ಜ.26: ದೇಶದಲ್ಲಿ ಸ್ಥಿರತೆ ಕಾಯ್ದುಕೊಂಡ ಇಂಧನ ದರ

ನವದೆಹಲಿ, ಜನವರಿ 26: ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ದೇಶದಲ್ಲಿ ಇಂದು (ಜನವರಿ 26, ಬುಧವಾರ) ಸಹ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತ ಆಗುತ್ತಿದ್ದರೂ, ಭಾರತದಲ್ಲಿ ಇಂಧನ ದರ ಸ್ಥಿರತೆ ಕಾಪಾಡಿಕೊಂಡಿದೆ.

ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿರುವುದರಿಂದ ಬರೋಬ್ಬರಿ ಎರಡು ತಿಂಗಳುಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಾಣುವ ಸಾಧ್ಯತೆ ಇದೆ.

ವರದಿಗಳ ಪ್ರಕಾರ, ಜಾಗತಿಕ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್​ಗೆ 88 ಡಾಲರ್ ಆಗಿದೆ. ಬ್ರೆಂಟ್ ಕಚ್ಚಾ ಫ್ಯೂಚರ್ಸ್ 87 ಸೆಂಟ್ಸ್​ ಅಥವಾ ಶೇ.1ರಷ್ಟು ಮೇಲೇರಿ, 0543 GMTಯಲ್ಲಿ ಪ್ರತಿ ಬ್ಯಾರೆಲ್​ಗೆ 88.38 ಡಾಲರ್​ನಂತೆ ವ್ಯವಹಾರ ನಡೆಸುತ್ತಿತ್ತು. ಈ ಹಿಂದಿನ ಸೆಷನ್​ಗೆ ಹೋಲಿಸಿದರೆ ಶೇ.1.2ರಷ್ಟು ಹೆಚ್ಚಳ ಆಗಿತ್ತು.

ಸಾಮಾನ್ಯ ಹಣದುಬ್ಬರದ ಹಿನ್ನೆಲೆಯಿಂದಾಗಿ ಭಾರತದಲ್ಲಿ ತೈಲ ಬೆಲೆಗೆ ಇನ್ನಷ್ಟು ಉತ್ತೇಜನ ನೀಡಬಹುದು. ಅದರಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಗೆ ಕಾರಣ ಆಗುತ್ತದೆ. ಅಂದಹಾಗೆ ಕಳೆದ ವರ್ಷದ ನವೆಂಬರ್​ನಲ್ಲಿ ಸರ್ಕಾರದಿಂದ ತೈಲ ಬೆಲೆಯ ಅಬಕಾರಿ ಸುಂಕ ಇಳಿಕೆ ಮಾಡಿದ ಮೇಲೆ ಬೆಲೆ ಸ್ಥಿರವಾಗಿಯೇ ಇದೆ. ಆದರೆ ಹೊಸ ವರ್ಷದ ಶುರುವಿನಿಂದಲೂ ಕಚ್ಚಾ ತೈಲ ಬೆಲೆಯಲ್ಲಿ ಏರಿಕೆ ಆಗುತ್ತಲೇ ಇದೆ. ಒಂದು ವರದಿಗಳ ಪ್ರಕಾರ, ಕಳೆದ ನಾಲ್ಕು ವಾರದಲ್ಲಿ ಶೇ.25ರಷ್ಟು ಹೆಚ್ಚಳವಾಗಿದೆ.

ಜಾರ್ಖಂಡ್​ ಸರ್ಕಾರ ದ್ವಿಚಕ್ರ ವಾಹನ ಸವಾರರಿಗೆ ಪೆಟ್ರೋಲ್ ಬೆಲೆಯಲ್ಲಿ 25 ರೂ. ಕಡಿತಗೊಳಿಸುವುದಾಗಿ ಘೋಷಿಸಿದೆ. ಇದು ಜನವರಿ 26ರಿಂದ ಜಾರಿಗೆ ಬರಲಿದೆ. ಉಳಿದಂತೆ ಎಲ್ಲೆಡೆ ಇಂಧನ ದರ ಸ್ಥಿರವಾಗಿದ್ದು, ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಂದು ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

 ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂ.

ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

 ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂ.

ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್‌ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಇನ್ನು ಕರ್ನಾಟಕದ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.

 ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

 ಅಂತರರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ

ಅಂತರರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ

ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್​- ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ಕಳೆದ ವಾರ ಯುಎಸ್​ನ ಬೆಂಚ್​​ಮಾರ್ಕ್​ ಡಬ್ಲ್ಯೂಟಿಐ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರಲ್​​ಗೆ 70 ಡಾಲರ್​ಗಳಷ್ಟು ಕುಸಿದಿತ್ತು. ಹಾಗೆಯೇ, ಬ್ರೆಂಟ್​ ಕಚ್ಚಾತೈಲದ ದರ ಪ್ರತಿ ಬ್ಯಾರೆಲ್​​ಗೆ 72 ರೂ. ಕಡಿಮೆಯಾಗಿತ್ತು. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+