ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅ.18: ಸತತ ಏರಿಕೆ ಕಾಣುತ್ತಿದ್ದ ಇಂಧನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ

|
Google Oneindia Kannada News

ನವದೆಹಲಿ, ಅಕ್ಟೋಬರ್​ 18: ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಇಂದು (ಅ.18, ಸೋಮವಾರ) ಯಾವುದೇ ಬದಲಾವಣೆ ಮಾಡಿಲ್ಲ. ಸತತ ನಾಲ್ಕು ದಿನಗಳಿಂದ ನಿರಂತರವಾಗಿ ಏರಿಕೆಯಾಗುತ್ತಲೇ ಇದ್ದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಸ್ಥಿರತೆ ಕಾಯ್ದುಕೊಂಡಿದೆ.

ಈಗಾಗಲೇ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ದಾಖಲಿಸಿರುವ ಇಂಧನ ದರವು, ಇಂದು ದೇಶದ ಪ್ರಮುಖ ಎಲ್ಲಾ ಮಹಾನಗರಗಳಲ್ಲಿಯೂ ಸಹ ಸ್ಥಿರವಾಗಿದೆ. ನಿರಂತರವಾಗಿ ಏರಿಕೆ ಕಾಣುತ್ತಿದ್ದ ಪೆಟ್ರೋಲ್ ಮತ್ತು ಡೀಸೆಲ್ ದರ ನೋಡಿ ವಾಹನ ಸವಾರರು ಆಕ್ರೋಶ ಹೊರಹಾಕುತ್ತಿದ್ದಾರೆ. ಒಂದು ಲೀಟರ್ ಪೆಟ್ರೋಲ್ ಬೆಲೆ 100ರ ಗಡಿ ದಾಟಿರುವುದಲ್ಲದೇ, ಒಂದು ಲೀಟರ್ ಡೀಸೆಲ್ ಬೆಲೆಯೂ ಸಹ 100ರ ಗಡಿ ದಾಟಿದೆ. ಪ್ರಮುಖ ನಗರಗಳಲ್ಲಿ ಇಂದು ಪೆಟ್ರೋಲ್, ಡಿಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ಪೆಟ್ರೋಲ್, ಡೀಸೆಲ್​ ಬೆಲೆಯಲ್ಲಿ ಯಾವುದೇ ಏರಿಳಿತಗಳಿಲ್ಲ

ಪೆಟ್ರೋಲ್, ಡೀಸೆಲ್​ ಬೆಲೆಯಲ್ಲಿ ಯಾವುದೇ ಏರಿಳಿತಗಳಿಲ್ಲ

ಇಂದು ಪೆಟ್ರೋಲ್ ಮತ್ತು ಡೀಸೆಲ್​ ಬೆಲೆಯಲ್ಲಿ ಯಾವುದೇ ಏರಿಳಿತಗಳಿಲ್ಲ. ಭಾನುವಾರ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ 35 ಪೈಸೆ ಹೆಚ್ಚಳ ಮಾಡಲಾಗಿತ್ತು. ಅದರ ನಂತರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 105.84 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.57 ರೂಪಾಯಿಗೆ ಏರಿಕೆ ಆಗಿದೆ. ಭಾರತದ ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರವನ್ನು ಭಾನುವಾರ ಸುಮಾರು 37 ಪೈಸೆ ಹೆಚ್ಚಳ ಮಾಡಲಾಗಿದೆ. ಆ ನಂತರ ಲೀಟರ್​ ಪೆಟ್ರೋಲ್​ ದರ 111.77 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 102.52 ರೂಪಾಯಿ ಇದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 109.53 ರೂ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 109.53 ರೂ.

ತೆಲಂಗಾಣದ ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 110.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 103.08 ರೂಪಾಯಿ ಇದೆ. ತಮಿಳುನಾಡಿನ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 103.01 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.92 ರೂಪಾಯಿ ಇದೆ. ಅದೇ ರೀತಿ ಕೋಲ್ಕತಾದಲ್ಲಿ ಲೀಟರ್ ಪೆಟ್ರೋಲ್ ದರ 106.43 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.68 ರೂಪಾಯಿ ಇದೆ.

ಇನ್ನು ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ದರ ಏರಿಕೆಯ ಬಳಿಕ ಲೀಟರ್ ಡೀಸೆಲ್ ದರವೂ ಸಹ 100ರ ಗಡಿ ದಾಟಿ ಮುನ್ನುಗ್ಗಿದೆ. ಲೀಟರ್ ಪೆಟ್ರೋಲ್ ದರ 109.53 ರೂಪಾಯಿಗೆ ಏರಿಕೆ ಆಗಿದ್ದರೆ, ಲೀಟರ್ ಡೀಸೆಲ್ ದರ 100.37 ರೂಪಾಯಿ ಆಗಿದೆ. ನಿರಂತರವಾಗಿ ಏರಿಕೆ ಕಾಣುತ್ತ ಗರಿಷ್ಠ ಮಟ್ಟ ತಲುಪಿದ ಇಂಧನ ದರ ಕಂಡು ವಾಹನ ಸವಾರರು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಅಂತರರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ

ಅಂತರರಾಷ್ಟ್ರೀಯ ಮಾನದಂಡಗಳ ಆಧಾರದಲ್ಲಿ ದರ ನಿಗದಿ

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

Recommended Video

ಇಂಡೋ-ಪಾಕ್ ಬದ್ಧವೈರಿಗಳ ಮಹಾಸಮರಕ್ಕೆ ಭಾರತೀಯರಿಂದ ವಿರೋಧ | Oneindia Kannada

English summary
State-owned oil companies have not changed their petrol and diesel rates today (October 18).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X