ಫೆ.25: ಜಾಗತಿಕ ಮಟ್ಟದಲ್ಲಿ ಕಚ್ಚಾತೈಲ ಭಾರೀ ಬೆಲೆ ಏರಿಕೆ; ದೇಶದಲ್ಲಿ ಇಂಧನ ದರ ಎಷ್ಟಿದೆ?
ನವದೆಹಲಿ, ಫೆಬ್ರವರಿ 25: ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಬ್ರೆಂಟ್ ಕಚ್ಚಾತೈಲ ಬೆಲೆ ಏಳು ವರ್ಷಗಳ ಬಳಿಕ ಮೊದಲ ಬಾರಿಗೆ ಪ್ರತಿ ಬ್ಯಾರೆಲ್‌ಗೆ 100 ಯುಎಸ್ ಡಾಲರ್ ಗಡಿ ದಾಟಿದೆ. ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ದೇಶದಲ್ಲಿ ಇಂದು (ಫೆಬ್ರವರಿ 25, ಶುಕ್ರವಾರ) ಸಹ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆಯಾಗುತ್ತಿದ್ದರೂ, ಭಾರತದಲ್ಲಿ ಇಂಧನ ದರ ಸ್ಥಿರತೆ ಕಾಪಾಡಿಕೊಂಡಿದೆ.
ವರದಿಗಳ ಪ್ರಕಾರ, ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್‌ಗೆ 101.46 ಯುಸ್ ಡಾಲರ್ನಂತೆ ವ್ಯವಹಾರ ನಡೆಸುತ್ತಿದೆ. ನಿನ್ನೆಯ ಸೆಷನ್ಗೆ ಹೋಲಿಸಿದರೆ 2.38 ಡಾಲರ್ ಹೆಚ್ಚಳವಾಗಿದೆ. ಆದರೆ ಭಾರತದಲ್ಲಿ ಕಳೆದ ವರ್ಷದ ನವೆಂಬರ್ನಲ್ಲಿ ಸರ್ಕಾರದಿಂದ ತೈಲ ಬೆಲೆಯ ಅಬಕಾರಿ ಸುಂಕ ಇಳಿಕೆ ಮಾಡಿದ ಮೇಲೆ ಬೆಲೆ ಸ್ಥಿರವಾಗಿಯೇ ಇದೆ.
ಜಾರ್ಖಂಡ್ ಸರ್ಕಾರ ದ್ವಿಚಕ್ರ ವಾಹನ ಸವಾರರಿಗೆ ಪೆಟ್ರೋಲ್ ಬೆಲೆಯಲ್ಲಿ 25 ರೂ. ಕಡಿತಗೊಳಿಸುವುದಾಗಿ ಘೋಷಿಸಿದ ನಂತರ ಜನವರಿ 26ರಿಂದ ಜಾರಿಗೆ ಬಂದಿದೆ. ಉಳಿದಂತೆ ಎಲ್ಲೆಡೆ ಇಂಧನ ದರ ಸ್ಥಿರವಾಗಿದ್ದು, ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಂದು ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.41 ರೂ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.
ಗುರಗಾಂವ್‌ನಲ್ಲಿ ಲೀಟರ್ ಪೆಟ್ರೋಲ್ ದರ 95.68 ರೂಪಾಯಿ, ನೋಯ್ಡಾದಲ್ಲಿ ಲೀಟರ್ ಪೆಟ್ರೋಲ್ ದರ 95.64 ರೂಪಾಯಿ, ಭುವನೇಶ್ವರ್‌ದಲ್ಲಿ ಲೀಟರ್ ಪೆಟ್ರೋಲ್ ದರ 101.80 ರೂಪಾಯಿ, ಜೈಪುರದಲ್ಲಿ ಲೀಟರ್ ಪೆಟ್ರೋಲ್ ದರ 106.89 ರೂಪಾಯಿ ಇದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂ.
ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.
ಹೈದರಾಬಾದ್ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್‌ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಇನ್ನು ಕರ್ನಾಟಕದ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಅಂತಾರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ
ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್- ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ವರದಿಗಳ ಪ್ರಕಾರ, ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್‌ಗೆ 101.46 ಯುಸ್ ಡಾಲರ್ನಂತೆ ವ್ಯವಹಾರ ನಡೆಸುತ್ತಿದೆ. ನಿನ್ನೆಯ ಸೆಷನ್ಗೆ ಹೋಲಿಸಿದರೆ 2.38 ಡಾಲರ್ ಹೆಚ್ಚಳವಾಗಿದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications