಗಿದೆ. ಸತತ ಎರಡು ದಿನ ಏರಿಕೆ ಕಂಡಿದ್ದ ಪೆಟ್ರೋಲ್, ಡೀಸೆಲ್ ದರ ಮೂರನೇ ದಿನ ಸ್ಥಿರವಾಗಿತ್ತು. ಆದರೆ ಬಳಿಕ ನಿರಂತರವಾಗಿ ಏರಿಕೆ ಕಂಡು ಬಂದಿತ್ತು. ಆದರೆ ಕಳೆದ ಹಲವು ದಿನಗಳಿಂದ ಸ್ಥಿರವಾಗಿದೆ. ಹಾಗಾದರೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ..

ಬೆಂಗಳೂರು ಸೇರಿ ಇತರ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ದರ
ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ 111.09 ರೂಪಾಯಿ ಆಗಿದೆ. ಇನ್ನು ಡೀಸೆಲ್ ಬೆಲೆಯು ಕೂಡಾ ಸ್ಥಿರವಾಗಿದೆ. ಡಿಸೇಲ್ ಬೆಲೆಯು 94.79 ಆಗಿದೆ. ಚೆನ್ನೈನಲ್ಲಿ ಪೆಟ್ರೋಲ್ ದರ 110.85 ರೂಪಾಯಿ, ಡೀಸೆಲ್ ದರ 100.94 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ದರ 115.12 ರೂಪಾಯಿ, ಡೀಸೆಲ್ ದರ 99.83 ರೂಪಾಯಿ ಆಗಿದೆ.

ವಾಣಿಜ್ಯ ನಗರಿ ಪೆಟ್ರೋಲ್, ಡೀಸೆಲ್ ದರ
ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಇಂದು ಪೆಟ್ರೋಲ್ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದ್ದು, ರೂ. 120.51 ಗೆ ತಲುಪಿದರೆ, ಡೀಸೆಲ್ ಬೆಲೆ ರೂ. 104.77 ಆಗಿದೆ. ಇನ್ನು ಹೈದರಾಬಾದ್‌ನಲ್ಲಿ ಪೆಟ್ರೋಲ್ ದರ 119.49 ರೂಪಾಯಿ ಆಗಿದ್ದರೆ, ಡೀಸೆಲ್ ದರ 105.49 ರೂಪಾಯಿ ಆಗಿದೆ. ಇನ್ನು ರಾಜ್ಯ ರಾಜಧಾನಿ ಪೈಕಿ ಚಂಡೀಗಢದಲ್ಲಿ ಅತೀ ಕಡಿಮೆ ಡೀಸೆಲ್ ದರವಿದೆ. ಪ್ರತಿ ಲೀಟರ್‌ಗೆ 90.83 ರೂಪಾಯಿ ಆಗಿದೆ. ಇನ್ನು ಪೆಟ್ರೋಲ್ ದರವು ಕೂಡಾ ಚಂಡೀಗಢದಲ್ಲಿ ಕಡಿಮೆ ಇದೆ. 104.74 ರೂಪಾಯಿ ಆಗಿದೆ.

ಪ್ರಮುಖ ನಗರಗಳಲ್ಲಿ ಬೆಲೆ ಎಷ್ಟಿದೆ?
ದೇಶದ ಎಲ್ಲಾ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ದರವು ನೂರರ ಗಡಿಯನ್ನು ದಾಟಿದೆ. ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ದರವು 104 ರೂಪಾಯಿಯಿಂದ 120 ರೂಪಾಯಿ ಆಸುಪಾಸಿನಲ್ಲಿದೆ. ಇನ್ನು ಡೀಸೆಲ್ ದರವು ದೇಶದ ಕೆಲವು ಪ್ರಮುಖ ನಗರದಲ್ಲಿ ನೂರರ ಗಡಿಯನ್ನು ದಾಟಿದೆ. ಹೈದರಾಬಾದ್, ಮುಂಬೈ, ಚೆನ್ನೈ, ಭುವನೇಶ್ವರ, ಪಾಟ್ನಾ, ತಿರುವನಂತಪುರಂನಲ್ಲಿ ಡೀಸೆಲ್ ದರವು ನೂರರ ಗಡಿಯನ್ನು ದಾಟಿದೆ. ಉಳಿದಂತೆ ಇತರೆ ನಗರಗಳಲ್ಲಿ 90 ರೂಪಾಯಿ ಆಸುಪಾಸಿನಲ್ಲಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ
ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್‌ಗೆ 113.0 ಯುಎಸ್ ಡಾಲರ್‌ನಂತೆ ವ್ಯವಹಾರ ನಡೆಸುತ್ತಿದೆ. ಭಾರತದಲ್ಲಿ ಇಂಧನ ಆಮದು ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ರಾಜ್ಯಗಳಲ್ಲಿ ಅಬಕಾರಿ ಸುಂಕಗಳನ್ನು ಸೇರಿಸಲಾಗುತ್ತದೆ, ನಂತರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.












Click it and Unblock the Notifications