ಅ.13: ಸ್ಥಿರತೆ ಕಾಯ್ದುಕೊಂಡ ಪೆಟ್ರೋಲ್, ಡೀಸೆಲ್ ದರ; ನಿಮ್ಮ ನಗರದಲ್ಲಿ ಬೆಲೆಯೆಷ್ಟು?

ನವದೆಹಲಿ, ಅಕ್ಟೋಬರ್ 13: ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಇಂದು (ಅ.13, ಬುಧವಾರ) ಸಹ ಯಾವುದೇ ಬದಲಾವಣೆ ಮಾಡಿಲ್ಲ. ಸತತವಾಗಿ ಏರುಗತಿಯಲ್ಲಿ ಸಾಗುತ್ತಿದ್ದ ಇಂಧನ ದರದಲ್ಲಿ ಸ್ಥಿರತೆ ಕಾಪಾಡಿಕೊಂಡಿದೆ.

ಈಗಾಗಲೇ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ದಾಖಲಿಸಿರುವ ಇಂಧನ ದರವು, ಇಂದು ದೇಶದ ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ಸ್ಥಿರವಾಗಿದೆ. ನಿರಂತರವಾಗಿ ಏರುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ದರ ನೋಡಿ ವಾಹನ ಸವಾರರು ಆಕ್ರೋಶ ಹೊರಹಾಕುತ್ತಿದ್ದಾರೆ. ಒಂದು ಲೀಟರ್ ಪೆಟ್ರೋಲ್ ಬೆಲೆ 100ರ ಗಡಿ ದಾಟಿರುವುದಲ್ಲದೇ, ಒಂದು ಲೀಟರ್ ಡೀಸೆಲ್ ಬೆಲೆಯೂ ಸಹ 100ರ ಗಡಿ ದಾಟಿದೆ. ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

 ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 104.44 ರೂ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 104.44 ರೂ.

ದೇಶದಲ್ಲಿ ಸೋಮವಾರ (ಅ.11) ರಂದು ಲೀಟರ್​ ಪೆಟ್ರೋಲ್ ಬೆಲೆ 30 ಪೈಸೆ ಹಾಗೂ ಡೀಸೆಲ್ ಬೆಲೆಯಲ್ಲಿ 35 ಪೈಸೆ ಏರಿಕೆ ಆದ ಬಳಿಕ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬುಧವಾರ ಲೀಟರ್ ಪೆಟ್ರೋಲ್ ದರ 104.44 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.17 ರೂಪಾಯಿ ಇದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 110.41 ರೂಪಾಯಿ ಮತ್ತು ಲೀಟರ್ ಡೀಸೆಲ್ ದರ 101.03 ರೂಪಾಯಿ ಇದೆ. ಇನ್ನು, ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.79 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.59 ರೂಪಾಯಿ ಇದೆ.

 ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 108.08 ರೂ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 108.08 ರೂ.

ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 105.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 96.28 ರೂಪಾಯಿ ಇದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 113 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 102.29 ರೂಪಾಯಿ ಇದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 101.47 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.61 ರೂಪಾಯಿ ಇದೆ. ತಿರುವನಂತಪುಂನಲ್ಲಿ ಲೀಟರ್ ಪೆಟ್ರೋಲ್ ದರ 106.69 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.19 ರೂಪಾಯಿ ಇದೆ.

ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.64 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 101.66 ರೂಪಾಯಿ ಇದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 108.08 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.89 ರೂಪಾಯಿ ಇದೆ. ಇನ್ನು, ಗುಹಾವಟಿಯಲ್ಲಿ ಲೀಟರ್ ಪೆಟ್ರೋಲ್ ದರ 100.38 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 92.79 ರೂಪಾಯಿ ಇದೆ.

 ಹಾಸನದಲ್ಲಿ ಲೀಟರ್ ಪೆಟ್ರೋಲ್ ಬೆಲೆ 107.83 ರೂ.

ಹಾಸನದಲ್ಲಿ ಲೀಟರ್ ಪೆಟ್ರೋಲ್ ಬೆಲೆ 107.83 ರೂ.

