ಮಾ.7: ಜಾಗತಿಕವಾಗಿ ಕಚ್ಚಾತೈಲ ಬೆಲೆ ಏರಿಕೆ; ದೇಶದಲ್ಲಿ ಇಂಧನ ದರ ಏನಿದೆ?

ನವದೆಹಲಿ, ಮಾರ್ಚ್ 7: ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ಏಳು ವರ್ಷಗಳ ಬಳಿಕ ಮೊದಲ ಬಾರಿಗೆ ಪ್ರತಿ ಬ್ಯಾರೆಲ್‌ಗೆ 100 ಯುಎಸ್ ಡಾಲರ್ ಗಡಿ ದಾಟಿದೆ. ಇಂದು ಮತ್ತೆ ಸಾರ್ವಕಾಲಿಕ ಏರಿಕೆ ಕಂಡಿದೆ. ಈ ನಡುವೆ ಭಾರತದ ಸರ್ಕಾರಿ ತೈಲ ಕಂಪನಿಗಳು ಇಂದು ಸೋಮವಾರ (ಮಾರ್ಚ್, 7) ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿದ್ದು, ಇಂದು ಕೂಡ ಇಂಧನ ದರದಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ದೇಶದ ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಕಳೆದ ನವೆಂಬರ್​ 4ರಿಂದ ಇಂಧನ ದರ ಸ್ಥಿರವಾಗಿದೆ.

ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಗರಿಷ್ಠ ಮಟ್ಟದಲ್ಲಿರುವುದರಿಂದ ಮುಂದಿನ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಾಣುವ ಸಾಧ್ಯತೆ ಇದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಳಿತವಾಗುತ್ತಿದ್ದರೂ, ಅದು ಪೆಟ್ರೋಲ್​- ಡೀಸೆಲ್​ ಬೆಲೆಯ ಮೇಲೆ ಯಾವುದೇ ಪ್ರಭಾವ ಬೀರುತ್ತಿಲ್ಲ.

ವರದಿಗಳ ಪ್ರಕಾರ, ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್​ಗೆ 128.1 ಯುಸ್ ಡಾಲರ್​ನಂತೆ ವ್ಯವಹಾರ ನಡೆಸುತ್ತಿದೆ. ನಿನ್ನೆಯ ಸೆಷನ್​ಗೆ ಹೋಲಿಸಿದರೆ 9.96 ಡಾಲರ್ ಏರಿಕೆಯಾಗಿದೆ. ಆದರೆ ಭಾರತದಲ್ಲಿ ಕಳೆದ ವರ್ಷದ ನವೆಂಬರ್​ನಲ್ಲಿ ಸರ್ಕಾರದಿಂದ ತೈಲ ಬೆಲೆಯ ಅಬಕಾರಿ ಸುಂಕ ಇಳಿಕೆ ಮಾಡಿದ ಮೇಲೆ ಬೆಲೆ ಸ್ಥಿರವಾಗಿಯೇ ಇದೆ.

ಗುರಗಾಂವ್‌ನಲ್ಲಿ ಲೀಟರ್ ಪೆಟ್ರೋಲ್ ದರ 95.68 ರೂಪಾಯಿ, ನೋಯ್ಡಾದಲ್ಲಿ ಲೀಟರ್ ಪೆಟ್ರೋಲ್ ದರ 95.64 ರೂಪಾಯಿ, ಭುವನೇಶ್ವರ್‌ದಲ್ಲಿ ಲೀಟರ್ ಪೆಟ್ರೋಲ್ ದರ 102.10 ರೂಪಾಯಿ, ಜೈಪುರದಲ್ಲಿ ಲೀಟರ್ ಪೆಟ್ರೋಲ್ ದರ 107.06 ರೂಪಾಯಿ ಇದೆ.

 ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.41 ರೂ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.41 ರೂ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.51 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.79 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

 ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂ.

ರಾಜಸ್ಥಾನದ ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 114.01 ರೂಪಾಯಿ ಹಾಗೂ ಲೀಟರ್ ಡೀಸೆಲ್​ಗೆ 98.39 ರೂಪಾಯಿ ದಾಖಲಾಗಿದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 107.23 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.87 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 94.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.20 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.62 ರೂಪಾಯಿ ನಿಗದಿಯಾಗಿದೆ. ಗುಜರಾತ್‌ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 95.35 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 89.33 ರೂಪಾಯಿ ನಿಗದಿಯಾಗಿದೆ. ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್​ಗೆ 106.36 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 93.47 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 95.28 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.80 ರೂಪಾಯಿ ನಿಗದಿಯಾಗಿದೆ. ಇನ್ನು ಕರ್ನಾಟಕದ ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.

 ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪ್ರತಿದಿನ ಬೆಳಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

Recommended Video

    RCB ಈ ಬಾರಿ ಆಡಲಿರುವ ಪಂದ್ಯಗಳು ಹೀಗಿವೆ | Oneindia Kannada
     ಅಂತಾರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ

    ಅಂತಾರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ

    ಇದೀಗ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಮತ್ತೆ ಏರಿಕೆ ಕಾಣುತ್ತಿದೆ. ಆದರೂ, ರಾಷ್ಟ್ರಾದ್ಯಂತ ಮತ್ತೆ ಪೆಟ್ರೋಲ್​- ಡೀಸೆಲ್​ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂಧನ ದರ ಕಡಿಮೆಯಾದರೆ ವಾಹನ ಸವಾರರಿಗೆ ಮತ್ತಷ್ಟು ಭಾರ ಕಡಿಮೆಯಾಗಲಿದೆ. ವರದಿಗಳ ಪ್ರಕಾರ, ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್​ಗೆ 128.1 ಯುಸ್ ಡಾಲರ್​ನಂತೆ ವ್ಯವಹಾರ ನಡೆಸುತ್ತಿದೆ. ನಿನ್ನೆಯ ಸೆಷನ್​ಗೆ ಹೋಲಿಸಿದರೆ 9.96 ಡಾಲರ್ ಏರಿಕೆಯಾಗಿದೆ. ಆದರೆ ಭಾರತದಲ್ಲಿ ಕಳೆದ ವರ್ಷದ ನವೆಂಬರ್​ನಲ್ಲಿ ಸರ್ಕಾರದಿಂದ ತೈಲ ಬೆಲೆಯ ಅಬಕಾರಿ ಸುಂಕ ಇಳಿಕೆ ಮಾಡಿದ ಮೇಲೆ ಬೆಲೆ ಸ್ಥಿರವಾಗಿಯೇ ಇದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

    Notifications
    Settings
    Clear Notifications
    Notifications
    Use the toggle to switch on notifications
    • Block for 8 hours
    • Block for 12 hours
    • Block for 24 hours
    • Don't block
    Gender
    Select your Gender
    • Male
    • Female
    • Others
    Age
    Select your Age Range
    • Under 18
    • 18 to 25
    • 26 to 35
    • 36 to 45
    • 45 to 55
    • 55+