ಫೆ.23: ರಷ್ಯಾ-ಉಕ್ರೇನ್ ಬಿಕ್ಕಟ್ಟಿನ ನಡುವೆಯೂ ಯಥಾಸ್ಥಿತಿ ಕಾಯ್ದುಕೊಂಡ ಇಂಧನ ದರ

ನವದೆಹಲಿ, ಫೆಬ್ರವರಿ 23: ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ದೇಶದಲ್ಲಿ ಇಂದು (ಫೆಬ್ರವರಿ 23, ಬುಧವಾರ) ಸಹ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತ ಆಗುತ್ತಿದ್ದರೂ, ಭಾರತದಲ್ಲಿ ಇಂಧನ ದರ ಸ್ಥಿರತೆ ಕಾಪಾಡಿಕೊಂಡಿದೆ.

ವರದಿಗಳ ಪ್ರಕಾರ, ರಷ್ಯಾ- ಉಕ್ರೇನ್ ಯುದ್ಧ ಭೀತಿಯ ನಡುವೆ ಕಚ್ಚಾ ತೈಲದ ಬೆಲೆಯು ಬ್ಯಾರೆಲ್‌ಗೆ ಬ್ರೆಂಟ್ 97.13 ಯುಎಸ್ ಡಾಲರ್ ಆಗಿದ್ದು, ಏಳು ವರ್ಷಗಳ ಗರಿಷ್ಠ ಮಟ್ಟವನ್ನು ಮುಟ್ಟಿದೆ. ರಷ್ಯಾ- ಉಕ್ರೇನ್ ಬಿಕ್ಕಟ್ಟು ಪೆಟ್ರೋಲ್ ಬೆಲೆಗಳನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದು RAC ಎಚ್ಚರಿಸಿದೆ.

ಸಾಮಾನ್ಯ ಹಣದುಬ್ಬರದ ಹಿನ್ನೆಲೆಯಿಂದಾಗಿ ಭಾರತದಲ್ಲಿ ತೈಲ ಬೆಲೆಗೆ ಇನ್ನಷ್ಟು ಉತ್ತೇಜನ ನೀಡಬಹುದು. ಅದರಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೆ ಕಾರಣ ಆಗುತ್ತದೆ. ಅಂದಹಾಗೆ ಕಳೆದ ವರ್ಷದ ನವೆಂಬರ್​ನಲ್ಲಿ ಸರ್ಕಾರದಿಂದ ತೈಲ ಬೆಲೆಯ ಅಬಕಾರಿ ಸುಂಕ ಇಳಿಕೆ ಮಾಡಿದ ಮೇಲೆ ಬೆಲೆ ಸ್ಥಿರವಾಗಿಯೇ ಇದೆ. ಆದರೆ ಕಚ್ಚಾ ತೈಲ ಬೆಲೆಯಲ್ಲಿ ಏರಿಕೆ ಆಗುತ್ತಲೇ ಇದೆ.

ಜಾರ್ಖಂಡ್​ ಸರ್ಕಾರ ದ್ವಿಚಕ್ರ ವಾಹನ ಸವಾರರಿಗೆ ಪೆಟ್ರೋಲ್ ಬೆಲೆಯಲ್ಲಿ 25 ರೂ. ಕಡಿತಗೊಳಿಸುವುದಾಗಿ ಘೋಷಿಸಿದ ನಂತರ ಜನವರಿ 26ರಿಂದ ಜಾರಿಗೆ ಬಂದಿದೆ. ಉಳಿದಂತೆ ಎಲ್ಲೆಡೆ ಇಂಧನ ದರ ಸ್ಥಿರವಾಗಿದ್ದು, ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಂದು ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.41 ರೂ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.41 ರೂ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಗುರಗಾಂವವ್‌ನಲ್ಲಿ ಲೀಟರ್ ಪೆಟ್ರೋಲ್ ದರ 95.81 ರೂಪಾಯಿ, ನೋಯ್ಡಾದಲ್ಲಿ ಲೀಟರ್ ಪೆಟ್ರೋಲ್ ದರ 95.51 ರೂಪಾಯಿ, ಭುವನೇಶ್ವರ್‌ದಲ್ಲಿ ಲೀಟರ್ ಪೆಟ್ರೋಲ್ ದರ 101.70 ರೂಪಾಯಿ, ಜೈಪುರದಲ್ಲಿ ಲೀಟರ್ ಪೆಟ್ರೋಲ್ ದರ 106.64 ರೂಪಾಯಿ ಇದೆ.

 ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂ.

ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್‌ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಇನ್ನು ಕರ್ನಾಟಕದ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.

 ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

 ಅಂತರರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ

ಅಂತರರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ

ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್​- ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ಪ್ರತಿ ಬ್ಯಾರೆಲ್ 97.13 ಯುಎಸ್ ಡಾಲರ್ ಆಗಿದ್ದು, ಏಳು ವರ್ಷಗಳ ಗರಿಷ್ಠ ಮಟ್ಟವನ್ನು ಮುಟ್ಟಿದೆ.

ಕಳೆದ ಭಾನುವಾರದಂದು ದಾಖಲೆಯ 149.12 ಪ್ರತಿ ಲೀಟರ್‌ಗೆ ತಲುಪಿದ ನಂತರ, ರಷ್ಯಾ- ಉಕ್ರೇನ್ ಬಿಕ್ಕಟ್ಟು ಪೆಟ್ರೋಲ್ ಬೆಲೆಗಳನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದು RAC ಎಚ್ಚರಿಸಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

Recommended Video

      ಅಫ್ಘಾನ್ ಸಿಖ್ ಹಿಂದೂ ನಿಯೋಗದೊಂದಿಗೆ ಪ್ರಧಾನಿ ಮೋದಿ ಸಂವಾದ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+