ಕರ್ನಾಟಕ ರಾಜ್ಯದಲ್ಲಿ ಪೆಟ್ರೋಲ್​​ ಬೆಲೆಯೊಂದೇ ಅಲ್ಲದೇ ಇದೀಗ ಲೀಟರ್​ ಡೀಸೆಲ್ ​ಬೆಲೆಯೂ 100ರ ಗಡಿ ದಾಟಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿರುವುದರಿಂದ ಶಿವಮೊಗ್ಗದಲ್ಲಿ ಲೀಟರ್​ ಪೆಟ್ರೋಲ್ ಬೆಲೆ 109.69 ರೂಪಾಯಿ, ಲೀಟರ್​ ಡೀಸೆಲ್ ಬೆಲೆ 100.29 ರೂಪಾಯಿ ಇದೆ. ಬೀದರ್​ನಲ್ಲಿ ಲೀಟರ್​ ಪೆಟ್ರೋಲ್​ ದರ 108.97 ರೂಪಾಯಿ ಹಾಗೂ ಲೀಟರ್​ ಡೀಸೆಲ್ ಬೆಲೆ 99.73 ರೂಪಾಯಿಗೆ ನಿಗದಿಯಾಗಿದೆ.

ತುಮಕೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 108.14 ರೂಪಾಯಿ, ಲೀಟರ್ ಡೀಸೆಲ್ ಬೆಲೆ 98.74 ರೂಪಾಯಿ ಇದೆ. ಮೈಸೂರಿನಲ್ಲಿ ಲೀಟರ್ ಪೆಟ್ರೋಲ್ ಬೆಲೆ 107.57 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 98.43 ರೂಪಾಯಿ ಇದೆ. ಇನ್ನು ರಾಮನಗರದಲ್ಲಿ ಲೀಟರ್ ಪೆಟ್ರೋಲ್ ಬೆಲೆ 108.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 99.19 ರೂಪಾಯಿ ಇದೆ. ಹಾಸನದಲ್ಲಿ ಲೀಟರ್ ಪೆಟ್ರೋಲ್ ಬೆಲೆ 107.83 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 98.55 ರೂಪಾಯಿ ಇದೆ.

 ದಾವಣಗೆರೆಯಲ್ಲಿ ಲೀಟರ್ ಡೀಸೆಲ್ ಬೆಲೆ 100.44 ರೂ.

ದಾವಣಗೆರೆಯಲ್ಲಿ ಲೀಟರ್ ಡೀಸೆಲ್ ಬೆಲೆ 100.44 ರೂ.

ವಿಜಯಪುರದಲ್ಲಿ ಲೀಟರ್ ಪೆಟ್ರೋಲ್ ಬೆಲೆ 107.79 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 98.65 ರೂಪಾಯಿ ಇದೆ. ದಾವಣಗೆರೆಯಲ್ಲಿ ಲೀಟರ್ ಪೆಟ್ರೋಲ್ ಬೆಲೆ 109.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 100.44 ರೂಪಾಯಿ ಇದೆ. ಅದೇ ರೀತಿ ಧಾರವಾಡದಲ್ಲಿ ಲೀಟರ್ ಪೆಟ್ರೋಲ್ ಬೆಲೆ 107.95 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 98.75 ರೂಪಾಯಿ ಇದೆ. ಚಿತ್ರದುರ್ಗದಲ್ಲಿ ಲೀಟರ್ ಪೆಟ್ರೋಲ್ ಬೆಲೆ 109.85 ರೂಪಾಯಿ ಹಾಗೂ ಲೀಟರ್ ಡೀಸೆಲ್ ಬೆಲೆ 100.44 ರೂಪಾಯಿ ಇದೆ.

 ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

Recommended Video

      ABD ಮುಂದಿನ IPL ನಲ್ಲಿ RCB ಯಲ್ಲಿ ಇರ್ತಾರಾ? ಇಲ್ವಾ? | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+